ತಾಲೂಕಾದರೂ ತಾಲೂಕಲ್ಲ!

ಇಲಾಖೆ ಕಚೇರಿಗಳಿಲ್ಲ-ಸೌಲಭ್ಯಗಳಿಲ್ಲ

Team Udayavani, May 19, 2022, 5:53 PM IST

19

 ಬೆಳಗಾವಿ: ಅಧಿಕಾರ ವಿಕೇಂದ್ರೀಕರಣದ ಭಾಗವಾಗಿ ಸರ್ಕಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನೂತನ ತಾಲೂಕುಗಳನ್ನು ರಚನೆ ಮಾಡಿ ಘೋಷಣೆ ಮಾಡಿದೆ. ಈ ಘೋಷಣೆಯಾಗಿ ವರ್ಷಗಳೇ ಉರುಳಿವೆ. ಆದರೆ ಹೊಸ ತಾಲೂಕುಗಳಿಗೆ ಮುಖ್ಯವಾಗಿ ಬೇಕಾಗಿರುವ ಇಲಾಖೆಗಳು, ಮೂಲಭೂತ ಸೌಲಭ್ಯಗಳು ಇನ್ನೂ ದೊರೆತಿಲ್ಲ. ಪರಿಣಾಮ ಸಾರ್ವಜನಿಕರಿಗೆ ತಾವು ಮೊದಲಿದ್ದ ತಾಲೂಕುಗಳಿಗೆ ಅಲೆದಾಡುವದು ತಪ್ಪಿಲ್ಲ.

ಇದರಿಂದ ಗಡಿ ಜಿಲ್ಲೆ ಬೆಳಗಾವಿ ಸಹ ಹೊರತಾಗಿಲ್ಲ. ಸುಮಾರು 55 ಲಕ್ಷ ಜನಸಂಖ್ಯೆ ಹೊಂದಿರುವ ರಾಜ್ಯದ ಅತೀ ದೊಡ್ಡ ಜಿಲ್ಲೆ ಬೆಳಗಾವಿಯಲ್ಲಿ ಜನರಿಗೆ ಆಡಳಿತಾತ್ಮಕವಾಗಿ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರ್ಕಾರ ಐದು ಹೊಸ ತಾಲೂಕುಗಳ ಘೋಷಣೆ ಮಾಡಿದೆ. ಇದರಿಂದ 10 ತಾಲೂಕುಗಳಿದ್ದ ಸಂಖ್ಯೆ ಈಗ 15 ಕ್ಕೆ ಏರಿಕೆಯಾಗಿದೆ. ಆದರೆ ಎಲ್ಲಿಯೂ ಪೂರ್ಣ ಪ್ರಮಾಣದ ತಾಲೂಕು ರಚನೆಯಾಗಿಲ್ಲ.

ಹಿಂದಿನ ಸರ್ಕಾರ ಘೋಷಣೆ ಮಾಡಿದಂತೆ ಕಿತ್ತೂರು, ನಿಪ್ಪಾಣಿ, ಕಾಗವಾಡ, ಮೂಡಲಗಿ ಹಾಗೂ ಯರಗಟ್ಟಿ ತಾಲೂಕುಗಳ ಘೋಷಣೆಯಾಗಿವೆ. ಅದರಲ್ಲಿ ಕಿತ್ತೂರು ತಾಲೂಕು ಘೋಷಣೆಯಾಗಿ ಏಳು ವರ್ಷ ಸಂದಿವೆ. ಅದರೆ ಯಾವ ತಾಲೂಕಿಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿಲ್ಲ. ಇದರಿಂದ ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಹಳೆಯ ತಾಲೂಕುಗಳಿಗೆ ಅಲೆದಾಡುವದು ತಪ್ಪಿಲ್ಲ. ಜನರ ನಿರೀಕ್ಷೆಗಳು ಸಂಪೂರ್ಣವಾಗಿ ಈಡೇರಿಲ್ಲ. ಯಥೇತ್ಛವಾಗಿ ಘೋಷಣೆಗಳು ಹರಿದು ಬಂದಿವೆ. ಆದರೆ ಅದಕ್ಕೆ ತಕ್ಕಂತೆ ಅನುದಾನ ಮಾತ್ರ ಕಾಣುತ್ತಿಲ್ಲ. ಸುಮಾರು 28 ಕಚೇರಿಗಳು ಬರಬೇಕಾದ ಜಾಗದಲ್ಲಿ ಐದಾರು ಕಚೇರಿಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಕೊರೊನಾ ಸಂಕಷ್ಟ ಅನುದಾನ ಬಿಡುಗಡೆಗೆ ಕತ್ತರಿ ಹಾಕಿದೆ.

ಸುದೀರ್ಘ‌ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ತಾಲೂಕು ಘೋಷಣೆ ಮಾಡಿತು. ಅಲ್ಲಿಗೆ ತಮ್ಮ ಕೆಲಸ ಮುಗಿಯಿತು ಎನ್ನುವಂತೆ ಸರ್ಕಾರ ತಾಲೂಕುಗಳ ಹೆಸರು ಘೋಷಣೆ ಮಾಡಿ ಕೈತೊಳೆದುಕೊಂಡಿದೆ. ಇವತ್ತಿಗೂ ಪೂರ್ಣ ಪ್ರಮಾಣದ ತಾಲೂಕು ಕೇಂದ್ರಕ್ಕೆ ಬೇಕಾದ ಸೌಲಭ್ಯಗಳು ಬಂದಿಲ್ಲ. ಇಲಾಖೆಗಳ ಕೊರತೆ ಕಾಡುತ್ತಿದೆ. ತಹಶೀಲ್ದಾರ ಕಚೇರಿ ಬಂದರೂ ಹೆಚ್ಚಿನ ಪ್ರಯೋಜನ ಆಗಿಲ್ಲ ಎಂಬುದು ಐದು ತಾಲೂಕುಗಳ ಜನರ ದೂರು.

ಮೂಡಲಗಿ  ತಾಲೂಕು ಸ್ಥಾನಮಾನ ಸಿಕ್ಕು ನಾಲ್ಕು ವರ್ಷಗಳಾಗಿವೆ. ಈ ನಾಲ್ಕು ವರ್ಷಗಳಲ್ಲಿ ಕೇವಲ ನಾಲ್ಕು ಕಚೇರಿಗಳು ಬಂದಿದ್ದೇ ದೊಡ್ಡ ಸಾಧನೆ. ಮುಖ್ಯವಾಗಿ ಉಪನೋಂದಣಿ ಕಚೇರಿ ಇಲ್ಲದೆ ತಾಲೂಕಿನ ಜನರು ಪರದಾಡುತ್ತಿದ್ದಾರೆ. ಕಾರ್ಮಿಕ ಇಲಾಖೆ ಇದ್ದರೂ ಇಲ್ಲದಂತಿದೆ. ಪೂರ್ಣ ಪ್ರಮಾಣದ ತಾಲೂಕಿಗೆ ಕನಿಷ್ಠ 18 ಕಚೇರಿಗಳು ಬರಬೇಕು. ಇದುವರೆಗೆ ತಹಶೀಲ್ದಾರ ಕಚೇರಿ, ತಾಲೂಕು ಪಂಚಾಯತ್‌, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಕಾರ್ಮಿಕ ಇಲಾಖೆ ಕಾರ್ಯನಿರ್ವಹಿಸುತ್ತಿವೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೊದಲೇ ಇದೆ. ಉಪ ನೊಂದಣಿ ಕಚೇರಿಗೆ ಬಹಳ ಬೇಡಿಕೆ ಇದೆ. ಮುಖ್ಯವಾಗಿ ಮಿನಿ ವಿಧಾನಸೌಧ ಇನ್ನೂ ನಿರ್ಮಾಣವಾಗಿಲ್ಲ. ಇದಕ್ಕೆ ನಿವೇಶನ ಗುರುತಿಸುವ ಹಾಗೂ ಸರ್ಕಾರದಿಂದ ಅನುಮತಿ ಪಡೆಯುವ ವಿಷಯದಲ್ಲೇ ಬಹಳ ಗೊಂದಲ ಕಾಣುತ್ತಿದೆ.

ಕಾಗವಾಡ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಕಾಗವಾಡ ತಾಲೂಕು ಅಥಣಿಯಿಂದ ಪ್ರತ್ಯೇಕಗೊಂಡಿದೆ. ನಾಲ್ಕು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ಈ ತಾಲೂಕಿನಲ್ಲಿ ಇಲ್ಲಗಳ ದರ್ಬಾರು ಜೋರಾಗಿದೆ. ಸಾರ್ವಜನಿಕರಿಗೆ ಮುಖ್ಯವಾಗಿ ಬೇಕಾಗಿರುವ ಉಪ ನೋಂದಣಿ ಕಚೇರಿ ಸ್ಥಾಪನೆಗೆ ಬಹಳ ಬೇಡಿಕೆ ಇದೆ. ಮಿನಿ ವಿಧಾನಸೌಧದ ನಿರ್ಮಾಣ ಆಸೆ ಇನ್ನೂ ಈಡೇರಿಲ್ಲ. ತಾಲೂಕು ಕೇಂದ್ರ ಸ್ಥಾನಮಾನ ಪಡೆದಿದ್ದರೂ ಮೂಲಭೂತ ಸೌಲಭ್ಯಗಳ ಕೊರತೆ ಎದ್ದುಕಾಣುತ್ತಿದೆ. ಕಾಗವಾಡ ವ್ಯಾಪ್ತಿಯಲ್ಲಿ ಬರುವ 40 ಗ್ರಾಮಗಳು ಇನ್ನೂ ಅಥಣಿ ತಾಲೂಕಿನಲ್ಲೇ ಮುಂದುವರಿದಿರುವುದರಿಂದ ಸಾಕಷ್ಟು ಗೊಂದಲ ಇದೆ. ಹೀಗಾಗಿ ಇದನ್ನು ಮಿನಿ ತಾಲೂಕು ಕಾಗವಾಡ ಎಂದೇ ಕರೆಯಲಾಗುತ್ತಿದೆ.

ಕಿತ್ತೂರು ತಾಲೂಕು ಕೇಂದ್ರವಾಗಿ ಏಳು ವರ್ಷ ಸಂದಿವೆ. ತಹಶೀಲ್ದಾರ ಕಚೇರಿ ಆರಂಭವಾಗಿ ಐದು ವರ್ಷ ಕಳೆದಿದೆ. ಇದಲ್ಲದೆ ಉಪ ನೋಂದಣಿ ಕಚೇರಿ, ಲೋಕೋಪಯೋಗಿ ಇಲಾಖೆ, ತಾ.ಪಂ. ಕಾರ್ಯನಿರ್ವಹಿಸುತ್ತಿವೆ. ಮುಖ್ಯವಾಗಿ ಇನ್ನೂ ಹಲವು ಕಚೇರಿಗಳು ಬರಬೇಕಿರುವುದರಿಂದ ಕಿತ್ತೂರು ತಾಲೂಕಿನ ಜನರಿಗೆ ಹಳೆಯ ತಾಲೂಕು ಕೇಂದ್ರ ಬೈಲಹೊಂಗಲಕ್ಕೆ ಅಲೆದಾಡುವದು ಇನ್ನೂ ತಪ್ಪಿಲ್ಲ. ತಾಲೂಕಿಗೆ ಮುಕುಟಪ್ರಾಯವಾಗಿರುವ ಮಿನಿ ವಿಧಾನಸೌಧವನ್ನು 10 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಆದರೆ ಇದರ ಉದ್ಘಾಟನೆ ಇದುವರೆಗೆ ನೆರವೇರಿಲ್ಲ. ಸುಮಾರು 9 ಕೋಟಿ ರೂ ವೆಚ್ಚದಲ್ಲಿ ತಾಲೂಕಾ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಅನುಮತಿ ಸಿಕ್ಕಿದೆ. ಕೃಷಿ ಇಲಾಖೆ ಸೇರಿದಂತೆ ಇದುವರೆಗೆ ಒಟ್ಟು 13 ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ.

ನಿಪ್ಪಾಣಿ ಮಹಾರಾಷ್ಟ್ರದ ಜೊತೆ ನಿಕಟ ಸಂಪರ್ಕ ಹೊಂದಿರುವ ನಿಪ್ಪಾಣಿ ಇನ್ನೂ ಪೂರ್ಣಪ್ರಮಾಣದ ತಾಲೂಕು ಕೇಂದ್ರ ಎಂದು ಗುರುತಿಸಿಕೊಂಡಿಲ್ಲ. ತಾಲೂಕು ಕೇಂದ್ರವಾಗಿ ನಾಲ್ಕು ವರ್ಷ ಕಳೆದಿದ್ದರೂ ಪೂರ್ಣ ಪ್ರಮಾಣದಲ್ಲಿ ಕಚೇರಿಗಳು ಬಂದಿಲ್ಲ. ನಮ್ಮದು ಚಿಕ್ಕೋಡಿಯೇ ಅಥವಾ ನಿಪ್ಪಾಣಿ ತಾಲೂಕೇ ಎಂಬ ಗೊಂದಲ ಜನರಲ್ಲಿ ಇನ್ನೂ ಇದೆ. ಸರ್ಕಾರದ ಕೆಲವು ಕಡತಗಳಲ್ಲಿ ಮಾತ್ರ ನಿಪ್ಪಾಣಿ ತಾಲೂಕು ಎಂದು ನಮೂದಿಸುತ್ತಿರುವದರಿಂದ ಈ ಗೊಂದಲ ಮೂಡಿದೆ. ಮಿನಿ ವಿಧಾನಸೌಧ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಬಲವಾಗಿದೆ. ಇದರ ಜೊತೆಗೆ ಲೋಕೋಪಯೋಗಿ, ಸಮಾಜ ಕಲ್ಯಾಣ ಸೇರಿದಂತೆ ಪ್ರಮುಖ ಕಚೇರಿಗಳು ಶೀಘ್ರವೇ ಬರಬೇಕು ಎಂಬುದು ಜನರ ಒತ್ತಾಯ. ನಿಪ್ಪಾಣಿಯವರೇ ಆದ ಸಚಿವೆ ಶಶಿಕಲಾ ಜೊಲ್ಲೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಿದ ಫಲವಾಗಿ ಎ ಪಿ ಎಂ ಸಿ ಆವರಣದಲ್ಲಿ ಮಿನಿ ವಿಧಾನಸೌಧಕ್ಕೆ ಐದು ಎಕರೆ ಜಾಗ ಕಲ್ಪಿಸಲಾಗಿದೆ ಎಂಬುದು ಅಧಿಕಾರಿಗಳ ಹೇಳಿಕೆ.

ಯರಗಟ್ಟಿ 3 ವರ್ಷಗಳ ಹಿಂದೆ ಸವದತ್ತಿಯಿಂದ ಬೇರ್ಪಟ್ಟು ಜಿಲ್ಲೆಯ 15 ನೇ ತಾಲೂಕು ಸ್ಥಾನಮಾನ ಪಡೆದ ಯರಗಟ್ಟಿ ಬಹುತೇಕ ಕಚೇರಿಗಳಿಲ್ಲದೆ ಅನಾಥವಾಗಿದೆ. ತಹಶೀಲ್ದಾರ ಕಚೇರಿ ಬಿಟ್ಟು ಬೇರೆ ಯಾವುದೇ ಕಚೇರಿ ಇಲ್ಲಿಗೆ ಬಂದಿಲ್ಲ. ಜನರ ಪರದಾಟ ತಪ್ಪಿಲ್ಲ. ಹಳ್ಳಿಗಳ ಸೇರ್ಪಡೆ ವಿಷಯದಲ್ಲಿ ಅಸಮಾಧಾನ ಇದೆ. ಅನುದಾನದ ಕೊರತೆ ಬಹಳ ಕಾಡುತ್ತಿದೆ. ಹೀಗಾಗಿ ತಾಲೂಕಿನ ಜನರು ಆದಾಯ ಪ್ರಮಾಣ ಪತ್ರ ಸೇರಿದಂತೆ ಎಲ್ಲ ಮುಖ್ಯ ದಾಖಲೆ ಪತ್ರಕ್ಕಾಗಿ ಸವದತ್ತಿಗೆ ಅಲೆದಾಡಬೇಕಾಗಿದೆ.

ಮೂಡಲಗಿ ಪೂರ್ಣ ಪ್ರಮಾಣದ ತಾಲೂಕು ಕೇಂದ್ರಕ್ಕೆ ಎಲ್ಲ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಸುಮಾರು 15 ರಿಂದ 20 ಕೋಟಿ ರೂ ವೆಚ್ಚದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಸರ್ಕಾರ ಇದಕ್ಕೆ ಅನುಮೋದನೆ ನೀಡಿದರೆ ಎಲ್ಲ ಇಲಾಖೆಗಳು ಒಂದೇ ಸೂರಿನಲ್ಲಿ ಬರಲಿವೆ. ಮುಖ್ಯವಾಗಿ ತಾಲೂಕಿಗೆ ಉಪ ನೋಂದಣಿ ಕಚೇರಿ ಮಂಜೂರಾಗಿದ್ದು ಇಷ್ಟರಲ್ಲೇ ಸರ್ಕಾರ ಆದೇಶ ಹೊರಡಿಸಲಿದೆ. ಕೋವಿಡ್‌ ಕಾರಣದಿಂದ ಕೆಲವು ಕಚೇರಿಗಳ ಅನುಮೋದನೆಗೆ ವಿಳಂಬವಾಗಿದೆ. –ಬಾಲಚಂದ್ರ ಜಾರಕಿಹೊಳಿ, ಅರಭಾವಿ ಶಾಸಕ

ಈಗಾಗಲೇ ಕಿತ್ತೂರು ಬಹುತೇಕ ಪೂರ್ಣ ಪ್ರಮಾಣದ ತಾಲೂಕು ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಮಿನಿ ವಿಧಾನಸೌಧ ಕಟ್ಟಡ ಪೂರ್ಣಗೊಂಡಿದೆ. ಇದೇ ಕಟ್ಟಡದಲ್ಲಿ ಇನ್ನೊಂದು ಮಹಡಿ ಕಟ್ಟಲು ನಿರ್ಧರಿಸಲಾಗಿದೆ. ಇದಲ್ಲದೆ ಆವರಣದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಒಟ್ಟು ಮೂರು ಕೋಟಿ ರೂ ಗಳ ಹೊಸ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. 100 ಹಾಸಿಗೆಗಳ ತಾಲೂಕಾ ಆರೋಗ್ಯ ಕೇಂದ್ರಕ್ಕೆ 17 ಎಕರೆ ಭೂಮಿ ಮಂಜೂರು ಮಾಡಲಾಗಿದೆ. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ತಾಲೂಕಿಗೆ ವಿವಿಧ ಮೂಲಗಳಿಂದ ಅಭಿವೃದ್ಧಿಗಾಗಿ 1700 ಕೋಟಿ ರೂ. ಬಿಡುಗಡೆಯಾಗಿದೆ. –ಮಹಾಂತೇಶ ದೊಡ್ಡಗೌಡರ, ಕಿತ್ತೂರು ಶಾಸಕರು

-ಕೇಶವ ಆದಿ

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.