![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 5, 2021, 12:11 PM IST
ಬೆಳಗಾವಿ: ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಸಾಕಷ್ಟು ಹಾನಿಯಾಗಿದ್ದು ಎಲ್ಲಾ ಪ್ರದೇಶಗಳ ಪರಿಶೀಲನೆ ನಂತರ 10 ದಿನಗಳಲ್ಲಿ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕೇಂದ್ರ ಗೃಹ ಇಲಾಖೆಯ ಸುಶೀಲ ಪಾಲ್ ಹೇಳಿದರು.
ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಬಾಧಿತಕ್ಕೊಳಗಾದ ಖಾನಾಪುರ ತಾಲೂಕಿನ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು ಸಮೀಕ್ಚೆ ಕಾರ್ಯ ಪೂರ್ಣಗೊಂಡ ನಂತರ ಗೃಹ ಇಲಾಖೆ ಹಾಗೂ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ 10 ದಿನಗಳಲ್ಲಿ ವರದಿ ನೀಡಲಾಗುವದು ಎಂದರು.
ರಾಜ್ಯದ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ ಬೆಳಗಾವಿ ಜಿಲ್ಲೆಯೊಂದರಲ್ಲೇ ಪ್ರತಿಶತ 50 ರಷ್ಟು ಹಾನಿಯಾಗಿದೆ. ಇದರಲ್ಲಿ ಬೆಳೆ ಹಾನಿ ಪ್ರಮಾಣ ಅಧಿಕವಾಗಿದೆ. ರಸ್ತೆ ಮೊದಲಾದ ಮೂಲಸೌಕರ್ಯಗಳಿಗೂ ಹಾನಿಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ಇಬ್ಬರು ಯುವತಿಯರ ಮುದ್ದಿನ ಲವರ್: ‘ಟಾಸ್’ ಮೂಲಕ ವಧುವಿನ ನಿರ್ಣಯ, ಆದರೆ ಆಗಿದ್ದೇ ಬೇರೆ!
ಈಗ ಮೂರು ಭಾಗಗಳಲ್ಲಿ ಪರಿಶೀಲನೆ ಕಾರ್ಯ ನಡೆದಿದೆ. ನಂತರ ಎಲ್ಲ ಅಂಶಗಳನ್ನು ಪರಿಗಣಿಸಿ ವರದಿ ನೀಡಲಾಗುವದು. ಪ್ರಕೃತಿ ವಿಕೋಪದ ನಿಯಮಾವಳಿ ಪ್ರಕಾರ ಪರಿಹಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಅವರು ಹೇಳಿದರು.
ನಂತರ ಅಧಿಕಾರಿಗಳ ತಂಡವು ಹುಕ್ಕೇರಿ ತಾಲೂಕಿಗೆ ಭೇಟಿ ನೀಡಿ ಪ್ರವಾಹದಿಂದ ಹಾನಿಗೊಳಗಾದ ಬೆಳೆ ಪ್ರದೇಶದ ಪರಿಶೀಲನೆ ನಡೆಸಿತು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.