![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
Team Udayavani, Dec 6, 2019, 11:41 AM IST
ಬೈಲಹೊಂಗಲ: ಪಟ್ಟಣದ ಇಂದಿರಾ ನಗರದ ಸಿದ್ಧರ ಕಾಲೋನಿಯಲ್ಲಿರುವ ಅಲೆಮಾರಿ ಸುಡಗಾಡ ಸಿದ್ಧ ಸಮಾಜ ಬಾಂಧವರಿಗೆ ನಿವೇಶನ ಹಕ್ಕು ಪತ್ರ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ತಾಲೂಕು ಮಟ್ಟದ ಅಲೆಮಾರಿ ಸುಡಗಾಡ ಸಿದ್ಧ ಸಮಾಜ ಸೇವಾ ಸಂಘ ವತಿಯಿಂದ ಉಪವಿಭಾಗಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.
ಈ ವೇಳೆ ಮುಖಂಡ ಮಾರುತಿ ಕೊಂಡೂರ ಮಾತನಾಡಿ, ಬಿಸಿಎಂ ಹಾಸ್ಟೇಲ್ ಹಿಂದೆ ಪುರಸಭೆಯ 178 ರಿ.ಸ.ನಂ.ಗೈರಾನ ಜಾಗೆಯಲ್ಲಿ 35 ವರ್ಷಗಳಿಂದ ಅಲೆಮಾರಿ ಸುಡಗಾಡ ಸಿದ್ಧ ಸಮಾಜ ಬಾಂಧವರು ವಾಸವಾಗಿದ್ದೇವೆ. ಇಲ್ಲಿಯವರೆಗೆ ಸರ್ಕಾರದ ಯಾವುದೇ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದು, ಗುಡಾರ್, ಶೆಡ್‌ಗಳಲ್ಲಿ ವಾಸವಾಗಿದ್ದೇವೆ ಎಂದರು.
ಈ ಜನರಿಗೆ ಬೆಳಕಿನ, ಕುಡಿಯುವ ನೀರಿನ, ಬೀದಿದೀಪ, ರಸ್ತೆ ವ್ಯವಸ್ಥೆ ಇಲ್ಲವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸಮಾಜ ಬಾಂಧವರ ಸಂಕಷ್ಟಕ್ಕೆ ನೆರವಾಗಬೇಕು. ಕೂಡಲೇ ವಸತಿ, ಮೂಲಭೂತ ಸೌಲಭ್ಯ ಕಲ್ಪಿಸಿಕೊಡಬೇಕು. ಒಂದು ವೇಳೆ ಮನವಿಗೆ ಸ್ಪಂದಿಸದಿದ್ದರೆ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸುವುದಾಗಿ ಎಚ್ಚರಿಸಿದರು. ಈ ವೇಳೆ ರಮೇಶ ಸಂಕಣ್ಣವರ, ಸಣ್ಣಮಲ್ಲಪ್ಪ ಡಕ್ಕನ್ನವರ, ಪಾಂಡುರಂಗ ಹಿಪ್ಪರಗಿ, ಬಾಳೇಶ ಡೊಂಕನ್ನವರ, ಕುಬೇರ ಕವಳೆ, ಸಾಯಿರಾಮ ಕವಳೆ ಇದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
You seem to have an Ad Blocker on.
To continue reading, please turn it off or whitelist Udayavani.