ಬೆಳೆ ವಿಮೆ ಕಂತು ಭರಿಸಲು ತಾಂತ್ರಿಕ ಸಮಸ್ಯೆ ಅಡ್ಡಿ
Team Udayavani, Jul 10, 2020, 4:42 PM IST
ತೆಲಸಂಗ: ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿಗೆ ಸಾಮಾನ್ಯ ಸೇವಾ ಕೇಂದ್ರದ ಮೂಲಕ ವಿಮೆ ಕಂತು ಭರಿಸಲು ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಸೇವೆ ಒದಗಿಸಲು ಸಾಮಾನ್ಯ ಸೇವಾ ಕೇಂದ್ರದ ಸಿಬ್ಬಂದಿ ನಿರಾಕರಿಸುತ್ತಿರುವುದು ರೈತರಿಗೆ ಸಮಸ್ಯೆಯಾಗಿದೆ.
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಿಮೆ ತುಂಬಲು ನೂಕು ನುಗ್ಗಲು ಇದ್ದ ಕಾರಣ ಖಾಸಗಿ ಸೇವಾ ಕೇಂದ್ರಗಳಿಗೆ ಆನ್ ಲೈನ್ ಅರ್ಜಿ ಪಡೆಯಲು ಅನುಮತಿ ನೀಡಲಾಗಿದೆ. ಆದರೆ ತಾಂತ್ರಿಕ ತೊಂದರೆಯಿಂದ ಕಂತು ತುಂಬಲು ಸಾಧ್ಯವಾಗುತ್ತಿಲ್ಲ.
ಏನಾಗುತ್ತಿದೆ: ಆನ್‌ಲೈನ್ ಅರ್ಜಿ ತುಂಬಿದಾಗ ಸೇವಾ ಕೇಂದ್ರದ ಖಾತೆಯಿಂದ ಹಣ ಕಡಿತವಾಗುತ್ತದೆ. ದೃಶೀಕರಣ ಚೀಟಿ ಸೊರೆತ ನಂತರ ರೈತರು ಕೇಂದ್ರದವರಿಗೆ ಹಣ ಕೊಡುತ್ತಾರೆ. ಆದರೆ ಈಗ ಹಣ ಕಡಿತಗೊಂಡರೂ ಸ್ವೀಕೃತಿ ಪಾವತಿ ಬರುತ್ತಿಲ್ಲ. ಇದರಿಂದ ಸೇವಾ ಕೇಂದ್ರದಸಿಬ್ಬಂದಿ ಕಂಗಾಲಾಗಿದ್ದಾರೆ. ಈ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸದೆ ಅವರು ರೈತರಿಂದ ವಿಮೆ ಸಂಗ್ರಹಿಸಲು ಸಾಧ್ಯವಿಲ್ಲ ಮತ್ತು ಸೇವಾ ಕೇಂದ್ರದ ಸಿಬ್ಬಂದಿಗೆ ತೊಂದರೆ ತಪ್ಪಿದ್ದಲ್ಲ. ಈ ಹಣ ಮರಳಿ ದೊರಕುತ್ತದೆ ಎಂದು ಅಧಿಕಾರಿಗಳು ಹೇಳುತ್ತಿದ್ದರೂ ಈವರೆಗೆ ಸೇವಾ ಕೇಂದ್ರಗಳ ಖಾತೆಯಿಂದ ಅಥಣಿ ತಾಲೂಕು ಒಂದರಲ್ಲಿಯೇ 8.5 ಲಕ್ಷ ಕಡಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.