ಈಜಲು ಹೋದ ಬಾಲಕ ಸಾವು
Team Udayavani, Apr 30, 2019, 1:54 PM IST
ಘಟಪ್ರಭಾ: ಕೊಣ್ಣೂರ ಪಟ್ಟಣದ ಸಮೀಪ ಹರಿಯುತ್ತಿರುವ ಘಟಪ್ರಭಾ ನದಿಯಲ್ಲಿ ಸೋಮವಾರ ಬೆಳಗ್ಗೆ ಈಜಲು ಹೋದ ಬಾಲಕನೊಬ್ಬ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದು, ಸಂಜೆಯವರೆಗೆ ಶೋಧ ಕಾರ್ಯ ನಡೆಸಿದ ನಂತರ ಮೃತದೇಹ ಪತ್ತೆಯಾಗಿದೆ.
ಪ್ರಶಾಂತ ಕೌಜಲಗಿ (11) ಮೃತ ಬಾಲಕ. ಈತ ಸ್ಥಳೀಯ ನಿವಾಸಿ ಜಯಪಾಲ ಕೌಜಲಗಿ ಅವರ ಪುತ್ರ. ಈತ ಸ್ಥಳೀಯ ಖಾಸಗಿ ಶಾಲೆಯ ವಿದ್ಯಾರ್ಥಿಯಾಗಿದ್ದನು.
ಪ್ರತಿದಿನ ತಂದೆಯ ಜೊತೆಗೆ ನದಿಗೆ ಸ್ನಾನ ಮಾಡಲು ಹೋಗುತ್ತಿದ್ದ ಬಾಲಕ ಸೋಮವಾರ ತಂದೆ ಬೇರೆ ಕೆಲಸದ ನಿಮಿತ್ತ ನದಿಗೆ ಹೋಗಿಲ್ಲ. ಆದರೆ ಬಾಲಕ ತಾನೊಬ್ಬನೇ ಸ್ನಾನ ಮಾಡಲು ನದಿಗೆ ತೆರಳಿದ್ದಾನೆ. ಅಲ್ಲಿ ದಡದಲ್ಲಿ ಕುಳಿತು ಸ್ನಾನ ಮಾಡುತ್ತಿದ್ದಾಗ ಆಕಸ್ಮಾತ್ ಕಾಲು ಜಾರಿ ನದಿಯಲ್ಲಿ ಬಿದ್ದಿದ್ದಾನೆ. ಬಾಲಕ ನದಿಯಲ್ಲಿ ಬಿದ್ದಿರುವುದನ್ನು ಸ್ಥಳದಲ್ಲಿದ್ದ ಜನರು ಗಮನಿಸಿ ಉಳಿಸಲು ಪ್ರಯತ್ನಿಸಿದ್ದಾರೆ. ಆದರೆ ಬಾಲಕ ಅಷ್ಟರಲ್ಲಿಯೇ ನದಿಯಲ್ಲಿ ಮುಳುಗಿ ಮಾಯವಾಗಿದ್ದಾನೆ. ಎಷ್ಟೇ ಪ್ರಯತ್ನ ಪಟ್ಟರೂ ಬಾಲಕ ಅವರ ಕೈಗೆ ಸಿಕ್ಕಿಲ್ಲ್ಲವೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಪೊಲೀಸ್ ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳೀಯರೊಂದಿಗೆ ಸುದೀರ್ಘ ಶೋಧ ಕಾರ್ಯ ನಡೆಸಿ ಸಂಜೆ 5.30ರ ಸುಮಾರಿಗೆ ಮೃತದೇಹ ಪತ್ತೆ ಮಾಡಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.