ಎರಡನೇ ಬಾರಿಯೂ ಚಲಿಸುವ ರೈಲಲ್ಲೇ ಹೆರಿಗೆ
Team Udayavani, Sep 11, 2018, 6:00 AM IST
ರಾಯಬಾಗ: ಓಡುವ ರೈಲಿಗೂ ರಾಯಬಾಗದ ಯಲ್ಲವ್ವನಿಗೂ ಏನೋ ಕನೆಕ್ಷನ್ ಇದ್ದಂತಿದೆ. ಸೋಮವಾರ ಹೆರಿಗೆಗೆಂದು ಸ್ವಗ್ರಾಮಕ್ಕೆ ಬರುತ್ತಿರುವಾಗ ಮಾರ್ಗ ಮಧ್ಯೆ ಈಕೆಗೆ ಹೆರಿಗೆಯಾಗಿದೆ. ವಿಶೇಷ ಇದಲ್ಲ. ಕಳೆದ ವರ್ಷವೂ ಇದೇ ರೈಲಿನಲ್ಲಿ ಈಕೆಗೆ ಹೆರಿಗೆಯಾಗಿದ್ದು, ಎರಡು ಬಾರಿಯೂ ಗಂಡು ಮಕ್ಕಳೇ ಜನಿಸಿರುವುದು ವಿಶೇಷ.
ಸುಲಲಿತ ಹೆರಿಗೆಯಾಗಿ ಈಕೆಯನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಕಳಿಸಲು ಅನುಕೂಲ ಕಲ್ಪಿಸಲು ರೈಲು ಅರ್ಧ ಗಂಟೆಗೂ ಹೆಚ್ಚುಕಾಲ ರಾಯಬಾಗ ರೈಲ್ವೆ ನಿಲ್ದಾಣದಲ್ಲಿ ನಿಂತು ನಂತರ ಚಲಿಸಿದೆ. ತಾಯಿ ಮತ್ತು ಮಗು ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆಯ ವೈದ್ಯಾ ಧಿಕಾರಿ ಡಾ. ಆರ್.ಎಚ್.ರಂಗಣ್ಣವರ ತಿಳಿಸಿದ್ದಾರೆ.
ಯಾವಾಗ ಹೆರಿಗೆ?: ಕೊಲ್ಲಾಪುರ- ಹೈದರಾಬಾದ್ ರೈಲಿನಲ್ಲಿ ರಾಯಬಾಗ ತಾಲೂಕಿನ ಶಾಹುಪಾರ್ಕ್ ಗ್ರಾಮದ ಯಲ್ಲವ್ವ ಮಯೂರ ಗಾಯಕವಾಡ (23) ಬೆಳಗ್ಗೆ 7 ಗಂಟೆಗೆ ರಾಯಬಾಗದತ್ತ ಪ್ರಯಾಣಿಸುತ್ತಿದ್ದರು. ರೈಲು ಚಿಂಚಲಿ ರೈಲ್ವೆ ನಿಲ್ದಾಣಕ್ಕೆ ಬಂದಾಗ ಹೆರಿಗೆ ನೋವು ಕಾಣಿಸಿಕೊಂಡಿದೆ. ರಾಯಬಾಗ ಸ್ಟೇಶನ್‌ಗೆ ಬರುವಷ್ಟರಲ್ಲಿ ಚಲಿಸುವ ರೈಲಿನಲ್ಲಿಯೇ ಈಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಕೂಡಲೇ ಸಹ ಪ್ರಯಾಣಿಕರು ಆಂಬ್ಯುಲೆನ್ಸ್‌ಗೆ ಕರೆಮಾಡಿ ರಾಯಬಾಗ ಸರಕಾರಿ ಆಸ್ಪತ್ರೆಗೆ ಮಹಿಳೆ ಹಾಗೂ ಮಗುವನ್ನು ಕಳುಹಿಸಿದ್ದಾರೆ.
ಮಹಿಳೆಯ ಕುಟುಂಬದವರು 7-8 ವರ್ಷಗಳಿಂದ ಕೊಲ್ಲಾಪುರದಲ್ಲಿ ಕೂಲಿ ಕೆಲಸಕ್ಕೆಂದು ಹೋಗಿದ್ದಾರೆ. ಕಳೆದ ವರ್ಷ ಕೂಡ ಈಕೆ ಇದೇ ರೈಲಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆಗ ಸ್ವಗ್ರಾಮಕ್ಕೆ ಬರುವ ಸಮಯದಲ್ಲಿ ಹಾತಗಣಂಗಲಾ ರೈಲ್ವೆ ಸ್ಟೇಶನ್‌ನಲ್ಲಿ ಹೆರಿಗೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.