ಅಂಗವಿಕಲ ಮಹಿಳೆ ಮನೆಗೇ ಬಂತು ಸೌಲಭ್ಯ
ಎರಡೂ ಕಾಲಿಲ್ಲದ ಮಹಿಳೆಗೆ ಜನತಾ ದರ್ಶನದಲ್ಲಿ ಸಿಕ್ತು ಅಭಯ
Team Udayavani, Jun 7, 2019, 2:13 PM IST
ಗೋಕಾಕ: ನಗರದ ಲಕ್ಷ್ಮೀ ಬಡಾವಣೆಯ ಅಂಗವಿಕಲೆ ಮಹಿಳೆಯ ಮನೆಗೆ ಭೇಟಿ ನೀಡಿದ ಅಧಿಕಾರಿಗಳು.
ಗೋಕಾಕ: ಸರಕಾರಿ ಅಧಿಕಾರಿಗಳ ಹೃದಯದಲ್ಲಿ ಮಾನವೀಯತೆ ಇದ್ದರೆ ನಿರ್ಗತಿಕರ ಕಣ್ಣೀರಿಗೆ ಪರಿಹಾರ ನಿಶ್ಚಿತ ಎನ್ನುವ ಹೃದಯ ಮಿಡಿಯುವ ಘಟನೆ ಗುರುವಾರ ನಡೆದಿದೆ.
ನಗರದ ಲಕ್ಷ್ಮೀ ಬಡಾವಣೆಯ ಸಣ್ಣ ಮನೆಯಲ್ಲಿ ಎರಡೂ ಕಾಲು ಇಲ್ಲದ ಅಂಗವಿಕಲ ಮಹಿಳೆ ಮಾಯಕ್ಕ ಅಭಿಜಿತ ಡೋಬಳೆ ತನ್ನ ಅತ್ತೆ ಕಸ್ತೂರಿ ಲಕ್ಷ್ಮಣ ಡೋಬಳೆ ಜೊತೆ ತನ್ನ ಎರಡು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಈ ಮಹಿಳೆಯ ಪತಿ ಬಿಟ್ಟು ಹೋಗಿದ್ದರಿಂದ ಕುಟುಂಬಕ್ಕೆ ತುತ್ತು ಅನ್ನಕ್ಕೂ ಗತಿಯಿಲ್ಲದಂತಾಗಿತ್ತು. ಅತ್ತೆ ಬೇರೆಯವರ ಮನೆ ಕಸ ಮುಸುರೆ ಮಾಡಿದ ಹಣದಲ್ಲಿಯೇ ಜೀವನ ಸಾಗಿಸುತ್ತಿದ್ದರು. ಈ ಅಂಗವಿಕಲ ಮಹಿಳೆಗೆ ಸರಕಾರದಿಂದ ಸಿಗುವ ಯಾವ ಸೌಲಭ್ಯವೂ ಇರಲಿಲ್ಲ. ಹೀಗಾಗಿ ಈಕೆ ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ಮನವಿ ಸಲ್ಲಿಸಿ ತನ್ನ ದುಃಖ ತೋಡಿಕೊಂಡಿದ್ದಳು.
ಇದಕ್ಕೆ ಕೂಡಲೇ ಸ್ಪಂದಿಸಿದ ಮುಖ್ಯಮಂತ್ರಿ ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿಗೆ ಕ್ರಮ ಕೈಗೊಳ್ಳಲು ತಿಳಿಸಿದಾಗ ಅವರು ಕೂಡಲೇ ಈ ಅಂಗವಿಕಲ ಮಹಿಳೆಯ ಮನೆಗೆ ಹೋಗಿ ಪರಿಶೀಲನೆ ನಡೆಸಿ ಅವಶ್ಯಕ ಕ್ರಮ ಕೈಗೊಳ್ಳಲು ಬೈಲಹೊಂಗಲ ಉಪವಿಭಾಗಾಧಿಕಾರಿಗೆ ಆದೇಶ ನೀಡಿದ್ದರು.
ಈ ಆದೇಶದನ್ವಯ ಬೈಲಹೊಂಗಲ ಉಪವಿಭಾಗಾಧಿಕಾರಿ ಎಂ.ಪಿ. ಮಾರುತಿ ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರ ಜೊತೆ ಭೇಟಿ ನೀಡಿ ಈ ಮಹಿಳೆಗೆ ಅಂಗವಿಕಲ ಮಾಸಾಶನ, ಅತ್ತೆಗೆ ಸಂಧ್ಯಾ ಸುರಕ್ಷಾ ಮಾಸಾಶನ, ಪಡಿತರ ಚೀಟಿ ಸ್ಥಳದಲ್ಲಿಯೇ ಮಂಜೂರು ಮಾಡಿದರಲ್ಲದೇ, ಅಂಗವಿಕಲೆಯ 6 ವರ್ಷದ ಮಗನಿಗೆ ಬಿಸಿಎಂ ವಸತಿ ನಿಲಯದಲ್ಲಿ ಪ್ರವೇಶ ದೊರಕಿಸಿಕೊಟ್ಟರು. ನಗರಸಭೆಯಿಂದ ಮನೆ ನೀಡುವಂತೆ ಸೂಚನೆ ನೀಡಿದರು. ಇದಲ್ಲದೇ ಅಂಗವಿಕಲೆಯ ಪತಿ ಆಗಾಗ ಬಂದು ಕಿರುಕುಳ ನೀಡುತ್ತಿರುವ ಬಗ್ಗೆ ದೂರಿದ್ದರಿಂದ ಅವಶ್ಯ ಕ್ರಮ ಕೈಗೊಳ್ಳುವಂತೆಯೂ ಉಪವಿಭಾಗಾಧಿಕಾರಿ ಕಟ್ಟುನಿಟ್ಟಿನ ಆದೇಶ ನೀಡಿದರು. ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಗೋಪಾಲ ವಾಘಮೋಡೆ, ನಗರಸಭೆ ಪೌರಾಯುಕ್ತ ವಿ.ಎಸ್.ತಡಸಲೂರ, ತಾಲೂಕಾ ಬಿಸಿಎಂ ಅಧಿಕಾರಿ ಆರ್.ಕೆ.ಬಿಸಿರೊಟ್ಟಿ, ಆಹಾರ ಇಲಾಖೆಯ ಉಪತಹಶೀಲದಾರ ಎಂ.ಬಿ.ಚೌಧರಿ, ಕಂದಾಯ ನಿರೀಕ್ಷಕ ಎಸ್.ಬಿ. ಕಟ್ಟೀಮನಿ ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.