ಯೋಜನೆ ಪೂರ್ತಿಗೆ ಬೆಂಬಲಿಸಿ
Team Udayavani, Apr 9, 2021, 8:18 PM IST
ಮೂಡಲಗಿ: ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿಯವರು ಬೆಳಗಾವಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಲವಾರು ವಿನೂತನ ಯೋಜನೆಗಳನ್ನು ಅನುಷ್ಠಾನ ಮಾಡಿದ್ದರು.
ವಿಧಿಯಾಟದಿಂದ ಅವರನ್ನು ನಾವಿಂದು ಕಳೆದುಕೊಂಡಿದ್ದು ಅವರು ಬಿಟ್ಟು ಹೋದ ಹಲವಾರು ಕಾರ್ಯಕ್ರಮಗಳು ನಮ್ಮನ್ನು ಇನ್ನೂ ಸೆಳೆಯುತ್ತಲಿವೆ. ದಿ|ಅಂಗಡಿ ಅವರ ಹಾಗೂ ಬಿಜೆಪಿ ಸರಕಾರಗಳ ಸಾಧನೆಗಳನ್ನು ಗುರುತಿಸಿ ತಮ್ಮನ್ನು ಲೋಕಸಭೆಗೆ ಚುನಾಯಿಸುವಂತೆ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಮನವಿ ಮಾಡಿದರು. ಇಲ್ಲಿಯ ಶಿವಬೋಧರಂಗ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಸಂಜೆ ಜರುಗಿದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ಸುರೇಶ ಅಂಗಡಿ ಮೊದಲಿನಿಂದಲೂ ಕಾರ್ಯಕರ್ತರ ಪಡೆಯನ್ನು ಹೊಂದಿ ಜನಪರ ವ್ಯಕ್ತಿತ್ವವನ್ನು ರೂಢಿಸಿಕೊಂಡಿದ್ದರು. 2004 ರಿಂದ ಬೆಳಗಾವಿ ಲೋಕಸಭಾ ಸದಸ್ಯರಾಗಿ ಸಮಗ್ರ ಪ್ರಗತಿಗೆ ಶ್ರಮಿಸಿದ್ದರು. ಅಲ್ಲದೆ ನರೇಂದ್ರ ಮೋದಿಯವರ ಸಂಪುಟದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ನಿಯೋಕ್ತಿಗೊಂಡರು. ಪಕ್ಷ ಹಾಗೂ ಜನರ ಸೇವೆಯನ್ನು ಮಾಡಿಕೊಂಡು ಜನಮೆಚ್ಚಿದ ಸಂಸದರು ಎಂಬ ಖ್ಯಾತಿಗೆ ಒಳಗಾದರು.
ಕೋವಿಡ್ ಸಮಯದಲ್ಲಿ ಎಷ್ಟೋ ಸಾರಿ ಹೇಳಿದರೂ ಪಕ್ಷ ಹಾಗೂ ಸರಕಾರದ ಕೆಲಸದಲ್ಲಿ ತೊಡಗಿಸಿಕೊಂಡು ತಮ್ಮ ಆರೋಗ್ಯದ ಕಡೆಗೆ ಗಮನ ನೀಡಲಿಲ್ಲ. ಅ ಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೋದವರು ಮರಳಿ ಬರಲಿಲ್ಲ. ಕೊರೊನಾ ತುತ್ತಿಗೆ ಬಲಿಯಾದರು. ಇವರ ಆತ್ಮಕ್ಕೆ ಶಾಂತಿ ದೊರೆಯಲು ನಿಮ್ಮ ಮನೆ ಮಗಳಾದ ನನಗೆ ತಮ್ಮ ಅಮೂಲ್ಯ ಮತ ನೀಡಿ ಸುರೇಶ ಅಂಗಡಿಯವರು ರೂಪಿಸಿದ ಯೋಜನೆಗಳ ಕಾಮಗಾರಿಗಳು ಪೂರ್ಣಗೊಳ್ಳಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.
ಗೋಕಾಕ ಹಾಗೂ ಅರಭಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ತಮಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಕೈ ಬಲ ಪಡಿಸಲು ಜನ ಸೇವೆಗೆ ಆಶೀರ್ವಾದ ಮಾಡಬೇಕು. ಕೆಲ ಕಾರಣಾಂತರಗಳಿಂದ ಮಾಚಿ ಸಚಿವ ರಮೇಶ ಜಾರಕಿಹೊಳಿ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿಲ್ಲ. ಅವರು ಈಗಾಗಲೇ ತಮ್ಮ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದು ಎಲ್ಲರೂ ನಮ್ಮೊಂದಿಗೆ ಕೈ ಜೋಡಿಸಿದ್ದಾರೆ.
ಇದರಿಂದ ನಮಗೆ ಆನೆ ಬಲ ಬಂದಂತಾಗಿದೆ. ಇನ್ನೆರಡು ದಿನಗಳಲ್ಲಿ ಹಿರಿಯ ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುತ್ತಾರೆಂದು ಅವರು ಕಾರ್ಯಕರ್ತರಿಗೆ ವಿಶ್ವಾಸ ತುಂಬಿದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಮೇ 17 ರಂದು ನಡೆಯುವ ಲೋಕಸಭಾ ಉಪಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಲು ಬಿಜೆಪಿ ಮತ ನೀಡಿ. ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿದರೆ ಯಾವುದೇ ಪ್ರಯೋಜನವಿಲ್ಲ ಎಂದರು.
ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತ ಪರವಾಗಿದ್ದು ರೈತರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದೆ. ಕಳೆದ ಲೋಕಸಭಾ ಚುನಾವಣೆಗಿಂತ ಈ ಬಾರಿ ಹೆಚ್ಚಿನ ಮತಗಳ ಮುನ್ನಡೆ ದೊರಕಿಸಿಕೊಡಲು ಕಾರ್ಯಕರ್ತರು ಶ್ರಮಿಸಬೇಕೆಂದು ಅವರು ಕೋರಿದರು. ವೇದಿಕೆಯಲ್ಲಿ ಅರಭಾಂವಿ ಮಂಡಲ ಬಿಜೆಪಿ ಅಧ್ಯಕ್ಷ ಮಹದೇವ ಶೆಕ್ಕಿ, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಮುಕ್ತಾರ ಪಠಾಣ, ಜಿಪಂ ಸದಸ್ಯ ಗೋವಿಂದ ಕೊಪ್ಪದ, ಸುಭಾಸ ಪಾಟೀಲ, ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕರಾದ ನಾಗಪ್ಪ ಶೇಖರಗೋಳ, ನಿಂಗಪ್ಪ ಕುರಬೇಟ, ದಾಸಪ್ಪ ನಾಯಿಕ, ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಈರಣ್ಣ ಅಂಗಡಿ, ಪ್ರಕಾಶ ಮಾದರ, ಬೆಂಗಳೂರದ ಶೇಖರರೆಡ್ಡಿ, ನವಿನಕುಮಾರ, ಕೃಷ್ಣಮೂರ್ತಿ ಬಿಜೆಪಿ ಪದಾಧಿ ಕಾರಿಗಳು, ಪುರಸಭೆ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.