50 ವರ್ಷ ಹಳೆಯ ಶಾಲಾ ಕಟ್ಟಡ ಪುನಃಶ್ಚೆತನಕ್ಕೆ ಬಜೆಟ್‌ನಲ್ಲಿ ವಿಶೇಷ ಅನುದಾನ
Team Udayavani, Feb 9, 2021, 6:04 PM IST
ಬೆಳಗಾವಿ: 50 ವರ್ಷಕ್ಕಿಂತ ಹಳೆಯ ಶಾಲಾ ಕಟ್ಟಡಗಳ ಪುನಃಶ್ಚೇತನಕ್ಕೆ ಈ ಬಾರಿ ಬಜೆಟ್ ನಲ್ಲಿ ವಿಶೇಷ ಅನುದಾನ ಮೀಸಲಿಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶಕುಮಾರ್ ತಿಳಿಸಿದರು.
ಖಾನಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಹೊಸದಾಗಿ ನಿರ್ಮಿಸಿರುವ ವಿಜ್ಞಾನ ಉದ್ಯಾನ ವೀಕ್ಷಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಲು ಮನವಿ ಮಾಡಲಾಗುವುದು. ಇನ್ನುಳಿದಂತೆ ಶಿಥಿಲಾವಸ್ಥೆಯಲ್ಲಿರುವ ಶಾಲೆಗಳ ಕಟ್ಟಡ ನಿರ್ಮಾಣ, ಹಣಕಾಸಿನ ಲಭ್ಯತೆ ಮೇರೆಗೆ ಆದ್ಯತೆ ನೀಡಲಾಗುವುದು. ಬೆಂಗಳೂರಿನಿಂದ ಹಿಡಿದು ರಾಜ್ಯದ ಕೊನೆಯ ಶಾಲೆಯಲ್ಲಿಯೂ ಕನ್ನಡವನ್ನು ಭಾಷೆಯಾಗಿ ಕಲಿಸಬೇಕು. ಈ ನೆಲದ ಕಾನೂನು ಅನ್ವಯ ಭಾಷೆ ಕಲಿಸಲು ಅಗತ್ಯ ಕ್ರಮ ಕೈಗೊಂಡು ಕನ್ನಡ ಕಲಿಸುವ ಶಿಕ್ಷಕರನ್ನು ಕಳುಹಿಸಲಾಗುವುದು. ಎಲ್ಲ ಕಡೆ ಸಂಖ್ಯೆ ಪಡೆದು ಕೊರತೆ ಇರುವ ಶಾಲೆಗೆ ಶಿಕ್ಷಕರನ್ನು ಕಳುಹಿಸಲಾಗುವುದು ಎಂದರು.
ಜನವರಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಿದ್ದೇವೆ. ಅಲ್ಲಿಯ ಹಾಜರಾತಿ ಪಡೆದು ಮುಂದೆ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಮುಖ್ಯವಾಗಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮಕ್ಕಳು ಕಲಿಕೆಯಿಂದ ದೂರ ಉಳಿಯುತ್ತಿದ್ದಾರೆ. ಮತ್ತೆ ಅವರನ್ನು ಮುಖ್ಯವಾಹಿನಿಗೆ ಕರೆ ತರುವುದು ಕಷ್ಟಕರ.
ಇದನ್ನೂ ಓದಿ :ಮರಾಠಿ ಶಾಲಾ ಮಕ್ಕಳಿಂದ ನಾಡಗೀತೆ ಹಾಡಿಸಿದ ಶಿಕ್ಷಣ ಸಚಿವ ಸುರೇಶ ಕುಮಾರ
ಕಳೆದ ವರ್ಷ ತರಗತಿ ಆರಂಭಿಸದ್ದಕ್ಕೆ ಗ್ರಾಮೀಣ, ನಗರ ಪ್ರದೇಶದಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದೆ. ಜತೆಗೆ ಇನ್ನು ತಾಲೂಕಿನಲ್ಲಿ ಬಾಲ್ಯ ವಿವಾಹ ಸಂಖ್ಯೆ ಅಧಿಕವಾಗಿದೆ. ಇದೊಂದು ಸಾಮಾಜಿಕ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಜಾಗೃತಿ ಮೂಡಿಸಲಾಗುವುದು. ಅರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ಜತೆ ಚರ್ಚಿಸಿ ಇನ್ನುಳಿದ ತರಗತಿ ಆರಂಭಿಸಲು ಕ್ರಮ ವಹಿಸಲಾಗುವುದು. 8, 9, 10 ಹಾಗೂ 11ನೇ ತರಗತಿಯನ್ನು ಇನ್ನು ಮುಂದಿನ ದಿನಗಳಲ್ಲಿ ಪೂರ್ಣಾವಧಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಈ ಸಮಿತಿಯ ಸಲಹೆ ಪಡೆಯಲಾಗುವುದು ಎಂದರು.
ಪ್ರತಿಯೊಬ್ಬ ಶಿಕ್ಷಕರು ತಯಾರಾಗಿ ನೋಟ್ಸ್ ಮಾಡಿಕೊಂಡು ಹೋದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಿದೆ. ಮಕ್ಕಳು ಯಾವ ವಿಷಯದಲ್ಲಿ ದುರ್ಬಲ ಎನ್ನುವ ಮಾಹಿತಿ ಪಡೆದು ಆ ವಿಷಯಕ್ಕೆ ಒತ್ತು ನೀಡಿ ಕಲಿಸಬೇಕಿದೆ. ಬರುವ ಶೈಕ್ಷಣಿಕ ವರ್ಷದಿಂದ ಯಾವ ಮಕ್ಕಳೂ ಯಾವ ವಿಷಯದಲ್ಲಿಯೂ ಕಲಿಕೆಯಲ್ಲಿ ಹಿಂದೆ ಬೀಳಬಾರದು ಎಂಬುದಕ್ಕೆ ಹೆಚ್ಚು ಆದ್ಯತೆ ನೀಡಲಾಗುವುದು. ನಮ್ಮ ಶಾಲೆಯಲ್ಲಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಎರಡೂ ಇದೆ. ಈ ಕ್ರಮ ಇಡೀ ದೇಶದಲ್ಲಿ ಮೆಚ್ಚುಗೆಗೆ ಕಾರಣವಾಗಿದೆಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.