ರೈತರ ಸಮಸ್ಯೆ ಪರಿಹರಿಸಲು ತಹಶೀಲ್ದಾರ್‌ಗೆ ಮನವಿ
Team Udayavani, Jan 11, 2020, 12:35 PM IST
ರಾಮದುರ್ಗ: ಬರ ಪರಿಹಾರ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ವಿಮಾ ಹಣ ಹಾಗೂ ಮಹಿಳಾ ಸಂಘಗಳ ಸಮಸ್ಯೆಗಳು ಸೇರಿದಂತೆ ರೈತರ ವಿವಿಧ ಸಮಸ್ಯೆಗಳನ್ನು ಬಗೆ ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಹಿಳಾ ಘಟಕದ ಸದಸ್ಯರು ತಹಶೀಲ್ದಾರ್‌ಗೆ ಶುಕ್ರವಾರ ಮನವಿ ಸಲ್ಲಿಸಿದರು.
ಬರ ಪರಿಹಾರ ನೀಡುವಲ್ಲಿ ವಿಳಂಬ ಧೋರಣೆ ತೋರುತ್ತಿದ್ದು, ಕೂಡಲೇ ರೈತರ ಖಾತೆಗೆ ಹಣ ಜಮಾ ಮಾಡಬೇಕು.ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಹಣ ನೀಡುವಲ್ಲಿ ತಾರತಮ್ಯವೆಸಗಿದ್ದು, ಅದನ್ನು ಸರಿಪಡಿಸಿ ರೈತರಿಗೆ ಪರಿಹಾರ ಒದಗಿಸಬೇಕು. ಪ್ರವಾಹದಿಂದಾಗಿ ಭೂಮಿಯಲ್ಲಿನ ಮಣ್ಣು ಕೊಚ್ಚಿ ಹೋಗಿದ್ದು, ಕೂಡಲೇ ಭೂಮಿಯನ್ನು ಸರಿಪಡಿಸಿಕೊಡಬೇಕು. ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಪಂಪಸೆಟ್‌ಗಳಿಗೆ ಕೂಡಲೇ ವಿದ್ಯುತ್ ಪೂರೈಸಬೇಕು. ನೆರೆ ಸಂತ್ರಸ್ತರ ಸರ್ವೇ ಕಾರ್ಯ ಮಾಡುವಲ್ಲಿ ವಿಳಂಬವಾಗುತ್ತಿದ್ದು, ತ್ವರಿತಗತಿಯಲ್ಲಿ ಮುಗಿಸಿ ಪರಿಹಾರ ನೀಡಬೇಕು. ಕಳಸಾ-ಬಂಡೂರಿ ಯೋಜನೆಗೆ ಕೂಡಲೇ ಅಧಿಸೂಚನೆ ಹೊರಡಿಸಿ ಕೂಡಲೇ ಕಾಮಗಾರಿ ಪ್ರಾರಂಭಿಸಬೇಕು. ಮಹಿಳಾ ಸಂಘಗಳಿಗೆ ಮೈಕ್ರೋ ಫೈನಾನ್ಸ್ ಮೂಲಕ ಸಾಲ ನೀಡಿದ್ದು, ಅವರು ಸಾಲ ವಸೂಲಿಗೆ ಮುಂದಾಗುತ್ತಿದ್ದಾರೆ.
ಸಾಲಕ್ಕೆ ಹೆದರಿ ಸಾಕಷ್ಟು ಕುಟುಂಬಗಳು ಊರು ಬಿಟ್ಟು ಹೋಗುತ್ತಿದ್ದು, ಸರಕಾರ ಮಧ್ಯಪ್ರವೇಶಿಸಿ ಮಹಿಳಾ ಸಂಘದ ಸದಸ್ಯರನ್ನು ಬೆಂಬಲಿಸಿ ಮೈಕ್ರೋ ಫೈನಾನ್ಸ್‌ಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕುಎಂಬಿತ್ಯಾದಿ ರೈತಪರ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮದುರ್ಗ, ಜಿಲ್ಲಾ ಉಪಾಧ್ಯಕ್ಷ ಯಲ್ಲಪ್ಪ ದೊಡಮನಿ, ಜಿಲ್ಲಾ ಕಾರ್ಯದರ್ಶಿ ಮಲ್ಲು ದೇಸಾಯಿ, ಜಗದೀಶ ದೇವರಡ್ಡಿ, ರೈತ ಮುಖಂಡರಾದ ಶಿವಾನಂದ ದೊಡವಾಡ, ಕೃಷ್ಣಗೌಡ ಪಾಟೀಲ, ನೂರಸಾಬ ಕಡಕೋಳ, ಸಿದ್ದವ್ವ ವಾಲಿಕಾರ, ಯಲ್ಲವ್ವ ಮೋಟೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.