ಎಪಿಎಂಸಿ ಮಾರುಕಟ್ಟೆಯಲ್ಲಿ ಜನಜಂಗುಳಿ
Team Udayavani, Mar 28, 2020, 4:15 PM IST
ಬೆಳಗಾವಿ: ನಗರ ಸೇರಿದಂತೆ ಇಡೀ ಜಿಲ್ಲೆ ಕೋವಿಡ್ 19 ಭೀತಿ ಮಧ್ಯೆ ಪೊಲೀಸ್‌ಕಣ್ಗಾವಲಿನಲ್ಲಿದ್ದು, ಲಾಕ್‌ಡೌನ್ ಹಿನ್ನೆಲೆಯಲ್ಲಿ ಮನೆ ಬಿಟ್ಟು ಯಾರೂ ಹೊರ ಬಾರದಂತೆ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ರೈತರು ಹಾಗೂ ಖರೀದಿಗೆ ವ್ಯಾಪಾರಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.
ಕೋವಿಡ್ 19 ಸೋಂಕು ನಿಯಂತ್ರಿಸಲು ಕೆಲವು ದಿನಗಳಿಂದ ಲಾಕ್‌ಡೌನ್ ಆಗಿದ್ದ ಎಪಿಎಂಸಿ ಮಾರುಕಟ್ಟೆ ಶುಕ್ರವಾರ ಮುಕ್ತವಾಗಿತ್ತು. ರೈತರು ತರಕಾರಿ ಸೇರಿದಂತೆ ಇತರೆ ಕೃಷಿ ಉತ್ಪನ್ನಗಳನ್ನು ವಾಹನಗಳಲ್ಲಿ ತುಂಬಿಕೊಂಡು ಮಾರುಕಟ್ಟೆಗೆ ಬಂದಿದ್ದರು. ಮಾರುಕಟ್ಟೆಯ ದರದಂತೆ ಉತ್ಪನ್ನಗಳನ್ನು ಮಾರಾಟ ಮಾಡಿದರು. ಅಷ್ಟೇ ಪ್ರಮಾಣದಲ್ಲಿ ವ್ಯಾಪಾರಸ್ಥರು ಹಾಗೂ ಗ್ರಾಹಕರೂ ಆಗಮಿಸಿದ್ದರು. ಬೆಳ್ಳಂಬೆಳಗ್ಗೆ ಇಡೀ ಮಾರುಕಟ್ಟೆ ತುಂಬ ಜನಜಂಗುಳಿ ಕೂಡಿತ್ತು.
ಕೋವಿಡ್ 19 ಭೀತಿಯ ನಡುವೆ ಇಡೀ ಬೆಳಗಾವಿ ಜಿಲ್ಲೆ ಸ್ತಬ್ಧವಾಗಿದೆ. ವ್ಯಾಪಾರವಹಿವಾಟು, ಜನ ಸಂಚಾರ, ವಾಹನ ಸಂಚಾರ ಇಲ್ಲದೇ ಬೆಳಗಾವಿ ನಿಶ್ಯಬ್ದವಾಗಿದೆ. ಎಪಿಎಂಸಿ ಆವರಣದಲ್ಲಿರುವ ಸಗಟು ತರಕಾರಿ ಮಾರುಕಟ್ಟೆಯಲ್ಲಿ ವಾಹನಗಳಲ್ಲಿ ಬಂದಿದ್ದ ನೂರಾರು ರೈತರು ಕೆಲವೇ ಹೊತ್ತಿನಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ತಮ್ಮೂರಿಗೆ ತೆರಳಿದರು.
ದಲ್ಲಾಳಿಗಳು ಮಳಿಗೆಗಳನ್ನು ತೆರೆದು ತರಕಾರಿ ಖರೀದಿಸಿದರು. ಅಲ್ಲಿಯೇ ಗ್ರಾಹಕರಿಗೆ, ವ್ಯಾಪಾರಸ್ಥರಿಗೆ ಮಾರಾಟ ಮಾಡಿದರು. 2-3 ತಾಸಿನಲ್ಲಿ ಇಡೀ ಸಗಟು ತರಕಾರಿ ಮಾರುಕಟ್ಟೆಯಲ್ಲಿ ಎಲ್ಲವೂ ಮಾರಾಟವಾಗಿತ್ತು. ಗ್ರಾಹಕರು ತಮ್ಮ ಬಡಾವಣೆಗಳಿಂದ, ಗಲ್ಲಿಗಳಿಂದ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಬಂದಿದ್ದು, ಮಾರುಕಟ್ಟೆಗೆ ನೇರವಾಗಿ ಬಂದು ತರಕಾರಿ ಖರೀದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.