ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಸೂತ್ರ

ಗುಲಾಬಿ ಹೂ ಕೊಟ್ಟು ವಿದ್ಯಾರ್ಥಿಗಳಿಗೆ ಶುಭ ಕೋರಿದ ಡಿಸಿ-ಶಾಸಕ ಬೆನಕೆ

Team Udayavani, Mar 29, 2022, 1:29 PM IST

12

ಬೆಳಗಾವಿ: ಹಿಜಾಬ್‌ ಆತಂಕ ಹಾಗೂ ಗೊಂದಲದ ಮಧ್ಯೆ ಸೋಮವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲದೆ ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ನಡೆದಿದೆ.

ಆದರೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆಗೆ ಕುಳಿತಿದ್ದ ಆರು ಜನ ನಕಲಿ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿ ಅವರನ್ನು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಚಿಕ್ಕೋಡಿ ಪಟ್ಟಣದ ಶಾಲೆಯೊಂದರಲ್ಲಿ ಬೇರೆ ವಿದ್ಯಾರ್ಥಿಗಳ ಪರ ಪರೀಕ್ಷೆ ಬರೆಯಲು ಬಂದಿದ್ದ ಆರು ಜನ ನಕಲಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಿಕ್ಕಿ ಬಿದ್ದಿದ್ದಾರೆ.

ಈ ಘಟನೆ ಹೊರತುಪಡಿಸಿದರೆ ಜಿಲ್ಲಾದ್ಯಂತ ಪರೀಕ್ಷೆ ಸುಗಮವಾಗಿ ನಡೆದಿದೆ. ಪರೀಕ್ಷೆ ಮೊದಲ ದಿನ ವಿದ್ಯಾರ್ಥಿಗಳು ಹಿಜಾಬ್‌ ಧರಿಸಿ ಬರುವ ಆತಂಕ ಇತ್ತು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲ ಪರೀಕ್ಷಾ ಕೇಂದ್ರಗಳ ಆವರಣದಲ್ಲಿ ಸೂಕ್ತ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿತ್ತು. ಆದರೆ ಎಲ್ಲಿಯೂ ಅಂತಹ ಗೊಂದಲ ಉಂಟಾದ ಇಲ್ಲವೇ ಹಿಜಾಬ್‌ ಧರಿಸಿ ಬಂದ ಪ್ರಕರಣಗಳು ವರದಿಯಾಗಿಲ್ಲ. ಹಿಜಾಬ್‌ ಧರಿಸಿ ಬಂದವರಿಗೆ ಅದನ್ನು ತೆಗೆದು ಪರೀಕ್ಷಾ ಕೇಂದಕ್ಕೆ ತೆರಳಲು ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ.

ಬೆಳಗಾವಿ ನಗರದಲ್ಲಿ ಬೆಳಿಗ್ಗೆ ಪರೀಕ್ಷಾ ಕೇಂದಕ್ಕೆ ಭೇಟಿ ನೀಡಿದ ಶಾಸಕ ಅನಿಲ ಬೆನಕೆ ಹಾಗೂ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಶುಭ ಕೋರಿದರು. ಯಾವುದೇ ಆತಂಕ ಇಲ್ಲದೇ ಧೈರ್ಯದಿಂದ ಪರೀಕ್ಷೆ ಬರೆಯುವಂತೆ ಹುರಿದುಂಬಿಸಿದರು.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 33,807 ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 44,780 ವಿದ್ಯಾರ್ಥಿಗಳು ಹೆಸರು ನೊಂದಾಯಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 139 ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 157 ಪರೀಕ್ಷಾ ಕೇಂದ್ರ ತೆರೆಯಲಾಗಿದೆ.

ಸೋಮವಾರ ನಡೆದ ಪ್ರಥಮ ಭಾಷೆ ಪರೀಕ್ಷೆಯಲ್ಲಿ ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ನೋಂದಣಿ ಮಾಡಿದ್ದ ವಿದ್ಯಾರ್ಥಿಗಳಲ್ಲಿ 430 ವಿದ್ಯಾರ್ಥಿಗಳು ಗೈರಾಗಿದ್ದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 663 ವಿದ್ಯಾರ್ಥಿಗಳು ಗೈರಾಗಿದ್ದರು. ಆದರೆ ಯಾವುದೇ ಡಿಬಾರ್‌ ಆಗಿಲ್ಲ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಕೋವಿಡ್‌ ಕಾರಣದಿಂದ ಕಳೆದೆರಡು ವರ್ಷ ನಿರ್ಬಂಧ ಹಾಗೂ ಗೊಂದಲ ನಿರ್ಮಾಣವಾಗಿತ್ತು. ಆದರೆ ಈ ವರ್ಷ ಕೋವಿಡ್‌ ಆತಂಕ ದೂರವಾಗಿರುವುದರಿಂದ ಪರೀಕ್ಷೆ ಬರೆಯಲು ಮುಕ್ತ ಅವಕಾಶ ಸಿಕ್ಕಿದೆ. ಅದಕ್ಕೆ ತಕ್ಕಂತೆ ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಎಲ್ಲ ಕಡೆ ಕೋವಿಡ್‌ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ: ಗಂಗೂಲಿ

Sourav Ganguly: ಮುಂದಿನ ವಿಮಾನದಲ್ಲೇ ಶಮಿ ಆಸ್ಟ್ರೇಲಿಯಕ್ಕೆ ತೆರಳಲಿ

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

byndoor

Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.