ಪಕ್ಷವು ನಿರೀಕ್ಷೆಗೂ ಮೀರಿದ ಅವಕಾಶ ನೀಡಿದೆ: ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
Team Udayavani, Jun 13, 2020, 3:33 PM IST
ಬೆಳಗಾವಿ: ಬಿಜೆಪಿ ಪಕ್ಷವು ನನ್ನ ನಿರೀಕ್ಷೆಗೂ ಮೀರಿ ಅವಕಾಶ ಕೊಟ್ಟಿದೆ. ಮುಂಬರುವ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯದ ನಡುವೆ ಸಂಪರ್ಕದ ಕೊಂಡಿಯಾಗಿ ಕೆಲಸ ಮಾಡುತ್ತೇನೆ ಎಂದು ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿ ನಾನೂ ಸಹ ರಾಜ್ಯಸಭಾ ಟಿಕೆಟ್ ನಿರೀಕ್ಷೆ ಮಾಡಿರಲಿಲ್ಲ. ಆದರೆ ಪಕ್ಷದ ವರಿಷ್ಠರು ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ ಎಂದರು.
ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ. ನನ್ನ ಆಯ್ಕೆಗೆ ಎಲ್ಲರೂ ಹರ್ಷ ವ್ಯಕ್ತಪಡಿಸಿದ್ದಾರೆ. ಎಲ್ಲರೂ ಒಗ್ಗಟ್ಟಾಗಿ ಹೋಗುತ್ತೇವೆ ಎಂದರು.
ಬೆಳಗಾವಿಯ ಡಿಸಿಸಿ ಬ್ಯಾಂಕ್ ಸಹಕಾರ ಕ್ಷೇತ್ರದಲ್ಲಿ ತನ್ನದೆಯಾದ ಕೊಡುಗೆ ನೀಡುತ್ತ ಬಂದಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯ ಬಗ್ಗೆ ಪಕ್ಷದ ವರಿಷ್ಠರ ಸೂಚನೆ ಮೆರೆಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗುತ್ತಾರೆ. ಯಾರೇ ಅಧ್ಯಕ್ಷರಾದರೂ ಬಿಜೆಪಿಯವರೆ ಆಗುತ್ತಾರೆ ಎಂದರು.
ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೂ ರಾಜ್ಯಸಭೆಯಲ್ಲಿ ಆಯ್ಕೆ ಮಾಡಿರುವುದಕ್ಕೆ ಸಂತಸವಾಗಿದೆ. ರಾಜ್ಯಸಭೆ ಎಂದರೆ ಬೇರೆ ಕಲ್ಪನೆ ಇತ್ತು. ಆದರೆ ಈಗ ಬದಲಾಗಿದೆ. ಬಿಜೆಪಿ ಪರಂಪರೆಯನ್ನು ಬೇರೆ ಪಕ್ಷದಲ್ಲಿ ಕಾರ್ಯಕರ್ತರು ಕೇಳುತ್ತಿದ್ದಾರೆ ಎಂದರು.
ಬೆಳಗಾವಿ ಜಿಪಂ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ರಾಜ್ಯಸಭೆಯ ಅನುದಾನ ಸರಿಯಾಗಿ ಸದ್ಬಳಕೆಯಾಗದೆ ವಾಪಸ್ಸ ಹೋದ ಉದಾಹರಣೆ ಸಾಕಷ್ಟಿದೆ. ರಾಜ್ಯ ಸಭೆಗೆ ಯಾವ ಯಾವ ಇಲಾಖೆ ಒಳಪಡುತ್ತವೆ ಎಂಬುದನ್ನು ಅಧ್ಯಯನ ಮಾಡುತ್ತೇನೆ. ಬಳಿಕ ನನ್ನದೆ ಆದ ರೂಪರೇಷೆಗಳನ್ನು ಸಿದ್ದಪಡಿಸಿಕೊಂಡು ಎಲ್ಲರ ಸಹಕಾರದಿಂದ ಕರ್ನಾಟಕವನ್ನು ಅಭಿವೃದ್ಧಿ ಪಥದತ್ತ ಕೊಂಡೊಯುವಲ್ಲಿ ಪ್ರಮುಖ ಪಾತ್ರ ವಹಿಸುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.