3ನೇ ರವಿವಾರವೂ ಖಡಕ್ ಲಾಕ್‌ಡೌನ್
Team Udayavani, Jul 20, 2020, 11:09 AM IST
ಬೆಳಗಾವಿ: ಕೋವಿಡ್ ಸೋಂಕು ಹರಡದಂತೆ ತಡೆಯಲು ರಾಜ್ಯ ಸರ್ಕಾರ ಆದೇಶಿಸಿರುವ ಸಂಡೇ ಲಾಕ್‌ಡೌನ್ ಮೂರನೇ ರವಿವಾರವೂ ಯಶಸ್ವಿಯಾಗಿದ್ದು, ಇಡೀ ಬೆಳಗಾವಿ ನಗರ ಸೇರಿದಂತೆ ಜಿಲ್ಲೆ ಸಂಪೂರ್ಣವಾಗಿ ಬಂದ್ ಆಗಿತ್ತು.
ಲಾಕ್‌ಡೌನ್‌ದಿಂದಾಗಿ ನಗರದ ರಸ್ತೆಗಳು ಜನರಿಲ್ಲದೇ ಬಿಕೋ ಎನ್ನುತ್ತಿದ್ದವು. ಬೆರಳೆಣಿಕೆಯಷ್ಟು ವಾಹನಗಳ ಸಂಚಾರ ಹೊರತುಪಡಿಸಿದರೆ ಯಾವ ವಾಹನಗಳೂ ರಸ್ತೆ ಮೇಲೆ ಓಡಾಡುತ್ತಿರಲಿಲ್ಲ. ಸಿಬಿಟಿ ಹಾಗೂ ಕೇಂದ್ರ ಬಸ್ ನಿಲ್ದಾಣ ಸ್ತಬ್ಧವಾಗಿತ್ತು. ನಗರದ ಪ್ರಮುಖ ಮಾರ್ಗಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಚ್ಚಿ ರಸ್ತೆ ಬಂದ್ ಮಾಡಲಾಗಿತ್ತು. ಮೂರನೇ ರವಿವಾರವೂ ಲಾಕ್‌ಡೌನ್‌ಗೆ ಜನರಿಂದ ಉತ್ತಮ ಬೆಂಬಲ ವ್ಯಕ್ತವಾಯಿತು. ಆಟೋ ರಿಕ್ಷಾ, ಟ್ಯಾಕ್ಸಿ, ಖಾಸಗಿ ವಾಹನಗಳು, ದ್ವಿಚಕ್ರ ವಾಹನಗಳು ರಸ್ತೆ ಇಳಿಯಲಿಲ್ಲ. ನಗರದ ಜಿಲ್ಲಾಸ್ಪತ್ರೆ ಎದುರು ರೋಗಿಗಳ ಸಂಬಂಧಿಕರು ಅಲ್ಲಲ್ಲಿ ಕಾಣ ಸಿಗುತ್ತಿದ್ದರು. ಉಳಿದಂತೆ ನಿತ್ಯ ಗಿಜಗಿಡುತ್ತಿದ್ದ ನಗರದ ಎಲ್ಲ ರಸ್ತೆಗಳು ಖಾಲಿ ಖಾಲಿ ಆಗಿದ್ದವು.
ನಗರದ ರವಿವಾರ ಪೇಟೆ, ಪಾಂಗುಳ ಗಲ್ಲಿ, ಖಡೇಬಜಾರ, ಮಾರುತಿ ಗಲ್ಲಿ, ಗಣಪತಿ ಗಲ್ಲಿ, ಕಿರ್ಲೋಸ್ಕರ ರೋಡ್, ಬಾಪಟ ಗಲ್ಲಿ, ಬೋಗಾರವೇಸ್, ಅನಗೋಳ ಆರ್‌ಪಿಡಿ ರೋಡ್, ಶಹಾಪುರ, ಖಾಸಬಾಗ, ವಡಗಾಂವಿ ಸೇರಿದಂತೆ ಅನೇಕ ಪ್ರದೇಶಗಳು ಖಾಲಿ ಖಾಲಿ ಆಗಿದ್ದವು.
ಅಗತ್ಯ ವಸ್ತುಗಳಾದ ಕಿರಾಣಿ, ಔಷ ಧ, ಹಾಲಿನ ಅಂಗಡಿ, ಆಸ್ಪತ್ರೆ ಸೇರಿದಂತೆ ವೈದ್ಯಕೀಯ ಸೇವೆಗೆ ಸಂಬಂಧಿಸಿದ ಅಂಗಡಿಗಳು ಮಾತ್ರ ತೆರೆದಿದ್ದವು. ಅನವಶ್ಯಕವಾಗಿ ತಿರುಗಾಡುತ್ತಿದ್ದ ವಾಹನ ಸವಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.