ಬೆಳಗಾವಿಯ 19 ವರ್ಷದ ಯುವತಿಯ ಅನುಮಾನಾಸ್ಪದ ಸಾವು: ಅತ್ಯಾಚಾರ-ಕೊಲೆ ಶಂಕೆ
Team Udayavani, Oct 13, 2022, 3:02 PM IST
ಬೆಳಗಾವಿ: ಜಿಲ್ಲೆಯ ಬೈಲಹೊಂಗಲದ 19 ವರ್ಷದ ಯುವತಿಯ ಸಾವಿನ ಸುತ್ತ ಅನುಮಾನಗಳು ಎದ್ದಿದೆ. ಯುವತಿಯನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿದೆ ಎಂದು ಆರೋಪಗಳು ಕೇಳಿ ಬರುತ್ತಿದೆ.
ಬೆಂಗಳೂರಿನಲ್ಲಿ ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಮೂಲತಃ ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ನಿವಾಸಿ ತಬಸ್ಸುಮ್ ಸವದತ್ತಿ (19) ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಮೃತ ತಬಸ್ಸುಮ್ ತಂದೆ ಇರ್ಷಾದ್ ಅಹ್ಮದ್ ಸವದತ್ತಿ ಆಟೋ ಚಾಲಕರಾಗಿದ್ದಾರೆ. ಒಂದು ತಿಂಗಳ ಹಿಂದೆ ತಬಸ್ಸುಮ್ ಬೆಂಗಳೂರಿನ ಕಾಲ್ ಸೆಂಟರ್ ಗೆ ಕೆಲಸಕ್ಕೆ ಸೇರಿದ್ದರು. ಆದರೆ ಬುಧವಾರ ಅಪರಿಚಿತ ಯುವಕನೋರ್ವ ತಬಸ್ಸುಮ್ ಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದ. ಬಳಿಕ ಯುವತಿಯ ಮೊಬೈಲ್ ನೊಂದಿಗೆ ಎಸ್ಕೇಪ್ ಆಗಿದ್ದಾನೆ.
ಆಸ್ಪತ್ರೆಗೆ ಕುಟುಂಬಸ್ಥರು ಆಗಮಿಸಿದ ವೇಳೆ ತಬಸ್ಸುಮ್ ನಿತ್ರಾಣ ಸ್ಥಿತಿಯಲ್ಲಿದ್ದರು. ಹೆಚ್ಚಿನ ಚಿಕಿತ್ಸೆಗೆ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ತಬಸ್ಸುಮ್ ಸಾವನ್ನಪ್ಪಿದ್ದಾರೆ.
ತಬಸ್ಸುಮ್ ತಲೆಯ ಹಿಂಬದಿಗೆ ಗಾಯದ ಗುರುತು ಪತ್ತೆಯಾಗಿದೆ. ಅಷ್ಟೇ ಅಲ್ಲದೇ ಮೈಯಲ್ಲಿ ಸಿಗರೇಟ್ ನಿಂದ ಸುಟ್ಟಿದ ಗಾಯವಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ಔಷಧವನ್ನೇ ಡ್ರಗ್ ಆಗಿ ಬಳಸುವ ಯುವಕರು: ಅಶೋಕ್
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.