ಸುಳೇಭಾವಿ ಜೋಡಿ ಕೊಲೆ: ಇಬ್ಬರು ಪೇದೆಗಳ ಅಮಾನತು
Team Udayavani, Oct 7, 2022, 10:42 PM IST
ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಮಾರೀಹಾಳ ಠಾಣೆಯ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಡಾ. ಎಂ.ಬಿ. ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.
ಹೆಡ್ ಕಾನ್ಸಟೇಬಲ್ ಬಿ.ಎನ್. ಬಳಗಣ್ಣವರ, ಆರ್.ಎಸ್. ತಳೇವಾಡ ಎಂಬ ಪೇದೆಗಳನ್ನು ಅಮಾನತು ಮಾಡಲಾಗಿದೆ.
ಸುಳೇಭಾವಿ ಗ್ರಾಮದ ಬೀಟ್ ಪೊಲೀಸರಾಗಿದ್ದ ಈ ಇಬ್ಬರೂ ಕರ್ತವ್ಯ ಲೋಪ ಎಸಗಿದ್ದಾರೆ. ಗ್ರಾಮದಲ್ಲಿಯ ಆಗು ಹೋಗುಗಳ ಬಗ್ಗೆ ಸರಿಯಾಗಿ ಮಾಹಿತಿ ಸಂಗ್ರಹಿಸದೇ ಅದನ್ನು ಹತೋಟಿಗೆ ತರಲು ಪ್ರಯತ್ನಿಸಿಲ್ಲ. ಕರ್ತವ್ಯ ಲೋಪ ಎಸಗಿದ್ದರಿಂದ ಅಮಾನತು ಮಾಡಿದ್ದಾರೆ.
ಸುಳೇಭಾವಿ ಗ್ರಾಮದಲ್ಲಿ ಗುರುವಾರ ರಾತ್ರಿ ರಣಧೀರ ಮಹೇಶ ಅಲಿಯಾಸ್ ರಾಮಚಂದ್ರ ಮುರಾರಿ(26) ಹಾಗೂ ಪ್ರಕಾಶ ನಿಂಗಪ್ಪ ಹುಂಕರಿ ಪಾಟೀಲ(24) ಎಂಬ ಇಬ್ಬರು ಯುವಕರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.