ಉಪ ಕದನ: ಮತದಾನ ಬಹಿಷ್ಕಾರಕ್ಕೆ ನಿರ್ಧಾರ
Team Udayavani, Nov 22, 2019, 11:28 AM IST
ಬೆಳಗಾವಿ: ಕೃಷ್ಣಾ ನದಿ ಪ್ರವಾಹಕ್ಕೆ ಸಿಲುಕಿದ ಗ್ರಾಮಸ್ಥರಿಗೆ ಬೆಳೆ ಹಾನಿ ಹಾಗೂ ಮನೆ ಹಾನಿ ಪರಿಹಾರ ಇನ್ನೂವರೆಗೆ ನೀಡಿಲ್ಲವೆಂದು ದೂರಿದ ಅಥಣಿ ವಿಧಾನಸಭಾ ಕ್ಷೇತ್ರದ ಜನವಾಡ ಗ್ರಾಮಸ್ಥರು ಡಿ. 5ರಂದು ನಡೆಯಲಿರುವ ಉಚುನಾವಣೆಯ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ ಗ್ರಾಮಸ್ಥರು, ಕೆಲ ತಿಂಗಳ ಹಿಂದೆಯಷ್ಟೇ ಕೃಷ್ಣಾ ನದಿ ಪ್ರವಾಹದಿಂದ ತತ್ತರಿಸಿರುವ ಜನರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ರಸ್ತೆ ರಿಪೇರಿ ಹಾಗೂ ಸರ್ವೇ ಮಾಡಿ ಸೇರಿಸಿದ ಮನೆಗಳನ್ನು ಎ, ಬಿ, ಸಿ ಗ್ರೇಡ್ ಕ್ಯಾಟಗರಿ ಎಂದು ಕಂಪ್ಯೂಟರ್ ಲಾಗಿನ್‌ದಿಂದ ತೆಗೆದು ಹಾಕಲಾಗಿದೆ. ಇನ್ನೂ ಕಂಪ್ಯೂಟರ್‌ದಲ್ಲಿ ಲಾಗಿನ್ ಮಾಡದೇ ಇದ್ದ ಸರ್ವೇ ಅರ್ಜಿಗಳು 100ರಿಂದ 200ರವರೆಗೆ ಬಾಕಿ ಉಳಿದುಕೊಂಡಿವೆ ಎಂದು ಆರೋಪಿಸಿದರು.
ಈ ಎಲ್ಲ ಸರ್ವೇ ಮಾಡಿದ ಮನೆಗಳು ಹಾಗೂ ಕಂಪ್ಯೂಟರ್‌ದಿಂದ ತೆಗೆದು ಹಾಕಿದ ಮನೆಗಳು ಸೇರ್ಪಡೆ ಆಗದೇ ಇದ್ದಿದ್ದರಿಂದ ಸರ್ಕಾರಿ ಮೂಲ ಸೌಕರ್ಯಗಳು ನೀಡಿಲ್ಲ. ಮುಳುಗಡೆ ಗ್ರಾಮ ಎಂದು ಹೇಳುತ್ತ ಸುಮಾರು 15 ವರ್ಷಗಳಿಂದ ಜಿಲ್ಲಾಡಳಿತ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿಲ್ಲ ಎಂದು ದೂರಿದರು. ಸರ್ಕಾರ ಹಾಗೂ ಜಿಲ್ಲಾಡಳಿತದ ನಿರ್ಲಕ್ಷದಿಂದ ಗ್ರಾಮಸ್ಥರು ಅನೇಕ ಸೌಕರ್ಯಗಳಿಂದ ವಂಚಿತಗೊಂಡಿದ್ದಾರೆ.
ಹೀಗಾಗಿ ಗ್ರಾಮಸ್ಥರು ಹಾಗೂ ಗ್ರಾಪಂ ಸದಸ್ಯರೆಲ್ಲರೂ ಡಿ. 5ರಂದು ನಡೆಯಲಿರುವ ಉಪಚುನಾವಣೆ ಮತದಾನ ಬಹಿಷ್ಕರಿಸಲಿದ್ದೇವೆ. ಜತೆಗೆ ಬೇಡಿಕೆ ಈಡೇರದಿದ್ದರೆ ನಿರಂತರ ಧರಣಿ ಹಾಗೂ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಮುಖಂಡರಾದ ಬಿಲಾಲಗೌಡ ಪಾಟೀಲ, ಗುರಬಸು ಕಾಂಬಳೆ, ಗುರುಪಾದ ಪಾಟೀಲ, ದರಬಾರ ಮಕಾನದಾರ, ಗುರುಪಾದ ಚಾಮಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.