ರಾಜ್ಯದ 2999 ಗ್ರಾಮಗಳಿಗೆ ಟ್ಯಾಂಕರ್ ನೀರು
ನದಿ-ಪರಿಸರ ಸಂರಕ್ಷಣೆ ಆದ್ಯತೆಯಾಗಲಿ, ಐದು ಜಿಲ್ಲೆಗಳಿಗಿಲ್ಲ ಕುಡಿಯುವ ನೀರಿನ ಕೊರತೆ
Team Udayavani, May 19, 2019, 11:28 AM IST
ಬೆಳಗಾವಿ: ನರೇಗಾ ಯೋಜನೆಯಡಿ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾಂಬಳ ಕೆರೆಯ ಹೂಳೆತ್ತುವ ಕಾಮಗಾರಿಯನ್ನು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಶನಿವಾರ ಪರಿಶೀಲಿಸಿದರು.
ಬೆಳಗಾವಿ: ರಾಜ್ಯದಲ್ಲಿ ಭೀಕರ ಬರಗಾಲದಿಂದ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು ಈಗ 2999 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ನಗರದಲ್ಲಿ ಶನಿವಾರ ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಕೈಗೊಂಡ ಪರಿಹಾರ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನೆ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ತಹಶೀಲ್ದಾರರ ಜೊತೆ ವಿಡಿಯೋ ಸಂವಾದ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇನ್ನೂ ಗಂಭೀರವಾಗುವ ಸಾಧ್ಯತೆ ಇದೆ. ಟ್ಯಾಂಕರ್ ಪೂರೈಕೆಯಾಗುತ್ತಿರುವ ಗ್ರಾಮಗಳ ಸಂಖ್ಯೆ 3500 ದಾಟುವ ನಿರೀಕ್ಷೆ ಇದೆ. ಇದನ್ನು ಸಮರ್ಥವಾಗಿ ಎದುರಿಸಲು ಸರಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದರು.
1,632 ಗ್ರಾಮಗಳಿಗೆ 2,322 ಟ್ಯಾಂಕರ್ ಹಾಗೂ 1,873 ಗ್ರಾಮಗಳಿಗೆ ಬೋರ್‌ವೆಲ್ಗಳ ಸಹಾಯದಿಂದ 1,367 ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.
ಕರ್ನಾಟಕದ ಇತಿಹಾಸದಲ್ಲಿ ಇಷ್ಟೊಂದು ಹಳ್ಳಿಗಳಿಗೆ ಟ್ಯಾಂಕರ್ ನೀರು ಪೂರೈಕೆ ಮಾಡುತ್ತಿರುವದು ಇದೇ ಮೊದಲು. ರಾಜ್ಯದಲ್ಲಿ ಕಳೆದ 18 ವರ್ಷಗಳಲ್ಲಿ 14 ವರ್ಷ ಬರಗಾಲ ಎದುರಾಗಿದೆ. ಪ್ರತಿವರ್ಷ ತಲೆದೋರುವ ಬರಗಾಲ ಎದುರಿಸಲು ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಸಹಕಾರದ ಅಗತ್ಯವಿದೆ ಎಂದು ಹೇಳಿದರು.
ಈಗಿನ ಅಂಕಿ ಅಂಶಗಳ ಪ್ರಕಾರ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳು ಟ್ಯಾಂಕರ್ ನೀರಿಗೆ ಮೊರೆ ಹೋಗಿವೆ. ರಾಮನಗರ, ಚಾಮರಾಜನಗರ, ಕೊಡಗು, ಗದಗ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಯಾವುದೇ ಟ್ಯಾಂಕರ್ ಪೂರೈಕೆ ಇಲ್ಲ ಎಂದು ಅವರು ಹೇಳಿದರು.
ಭೀಕರ ಬರದ ಹಿನ್ನೆಲೆಯಲ್ಲಿ ಕೆಲಸ ಹುಡುಕಿಕೊಂಡು ಯಾರೂ ಗುಳೇ ಹೋಗಲು ಅವಕಾಶ ಮಾಡಿಕೊಡಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನರೇಗಾ ಯೋಜನೆಯಡಿ ಹೆಚ್ಚಿನ ಉದ್ಯೋಗ ನೀಡುವಂತೆ ನಿರ್ದೇಶನ ನೀಡಲಾಗಿದೆ ಎಂದರು.
ಈಗ ನಾವು ಕೈಗೊಂಡಿರುವ ಪರಿಹಾರ ಕಾರ್ಯಗಳು ತಾತ್ಕಾಲಿಕ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕಿದ್ದು ಈ ನಿಟ್ಟಿನಲ್ಲಿ ಸರಕಾರ ಗಂಭೀರ ಆಲೋಚನೆ ಮಾಡುತ್ತಿದೆ. ಕೆರೆ ತುಂಬಿಸುವುದು, ಕೆರೆ ಹೂಳೆತ್ತುವುದು. ನದಿಗಳ ಸಂರಕ್ಷಣೆ ಹಾಗೂ ಪರಿಸರ ಸಂರಕ್ಷಣೆ ನಮ್ಮ ಆದ್ಯತೆಯಾಗಬೇಕು. ಇದರ ಜೊತೆಗೆ ನಿಸರ್ಗದೊಂದಿಗೆ ಸಂಘರ್ಷ ಕೈಬಿಡಬೇಕು ಎಂದರು.
ರಾಜ್ಯದ ಮೂವತ್ತು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ಪ್ರಕೃತಿ ವಿಕೋಪ ಖಾತೆಯಲ್ಲಿ ಬರ ನಿರ್ವಹಣೆಗೆ ಸುಮಾರು 700 ಕೋಟಿ ರೂ.ಹಣವಿದೆ. ಹಣಕಾಸಿನ ಕೊರತೆ ಇಲ್ಲ. ಬರ ಪೀಡಿತ ಪ್ರದೇಶಗಳಲ್ಲಿ ಪೂರೈಸಲಾಗುವ ಟ್ಯಾಂಕರ್ ನೀರಿನಲ್ಲಿ ಪ್ರತಿ ವ್ಯಕ್ತಿಗೆ ಕನಿಷ್ಠ 40 ಲೀ. ನೀರು ಒದಗಿಸಲಾಗುತ್ತಿದೆ ಎಂದರು.
ಕೃಷ್ಣಾ ನದಿ ತೀರದ ಜನರಿಗೆ ಕುಡಿಯುವ ನೀರು ತಕ್ಷಣ ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಿಕೊಳ್ಳಲಾಗಿದೆ.ನೀರಿಗಾಗಿ ನೀರು ಒಡಂಬಡಿಕೆಗೆ ಕರ್ನಾಟಕ ಸರ್ಕಾರ ಸಿದ್ಧವಿದೆ. ಆದರೆ ಒಡಂಬಡಿಕೆ ಪತ್ರದ ಕೆಲ ಅಂಶಗಳನ್ನು ಪರಿಷ್ಕರಿಸಿ ಮಹಾರಾಷ್ಟ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಹೀಗಿರುವಾಗ ಒಡಂಬಡಿಕೆಗೆ ಒತ್ತು ನೀಡದೇ ಮಾನವೀಯತೆ ಆಧಾರದ ಮೇಲೆ ಕುಡಿಯುವ ನೀರು ಬಿಡುಗಡೆ ಮಾಡಬೇಕು ಎಂದು ಹೇಳಿದರು.
ಬೆಳಗಾವಿ ಜಿಲ್ಲೆಯಲ್ಲಿ ಈಗ 139 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಇದಲ್ಲದೇ ಜಾನುವಾರುಗಳಿಗೆ ಏಳು ವಾರಗಳಿಗೆ ಸಾಕಾಗುವಷ್ಟು ಮೇವಿನ ಸಂಗ್ರಹ ಇದೆ. ಜಿಲ್ಲೆಗೆ ಹೆಚ್ಚುವರಿಯಾಗಿ 38 ಸಾವಿರ ಮೇವಿನ ಕಿಟ್ ಬೇಡಿಕೆಯಿದ್ದು, ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಚಿವ ಸತೀಶ ಜಾರಕಿಹೊಳಿ, ಜಿಲ್ಲಾಧಿಕಾರಿ ಡಾ| ವಿಶಾಲ ಆರ್, ಜಿಪಂ ಸಿಇಒ ಡಾ| ರಾಜೇಂದ್ರ ಕೆ.ವಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.