ಪ್ರತಿಷ್ಠಿತ ಸುರಪುರದ ಪಾರುಪತ್ಯಕ್ಕೆ ನಾಯಕರು ಯಾರು?


Team Udayavani, May 6, 2018, 6:50 AM IST

surapur-assembly-constituen.jpg

ಜಿದ್ದಾಜಿದ್ದಿನ ಚುನಾವಣೆಗೆ ಸುರಪುರ ಮತಕ್ಷೇತ್ರ ಹೆಸರುವಾಸಿ. ಕ್ಷೇತ್ರದಲ್ಲಿ ವಾಲ್ಮೀಕಿ ಜನಾಂಗದವರ ಪಾರುಪತ್ಯವಿದೆ. 
ಸ್ವಾತಂತ್ರಾéನಂತರ ಇಲ್ಲಿಯವರೆಗೆ ಕ್ಷೇತ್ರದಲ್ಲಿ ವಾಲ್ಮೀಕಿ ಜನಾಂಗದವರೇ ಶಾಸಕರಾಗಿರುವುದು ವಿಶೇಷ. ಪಕ್ಷಕ್ಕಿಂತ ವ್ಯಕ್ತಿಗಳ ನಡುವಿನ ಚುನಾವಣೆ ಎಂದು ವಿಶ್ಲೇಷಿಸಲಾಗುತ್ತಿದೆ. ಕಾಂಗ್ರೆಸ್‌ ಅಭ್ಯರ್ಥಿ, ಹಾಲಿ ಶಾಸಕ ರಾಜಾವೆಂಕಟಪ್ಪ ನಾಯಕ ಹಾಗೂ ಬಿಜೆಪಿ ಅಭ್ಯರ್ಥಿ ನರಸಿಂಹ ನಾಯಕ (ರಾಜೂಗೌಡ) ನಡುವೆ ನೇರಾ ಹಣಾಹಣಿ ಏರ್ಪಟ್ಟಿದೆ. ಜೆಡಿಎಸ್‌  ಅಭ್ಯರ್ಥಿಯಾಗಿ ರಾಜಾ ಕೃಷ್ಣಪ್ಪ ನಾಯಕ ಅವರು ಕಣದಲ್ಲಿರುವುದರಿಂದ ಚುನಾವಣೆ ಕಾವು ಏರಿದೆ.

2008ರಲ್ಲಿ ಬಿಜೆಪಿಯಿಂದ ರಾಜೂಗೌಡ, 2013ರಲ್ಲಿ ಕಾಂಗ್ರೆಸ್‌ನಿಂದ ರಾಜಾವೆಂಕಟಪ್ಪ ನಾಯಕ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. 2018ರಲ್ಲಿ 2ನೇ ಬಾರಿಗೆ ಶಾಸಕರಾಗಲು ರಾಜಾವೆಂಕಟಪ್ಪ ನಾಯಕ ಬಯಸಿದರೆ, ರಾಜೂಗೌಡ 2013ರ ಸೋಲಿನ ಸೇಡು ತೀರಿಸಿಕೊಳ್ಳಲು ಕಾತರರಾಗಿದಾರೆ. ಕಳೆದ 3 ವಿಧಾನಸಭೆ ಚುನಾವಣೆಯಲ್ಲಿ ಇವರಿಬ್ಬರೂ ಎದುರಾಳಿಯಾಗಿದ್ದರು. ಈಗ ನಾಲ್ಕನೇ ಬಾರಿಯೂ ಎದುರಾಳಿಯಾಗಿದ್ದು,ಚುನಾವಣೆ ಜಿದ್ದಾಜಿದ್ದಿನಿಂದ ಕೂಡಿದೆ.

ಜಿಲ್ಲೆಯಲ್ಲಿಯೇ ಅತಿ ದೊಡ್ಡ ಕ್ಷೇತ್ರವಾಗಿದೆ. ಸ್ವಾತಂತ್ರ್ಯಹೋರಾಟದಲ್ಲಿ ಸುರಪುರ ರಾಜರ ಕೊಡುಗೆ ಅಪಾರವಾಗಿದೆ. ಗ್ರಾಮೀಣ ಪ್ರದೇಶದ ಜನರು ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಸುರಪುರ ತಾಲೂಕಿನಿಂದ ಬೇರ್ಪಟ್ಟು ಹುಣಸಗಿ ಹೊಸ ತಾಲೂಕಾಗಿದೆ.

ನಾರಾಯಣಪುರ ಜಲಾಶಯ, ಬೋನಾಳ ಪಕ್ಷಿಧಾಮ, ತಿಂಥಣಿ ಮೌನೇಶ್ವರ ಹೀಗೆ ಅನೇಕ ಪ್ರೇಕ್ಷಣಿಯ ಸ್ಥಳಗಳನ್ನು ಹೊಂದಿದೆ. ಕೆಲಸವಿಲ್ಲದೆ ಮಹಾನಗರಗಳಿಗೆ ಗುಳೆ ಹೋಗುವವರ ಸಂಖ್ಯೆ ಹೆಚ್ಚಿದೆ. ಶೈಕ್ಷಣಿಕ, ಕೈಗಾರಿಕೆ ಕ್ಷೇತ್ರದಲ್ಲಿ ಸಾಕಷ್ಟು ಹಿಂದುಳಿದಿದೆ.

ನಿರ್ಣಾಯಕ ಅಂಶವೇನು?
ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿಗಳು ವಾಲ್ಮೀಕಿ ಸಮಾಜಕ್ಕೆ ಸೇರಿದವರಾಗಿದ್ದು, ಸಾಮಾನ್ಯವಾಗಿ ಆ ಮತಗಳು ಇಬ್ಬರಿಗೂ ಬೀಳಲಿವೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಕುರುಬರ ಮತ ಪಡೆಯಲು ಇಬ್ಬರು ಅಭ್ಯರ್ಥಿಗಳು ರಣತಂತ್ರ ರೂಪಿಸುತ್ತಿದ್ದಾರೆ. ಯಾರು ಕುರುಬರ ಮತಗಳನ್ನು ಪಡೆಯಲು ಯಶಸ್ವಿಯಾಗುತ್ತಾರೆ ಅವರಿಗೆ ಜಯ ಖಚಿತ ಎನ್ನಲಾಗಿದೆ.

ಮತಕ್ಷೇತ್ರದಲ್ಲಿ ರಾಜಾ ವೆಂಕಟಪ್ಪ ನಾಯಕ ಅವರ ಪರ ಆಡಳಿತ ವಿರೋಧಿ ಅಲೆ ಇದೆ.ಮತದಾರರು ಬಿಜೆಪಿ ಪರ ಒಲವು ತೋರುತ್ತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಮತದಾರರು ನೂರರಷ್ಟು ಗೆಲುವು ನೀಡಲಿದ್ದಾರೆ ಎಂಬ ವಿಶ್ವಾಸವಿದೆ.
– ನರಸಿಂಹ ನಾಯಕ (ರಾಜೂಗೌಡ),ಬಿಜೆಪಿ ಅಭ್ಯರ್ಥಿ

ಐದು ವರ್ಷದ ಆಡಳಿತದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ.ನೀರಾವರಿ ಯೋಜನೆ ಕೈಗೊಂಡಿದ್ದೇನೆ. ಈ ಎಲ್ಲ ವಿಷಯಗಳು ನನ್ನ ಗೆಲುವಿಗೆ ಸಹಕಾರಿಯಾಗಲಿವೆ. ಕ್ಷೇತ್ರದಾದ್ಯಂತ ಮತದಾರರು ಕಾಂಗ್ರೆಸ್‌ ಪರ ಒಲವು ವ್ಯಕ್ತಪಡಿಸುತ್ತಿದ್ದಾರೆ.
– ರಾಜಾ ವೆಂಕಟಪ್ಪ ನಾಯಕ, ಕಾಂಗ್ರೆಸ್‌ ಅಭ್ಯರ್ಥಿ

ಮಾಜಿ ಸಿಎಂ ಕುಮಾರಸ್ವಾಮಿ ಅವರ 20 ತಿಂಗಳ ಆಡಳಿತದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳನ್ನು ಜನರು ಈಗಲೂ ನೆನಪಿಸಿಕೊಳ್ಳುತ್ತಾರೆ. ಈ ಬಾರಿ ಜೆಡಿಎಸ್‌ಗೆ ಅವಕಾಶ ನೀಡುತ್ತಾರೆ ಎಂಬ ದೃಢವಾದ ನಂಬಿಕೆ ಇದೆ.
– ರಾಜಾ ಕೃಷ್ಣಪ್ಪ ನಾಯಕ, ಜೆಡಿಎಸ್‌ ಅಭ್ಯರ್ಥಿ

– ರಾಜೇಶ ಪಾಟೀಲ ಯಡ್ಡಳ್ಳಿ

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.