ಪಕ್ಷದಲ್ಲಿ ಡಿ.ಕೆ.ಶಿ, ಸಿದ್ದರಾಮಯ್ಯ ಬಣ ಇರುವುದು ಸತ್ಯ: ಸತೀಶ್ ಜಾರಕಿಹೊಳಿ
Team Udayavani, Mar 13, 2020, 1:25 PM IST
ಬೆಳಗಾವಿ : ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿ, ಸಿದ್ದರಾಮಯ್ಯ ಬಣ ಇರುವುದು ಸತ್ಯ ಆದರೆ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಕೆಪಿಸಿಸಿ ಕಾರ್ಯಾದ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಬೆಳಗಾವಿಗೆ ಆಗಮಿಸಿದ ಅವರು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಡಿ.ಕೆ.ಶಿವಕುಮಾರ ಕಾಂಗ್ರೆಸ್ ಅಧ್ಯಕ್ಷರು. ಸಿದ್ದರಾಮಯ್ಯನವರು ಪ್ರಭಾವಿ ನಾಯಕರು. ಪಕ್ಷದಲ್ಲಿ ಈಗ ಮೂವರು ಕಾರ್ಯಾದ್ಯಕ್ಷರು ಇದ್ದಾರೆ ದಲಿತ ಸಮುದಾಯದ ನಾಯಕರೊಬ್ಬರು ಕಾರ್ಯಾದ್ಯಕ್ಷರಾಗಬೇಕು ಎಂಬ ಬೇಡಿಕೆ ಇದೆ. ಎಲ್ಲರ ಸಮ್ಮುಖದಲ್ಲಿಯೇ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸುತ್ತೇವೆ ಎಂದು ಹೇಳಿದರು.
ಮನೆ ಎಂದ ಮೇಲೆ ಕೆಲವರಲ್ಲಿ ವೈಮನಸ್ಸು ಇರುವುದು ಸಹಜ. ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಗಾಗಿ ಗುಂಪುಗಾರಿಕೆ ನಡೆಯುತ್ತದೆ. ಸಿದ್ದರಾಮಯ್ಯ ಬಣ, ಡಿ.ಕೆ.ಶಿವಕುಮಾರ ಬಣ ಇರುವುದು ಸತ್ಯ. ಆದರೆ ಪಕ್ಷದ ವಿಚಾರ ಬಂದಾಗ ಎಲ್ಲರೂ ಒಂದಾಗುತ್ತೇವೆ ಎಂದು ಹೇಳಿದರು. ಚುನಾವಣೆಗೆ ಇನ್ನೂ ಮೂರು ವರ್ಷ ಬಾಕಿ ಇದೆ ಅಲ್ಲಿಯವರೆಗೆ ಪಕ್ಷವನ್ನು ಸಂಘಟಿಸಿ ಮರಳಿ ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇವೆ ಎಂದರು.
ಎಲ್ಲರಲ್ಲೂ ಬಹುದಿನಗಳ ಕಾತುರತೆಯಿತ್ತು. ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಚರ್ಚೆ ನಡೆದಿತ್ತು. ಹೈಕಮಾಂಡ್ ಇದನ್ನು ಗಂಭೀರವಾಗಿ ಪರಿಗಣಿಸಿ ಒಬ್ಬ ಅಧ್ಯಕ್ಷ ಹಾಗೂ ಮೂವರನ್ನು ಕಾರ್ಯಾಧ್ಯಕ್ಷರ ನೇಮಕ ಮಾಡಿದೆ ಎಂದರು. ಹುದ್ದೆಗೆ ಸಹಕಾರ ನೀಡಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ನವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು. ಡಿ.ಕೆ.ಶಿವಕುಮಾರ ಅವರಲ್ಲಿ ಉತ್ಸಾಹ ಇದೆ. ಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮೂವರು ಕಾರ್ಯಾಧ್ಯಕ್ಷರು ಕೆಪಿಸಿಸಿ ಅದ್ಯಕ್ಷರಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ನೀಡಬೇಕೆಂಬ ಆಸೆ ನಮಗೂ ಇದೆ. ಇನ್ನೂ ಒಂದು ಹುದ್ದೆ ಖಾಲಿ ಇದೆ. ಹೈಕಮಾಂಡ್ ಯಾವ ರೀತಿ ತೀರ್ಮಾನ ಮಾಡುತ್ತದೆ ಎನ್ನುವುದನ್ನು ಕಾದು ನೋಡಬೇಕು ಎಂದರು .ಜಿಲ್ಲೆಯಲ್ಲಿ ಗೋಕಾಕ ಸೇರಿದಂತೆ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಡೆ ಮುಖಮಾಡಿದ್ದಾರೆ. ಅದರಿಂದ ಯಾವುದೇ ನಷ್ಟವಾಗಿಲ್ಲ. ಉಪಚುನಾವಣೆಯಲ್ಲಿ ನಮ್ಮಶಕ್ತಿ ಪ್ರದರ್ಶನ ಮಾಡಿದ್ದೇವೆ. ಇನ್ನೂ ಮೂರು ವರ್ಷ ಕಾಲಾವಕಾಶವಿದೆ. ಪಕ್ಷ ಬಲಪಡಿಸುವ ತಂತ್ರ ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಚಿಹ್ನೆಯ ಮೇಲೆ ಚುನಾವಣೆ ಎದುರಿಸುವ ಕುರಿತು ಸ್ಥಳೀಯ ನಾಯಕರ,ಕಾರ್ಯಕರ್ತರ ಅಭಿಪ್ರಾಯ ಆಲಿಸಿ ನಂತರ ತೀರ್ಮಾಣ ಕೈಗೊಳ್ಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.