ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ಭಾಗಿ

ಶಾಲೆ ಬಿಟ್ಟ ಮಕ್ಕಳ ಮಾಹಿತಿಗೆ ಸಮೀಕ್ಷೆ

Team Udayavani, Feb 19, 2021, 3:54 PM IST

Student survey

ಚಿಕ್ಕೋಡಿ: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರ್ತಿಸಿ, ಅವರನ್ನು ಶಾಲಾ ಮುಖ್ಯವಾಹಿನಿಗೆ ಕರೆತಂದು ಸಾಕ್ಷರತೆ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಈಗಾಗಲೇ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಂಟು ವಲಯದಲ್ಲಿ ಸ್ಥಳೀಯ ಸಂಸ್ಥೆಯ ಸಿಬ್ಬಂದಿಗಳ ಮೂಲಕ ಶಾಲೆ ಬಿಟ್ಟ ಮಕ್ಕಳ ಗುರ್ತಿಸುವ ಸಮೀಕ್ಷೆ ಕಾರ್ಯ ಆರಂಭವಾಗಿದೆ.

ರಾಜ್ಯದ ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ಮತ್ತು ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯತ್‌ ಸಿಬ್ಬಂದಿ ಮೂಲಕ ಸಮೀಕ್ಷೆ ಕಾರ್ಯ ನಡೆಸಿದೆ. ಶಾಲೆ ಬಿಟ್ಟ ಮಕ್ಕಳನ್ನು ಹೇಗೆ ಗುರ್ತಿಸಬೇಕೆಂದು ಮೊಬೈಲ್‌ ಆ್ಯಪ್‌ ಸಿದ್ಧಪಡಿಸಿದೆ. ಸ್ಥಳೀಯ ಸಂಸ್ಥೆಯ  ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಮಕ್ಕಳ ಕುರಿತು ಆ್ಯಪ್‌ ದಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಒಳಪಡುವ ಅಥಣಿ, ಕಾಗವಾಡ, ರಾಯಬಾಗ, ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ, ಗೋಕಾಕ, ಮೂಡಲಗಿ ಸೇರಿ ಎಂಟು ವಲಯಗಳಲ್ಲಿ ಶಾಲೆ ಬಿಟ್ಟ ಮಕ್ಕಳ ಗುರ್ತಿಸುವ ಸಮೀಕ್ಷೆ ಜೋರಾಗಿ ನಡೆದಿದೆ. ಪಾಲಕರು ಸಮರ್ಪಕ ಮಾಹಿತಿ ನೀಡಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಶಾಲೆಯಿಂದ ಹೊರಗುಳಿಯುವ ಕಾರಣಗಳು: ಶಾಲೆ ಬಿಟ್ಟ ಮಕ್ಕಳನ್ನು ಗುರ್ತಿಸುವ ಸಮೀಕ್ಷೆ  ಕಾರ್ಯದಲ್ಲಿ ಸರ್ಕಾರ ಮೊಬೆ„ಲ್‌ ಆ್ಯಪ್‌ದಲ್ಲಿ ಕೆಲವೊಂದು ಕಾರಣ ಕೇಳಿದೆ. ಶಾಲೆ ದೂರವಿರುವುದು, ಸ್ವಂತ ಮನೆ ಕೆಲಸ, ಬೇರೆಯವರ ಮನೆಕೆಲಸ, ಇತರೆ ದುಡಿಮೆ ಕೆಲಸದಲ್ಲಿ ತೊಡಗಿಕೊಳ್ಳುವುದು, ಮದುವೆಯಾಗಿರುವುದು, ಹೆಣ್ಣು ಮಗು ಪ್ರೌಢಾವಸ್ಥೆಗೆ ಬಂದಿರುವುದು, ಶಾಲಾ ಪರಿಸರ ಆಕರ್ಷಿಣೆಯವಾಗಿಲ್ಲದಿರುವುದು, ವಲಸೆ ಜೀವನ, ಶಿಕ್ಷಕರ ಭಯ, ಬಾಲಕಾರ್ಮಿಕರಾಗಿರುವುದು, ಪೋಷಕರ ನಿರಾಸಕ್ತಿ ಸೇರಿದಂತೆ ಹಲವು ಕಾರಣ ಕೇಳಿದೆ. ಸಮೀಕ್ಷೆಗೆ ಹೋದ ಸಿಬ್ಬಂದಿಗಳು ಮೊಬೈಲ್‌ ಅಪ್ಲೀಕೇಶನ್‌ದಲ್ಲಿ ಸಮರ್ಪಕ ಮಾಹಿತಿ ಪಡೆಯಬೇಕಿದೆ.

ಶಾಲೆ ಬಿಟ್ಟ ಮಕ್ಕಳ ಬಗ್ಗೆ ವಿಶೇಷ ಗುರ್ತಿಸುವ ಸ್ಥಳಗಳು: ಹೋಟೆಲ್‌, ಛತ್ರ, ಚಿತ್ರಮಂದಿರ, ಇಟ್ಟಿಗೆ  ತಯಾರಿಕೆ ಘಟಕ, ಸಣ್ಣ ಕಾರ್ಖಾನೆಗಳು,  ಪುರಿಭಟ್ಟಿ, ತೋಟಗಾರಿಕೆ ಪ್ರದೇಶ, ಕ್ವಾರಿ, ರಸ್ತೆ ಕಾಮಗಾರಿ ಸ್ಥಳ, ಬುಡಕಟ್ಟು ಪ್ರದೇಶ, ಧಾರ್ಮಿಕ ಕೇಂದ್ರ, ಬಸ್‌ ಮತ್ತು ರೈಲು ನಿಲ್ದಾಣ, ಅನಾಥಾಶ್ರಮ, ಕಟ್ಟಡ ಕಾಮಗಾರಿ ನಡೆಯುವ ಸ್ಥಳಗಳಿಗೆ ಸಿಬ್ಬಂದಿಗಳು ಭೇಟಿ ನೀಡಿ ಸಮೀಕ್ಷೆ ಕಾರ್ಯ ನಡೆಸಲು ಸರ್ಕಾರ ಸೂಚಿಸಿದೆ.

ಶಾಲೆ ಬಿಟ್ಟ ಮಕ್ಕಳ ಕುರಿತು ಸ್ಥಳೀಯ ಸಂಸ್ಥೆಯ ಸಿಬ್ಬಂದಿಗಳು ನಡೆಸಿದ ಸಮೀಕ್ಷೆ ಕಾರ್ಯದಲ್ಲಿ ಮೊಬೈಲ್‌ ಅಪ್ಲೀಕೇಶನ್‌ದಲ್ಲಿ ದಾಖಲು ಮಾಡಿದ ನಿಖರ ಮಾಹಿತಿಯನ್ನು ದಿನಂಪ್ರತಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಸಮೀಕ್ಷೆ ಕಾರ್ಯ ಮುಗಿದ ಬಳಿಕ ಮಾಹಿತಿ ಶಿಕ್ಷಣ ಇಲಾಖೆಗೆ ರವಾನೆಯಾಗುತ್ತಿದೆ.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.