ಮಕ್ಕಳಿಗೆ ಸಂಸ್ಕೃತಿ-ಸೇವಾ ಮನೋಭಾವ ಕಲಿಸಿ
•ಸಾಧಕರಿಗೆ ಪ್ರಶಸ್ತಿ ಪ್ರದಾನ •ತಂದೆ-ತಾಯಿಗಳನ್ನು ವೃದ್ಧಾಶ್ರಮಕ್ಕೆ ಕಳುಹಿಸದಿರಿ: ಹೊರಟ್ಟಿ
Team Udayavani, Jul 8, 2019, 10:04 AM IST
ಬೆಳಗಾವಿ: ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ನಡೆದ ಗಡಿನಾಡು ಸಾಹಿತ್ಯ ಮತ್ತು ಸಂಸ್ಕೃತಿ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಉದ್ಘಾಟಿಸಿದರು.
ಬೆಳಗಾವಿ: ತಂದೆ-ತಾಯಿಗಳನ್ನು ವೃದ್ಧಾಶ್ರಮಗಳಿಗೆ ಕಳುಹಿಸುತ್ತಿರುವುದು ನಿಲ್ಲಬೇಕು. ಮಕ್ಕಳಿಗೆ ಸಂಸ್ಕೃತಿ ಮತ್ತು ಸೇವಾ ಮನೋಭಾವ ಕಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಸಿರಿಗನ್ನಡ ರಾಷ್ಟ್ರೀಯ ಪ್ರತಿಷ್ಠಾನದ 13ನೇ ವಾರ್ಷಿಕೋತ್ಸವ ನಿಮಿತ್ತ ರವಿವಾರ ನಡೆದ ಗಡಿನಾಡು ಸಾಹಿತ್ಯ, ಸಂಸ್ಕೃತಿ ಉತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಭವಿಷ್ಯಕ್ಕಾಗಿ ತಂದೆ-ತಾಯಿಗಳು ಏನೆಲ್ಲ ತ್ಯಾಗ ಮಾಡುತ್ತಾರೆ. ಆದರೆ ದೊಡ್ಡವರಾದ ನಂತರ ಮಕ್ಕಳು ಪಾಲಕರನ್ನು ಮರೆಯುತ್ತಿದ್ದಾರೆ. ದೊಡ್ಡವರಾದ ನಂತರ ಮಕ್ಕಳು ತಂದೆ-ತಾಯಿಗಳಿಗೆ ಆಶ್ರಯರಾಗಬೇಕು. ಪಾಲಕರು ಮಕ್ಕಳ ಬದುಕಿಗೆ ಬೇಕಾಗಿರುವ ಉತ್ತಮ ಶಿಕ್ಷಣದ ಜೊತೆಗೆ ಅವರಿಗೆ ಸಂಸ್ಕೃತಿ ಮತ್ತು ಸೇವಾ ಮನೋಭಾವನೆ ಕಲಿಸಬೇಕು ಎಂದರು.
ಎಲೆ ಮರೆಯ ಕಾಯಿಗಳಂತೆ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿರುವ ಕಾರ್ಯ ಶ್ಲಾಘನೀಯ. ಸಮಾಜ ಸೇವೆಯಲ್ಲಿ ತೊಡಗಿರುವವರನ್ನು ಗುರುತಿಸಬೇಕು. ಸಾಧಕರನ್ನು ಗೌರವಿಸುವ ಮೂಲಕ ಅವರ ಒಳ್ಳೆಯ ಕಾರ್ಯಗಳನ್ನು ಜನರಿಗೆ ಹಾಗೂ ಸರಕಾರಕ್ಕೆ ಪರಿಚಯಿಸಬೇಕು. ಇದರಿಂದ ಸಾಧಕರಿಗೆ ಪ್ರೇರಣೆ ಹಾಗೂ ಆನಂದ ಸಿಗುತ್ತದೆ. ಸರ್ಕಾರ ಮತ್ತು ಸಾಮಾಜಿಕ ಸಂಘಟನೆಗಳು ನೀಡುವ ಪ್ರಶಸ್ತಿಗಳಿಗೆ ಸಮಾನವಾದ ಗೌರವವಿದೆ ಎಂದರು.
ಕಾರಂಜಿಮಠದ ಶ್ರೀಗುರುಸಿದ್ದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಅಥಣಿಯ ಹಿರಿಯ ಸಾಹಿತಿ ಹಾಗೂ ನಾಟಕಕಾರ ಕೆ.ಎಲ್. ಕುಂದರಗಿ ಸರ್ವಾಧ್ಯಕ್ಷತೆ ವಹಿಸಿದ್ದರು. ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಪ್ರೊ| ಎಸ್.ಎಂ. ಹುರಕಡ್ಲಿ, ಕನ್ನಡ ಚಲನಚಿತ್ರ ಕಲಾವಿದೆ ಅಂಜಲಿ ಕಾಂಬಳೆ ಮಾತನಾಡಿದರು.
ಪ್ರತಿಷ್ಠಾನದ ಅಧ್ಯಕ್ಷ ಶಶಿಧರ ಘಿವಾರಿ ಸ್ವಾಗತಿಸಿದರು. ವಿಜಯಲಕ್ಷ್ಮೀ ಪುಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೈತ್ರೇಯಿಣಿ ಗದಿಗೆಪ್ಪಗೌಡರ ಪರಿಚಯಿಸಿದರು. ರುದ್ರಣ್ಣ ಚಂದರಗಿ, ವಿ.ಬಿ. ದೊಡಮನಿ, ಆಶಾ ಯಮಕನಮರಡಿ, ನಿರ್ಮಲಾ ಬಟ್ಟಲ ಸೇರಿದಂತೆ ಇತರರು ಇದ್ದರು. ವಿವಿಧ ಕ್ಷೇತ್ರಗಳ ಅನೇಕ ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.