ರಾಜ್ಯ ವೀರಶೈವರೆಲ್ಲರೂ ಲಿಂಗಾಯತರೇ

ಲಿಂಗಾಯತ ಧರ್ಮ ಹೋರಾಟಗಾರರ ಸಂಸ್ಮರಣೋತ್ಸವ

Team Udayavani, Mar 21, 2022, 3:27 PM IST

15

ಬೆಳಗಾವಿ: ಕರ್ನಾಟಕದಲ್ಲಿರುವ ವೀರಶೈವರೂ ಸೇರಿ ಪ್ರತಿಯೊಬ್ಬರೂ ಲಿಂಗಾಯತರು. ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಮಾನ್ಯತೆ ಸಿಕ್ಕಾಗ ವೀರಶೈವರಿಗೂ ಎಲ್ಲ ಸೌಲಭ್ಯಗಳೂ ಸಿಗುತ್ತವೆ ಎಂದು ಬೆಂಗಳೂರಿನ ಕುಂಬಳಗೋಡದ ಚನ್ನಬಸವೇಶ್ವರ ಜ್ಞಾನಪೀಠದ ಜಗದ್ಗುರು ಶ್ರೀ ಚನ್ನಬಸವಾನಂದ ಸ್ವಾಮೀಜಿ ಹೇಳಿದರು.

ನಗರದ ಗಾಂಧಿ ಭವನದಲ್ಲಿ ರವಿವಾರ ನಡೆದ ಲಿಂ| ಮಹಾಜಗದ್ಗುರು ಲಿಂಗಾನಂದ ಸ್ವಾಮೀಜಿ ಹಾಗೂ ಡಾ. ಮಾತೆ ಮಹಾದೇವಿ ತಾಯಿ ಸಂಸ್ಮರಣೆ ನಿಮಿತ್ತ ಲಿಂಗಾಯತ ಧರ್ಮ ಹೋರಾಟದ ಮಹಾದಂಡನಾಯಕರ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ವಿಷಯ ನಮಗೆ ಅಲ್ಲವೇ ಅಲ್ಲ. ವೀರಶೈವ ಎಂದು ಇರುವವರೂ ಲಿಂಗಾಯತರೇ ಆಗಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಯಾರೂ ವೀರಶೈವರಿಲ್ಲ. ಸುಮ್ಮನೇ ವೀರಶೈವ ಲಿಂಗಾಯತ ಎಂದು ಹೇಳಿಕೊಳ್ಳುತ್ತಾರೆ ಹೊರತು ವೀರಶೈವರಲ್ಲ, ಬದಲಾಗಿ ಅವರೆಲ್ಲರೂ ಲಿಂಗಾಯತರು ಎಂದರು.

ಪಂಚಮಸಾಲಿ ಲಿಂಗಾಯತರು, ಬಣಜಿಗ ಲಿಂಗಾಯತರು, ಕುಂಬಾರ ಲಿಂಗಾಯತರಂತೆ ವೀರಶೈವ ಲಿಂಗಾಯತರಿದ್ದಾರೆ. ಲಿಂಗಾಯತ ಧರ್ಮಕ್ಕೆ ಮಾನ್ಯತೆ ಸಿಕ್ಕಾಗ ವೀರಶೈವರಿಗೂ ಧಾರ್ಮಿಕ ಅಲ್ಪಸಂಖ್ಯಾತ ಸೌಲಭ್ಯಗಳು ಸಿಗುತ್ತವೆ. ವೀರಶೈವರಿಗೂ ಸೇರಿಸಿ ಲಿಂಗಾಯತ ಧರ್ಮದ 100 ಒಳಗಪಂಗಡಗಳಿಗೂ ಧಾರ್ಮಿಕ ಅಲ್ಪಸಂಖ್ಯಾತ ಸೌಲಭ್ಯ ಸಿಗಬೇಕು. ವೀರಶೈವರನ್ನೂ ಜತೆಗೆ ಕರೆದುಕೊಂಡು ಹೋಗುತ್ತೇವೆ. ಸರ್ಕಾರದ ಎಲ್ಲ ಸವಲತ್ತುಗಳು ಅವರಿಗೂ ಸಿಗಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀರಶೈವರನ್ನು ಸೇರಿಸಿ ಎಲ್ಲ 100 ಉಪಪಂಗಡಗಳ ಹೆಸರು ಸೇರ್ಪಡೆ ಮಾಡಿ ಮತ್ತೂಮ್ಮೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ಸಿಗಲು ಬೊಮ್ಮಾಯಿ ಮುತುವರ್ಜಿ ವಹಿಸಬೇಕು ಎಂದರು.

ಒಂದು ಸಾವಿರ ಪುಟದ ನ್ಯಾ| ನಾಗಮೋಹನ್‌ ದಾಸ್‌ ವರದಿಯನ್ನು ಓದಲಾರದೇ ಕೇಂದ್ರ ಸರ್ಕಾರ ತಿರಸ್ಕರಿಸಿದೆ. ತಿರಸ್ಕಾರ ಮಾಡಿರುವ ಬಗ್ಗೆ ಸರ್ಕಾರ ನೀಡಿರುವ ಕಾರಣ ಸಮಂಜಸ ಆಗಿಲ್ಲ. ಕಾಂಗ್ರೆಸ್‌ ಸರ್ಕಾರ ಕಳುಹಿಸಿದ ವರದಿಯನ್ನು ನಿಮಗೆ ಒಪ್ಪಲು ಸಾಧ್ಯವಾಗಿಲ್ಲ ನಿಜ. ಆದರೆ ಈಗ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದ್ದು, ಈ ಸರ್ಕಾರ ನೀಡಿರುವ ವರದಿಯನ್ನು ಒಪ್ಪಿಕೊಂಡು ಧರ್ಮಕ್ಕೆ ಮಾನ್ಯತೆ ನೀಡಬೇಕು ಎಂದರು.

ಲಿಂಗಾಯತ ಧರ್ಮ ಸ್ಥಾಪಕ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಲಿಂ| ಲಿಂಗಾನಂದ ಸ್ವಾಮೀಜಿ, ಡಾ| ಮಾತೆ ಮಹಾದೇವಿ ತಾಯಿ ಭಾವಚಿತ್ರಕ್ಕೆ ಗೌರವ ಸಲ್ಲಿಸಲಾಯಿತು. ನಂತರ ಬಸವ ಧ್ವಜಾರೋಹಣವನ್ನು ಸ್ವಾಮೀಜಿಗಳ ಸಮ್ಮುಖದಲ್ಲಿ ಗಣ್ಯರು ನೆರವೇರಿಸಿದರು.

ಸಚ್ಚಿದಾನಂದ ಚಟ್ನಳ್ಳಿ ಸಂಪಾದಕತ್ವದ ಲಿಂಗದೇವರ ನೆನೆ ಮನವೆ ಹಾಗೂ ಹರನೆಡೆಯಿಂದ ಪರಮನೆಡೆಗೆ ಎಂಬ ಸಂಶೋಧನಾ ಕೃತಿಯ 3ನೇ ಆವೃತ್ತಿಯನ್ನು ಗಣ್ಯರು ಲೋಕಾರ್ಪಣೆಗೊಳಿಸಿದರು. ಶ್ರಾವಣಿ ಭಾಗ್ಯನವರ ಎಂಬ ಬಾಲಕಿಯ ವಚನ ನೃತ್ಯ ಗಮನಸೆಳೆಯಿತು.

ಉತ್ತರ ಮತಕ್ಷೇತ್ರದ ಶಾಸಕ ಅನಿಲ್‌ ಬೆನಕೆ ಆಗಮಿಸಿದ್ದರು. ಕೂಡಲಸಂಗಮ ಬಸವಧರ್ಮ ಪೀಠದ ಸದ್ಗುರು ಶ್ರೀ ಮಹಾದೇಶ್ವರ ಸ್ವಾಮೀಜಿ, ಬೆಂಗಳೂರಿನ ಲಕ್ಷ್ಮೀಪುರ ಬಸವಯೋಗಾಶ್ರಮದ ಶ್ರೀ ಅಲ್ಲಮಪ್ರಭು ಸ್ವಾಮೀಜಿ, ಅಖೀಲ ಭಾರತ ಸಸ್ಯಾಹಾರಿಗಳ ಒಕ್ಕೂಟದ ಶ್ರೀ ದಯಾನಂದ ಸ್ವಾಮೀಜಿ, ಬಸವಕಲ್ಯಾಣದ ಶ್ರೀ ಬಸವಪ್ರಭು ಸ್ವಾಮೀಜಿ ನೇತೃತ್ವ ವಹಿಸಿದ್ದರು. ಬೀದರ ಬಸವ ಮಂಟಪದ ಮಾತೆ ಸತ್ಯಾದೇವಿ, ಕಲಬುರ್ಗಿ ಬಸವ ಮಂಟಪದ ಶ್ರೀ ಪ್ರಭುಲಿಂಗ ಸ್ವಾಮೀಜಿ, ಬೆಳಗಾವಿ ಬಸವ ಮಂಟಪದ ಶ್ರೀ ಬಸವಪ್ರಕಾಶ ಸ್ವಾಮೀಜಿ, ಚಳ್ಳಿಕೇರಿ ಹಡಪದ ಅಪ್ಪಣ್ಣ ಪೀಠದ ಶ್ರೀ ಗುರುಸ್ವಾಮಿಗಳು ಸಮ್ಮುಖ ವಹಿಸಿದ್ದರು.

ಲಿಂಗಾಯತ ಧರ್ಮ ಸಮನ್ವಯ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಅವಿನಾಶ ಭೂಸಿಕರ, ಲಿಂಗಾಯತ ಮುಖಂಡರಾದ ಅಶೋಕ ಬೆಂಡಿಗೇರಿ, ಮಹಾಂತೇಶ ಗುಡಸ, ಆನಂದ ಗುಡಸ, ಮಾರಯ್ಯ ಗಡಗಲಿ, ರಾಷ್ಟ್ರೀಯ ಬಸವದಳ ಪದಾಧಿ ಕಾರಿಗಳು, ಸದಸ್ಯರಿದ್ದರು.

 

ಲಿಂಗಾಯತ ಸಮುದಾಯವದವರೇ ಆದ ಸಿಎಂ ಬಸವರಾಜ ಬೊಮ್ಮಾಯಿ ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗುವಂತೆ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಬೇಕು. ಲಿಂಗಾಯತ ಸಮಾಜದ ಜನರ ಹಿತ ಕಾಪಾಡಬೇಕು. ಸರ್ಕಾರಿ ಸೌಲಭ್ಯಗಳು ಸಿಗುವಂತೆ ಕೇಂದ್ರದ ಮೇಲೆ ಒತ್ತಡ ತರಬೇಕು.

-ಚನ್ನಬಸವಾನಂದ ಸ್ವಾಮೀಜಿ, ಕುಂಬಳಗೋಡದ ಚನ್ನಬಸವೇಶ್ವರ ಜ್ಞಾನಪೀಠ

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.