ಪ್ರಧಾನಿ ಮೋದಿ ಕಾರ್ಯಕ್ಕೆ ಜಗತ್ತೇ ಶ್ಲಾಘನೆ

ಅನುದಾನ ನೀಡುವ ಮೂಲಕ ಅಲ್ಪಸಂಖ್ಯಾತರ ದುಡಿಯುವ ಕೈಗೆ ಕೆಲಸ ನೀಡಿದೆ

Team Udayavani, Feb 5, 2022, 5:37 PM IST

ಪ್ರಧಾನಿ ಮೋದಿ ಕಾರ್ಯಕ್ಕೆ ಜಗತ್ತೇ ಶ್ಲಾಘನೆ

ಬೆಳಗಾವಿ: ಅಲ್ಪಸಂಖ್ಯಾತರ ಶ್ರಯೋಭಿವೃದ್ಧಿಯ ಜೊತೆಗೆ ತ್ರಿತಲಾಕ ರದ್ದತಿಯಿಂದ ಅಲ್ಪಸಂಖ್ಯಾತ ಮಹಿಳೆಯರ ಸ್ವಾಭಿಮಾನ ಜೀವನಕ್ಕೆ ದಾರಿತೊರುವ ಮೂಲಕ ದಿಟ್ಟ ಹೆಜ್ಜೆಯಿಟ್ಟ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವನ್ನು ಇಡೀ ಜಗತ್ತೇ ಕೊಂಡಾಡುತ್ತಿದೆ ಎಂದು ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೊರ್ಚಾ ರಾಜ್ಯಾಧ್ಯಕ್ಷ ಸೈಯದ್‌ ಸಲಾಂ ಹೇಳಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಅಲ್ಪಸಂಖ್ಯಾತ ಮೊರ್ಚಾ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಏಳು ದಶಕಗಳಿಂದ ಮುಸ್ಲಿಮರನ್ನು ಕೇವಲ ಮತಕ್ಕಾಗಿ ಬಳಸಿಕೊಂಡು ಅವರ ಕೌಟುಂಬಿಕ ನೆಮ್ಮದಿ ಹಾಳುಮಾಡಿ ತುಷ್ಟಿಕರಣ ಮಾಡಿದ ಪಕ್ಷ ಇಂದು ಸಂಸತ್ತಿನಲ್ಲಿ ಅಧಿಕೃತ ವಿರೋಧಪಕ್ಷವಾಗಲು ಅರ್ಹತೆ ಪಡೆಯಲು ಸಾಧ್ಯವಾಗಲಿಲ್ಲ. ಎಲ್ಲ ಅಲ್ಪಸಂಖ್ಯಾತರು ಮೋದಿ ಅವರ ಕಾರ್ಯಕ್ಷಮತೆಯಿಂದ ಬಿಜೆಪಿಯಲ್ಲಿದ್ದಾರೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ ಪಾಟೀಲ ಮಾತನಾಡಿ, ಬಿಜೆಪಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎನ್ನುವದನ್ನು ಅಕ್ಷರಶಃ ಜಾರಿಗೆ ತರುವ ಮೂಲಕ ವಕ್ತ ಆಸ್ತಿ ಕಬಳಿಸಿದವರಿಗೆ ಛಾಟಿ ಬೀಸಿದೆ. ಇದಲ್ಲದೆ ಅಸ್ತಿ ರಕ್ಷಣೆ ಹಾಗೂ ಹೆಚ್ಚಿನ ಅನುದಾನ ನೀಡುವ ಮೂಲಕ ಅಲ್ಪಸಂಖ್ಯಾತರ ದುಡಿಯುವ ಕೈಗೆ ಕೆಲಸ ನೀಡಿದೆ ಎಂದು ಹೇಳಿದರು.

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಮುಕ್ತಾರ ಪಠಾಣ ಮಾತನಾಡಿ, ಜಿಲ್ಲೆಯಲ್ಲಿ ಒಬ್ಬ ಬಿಜೆಪಿ ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ರಾಜ್ಯಾಧ್ಯಕ್ಷ ಮಾಡುವ ಮೂಲಕ ಪಕ್ಷ ಕೊಟ್ಟಿರುವ ಗೌರವಕ್ಕೆ ಜೀವನ ಪೂರ್ಣ ಈ ಋಣ ತಿರಿಸಲು ಸಾಧ್ಯವಿಲ್ಲ. ಅಧಿಕಾರ ಇಲ್ಲದೆ ಹತಾಶರಾಗಿರುವ ಕಾಂಗ್ರೆಸ್‌ ಈಗ ಅಧಿಕಾರಕ್ಕಾಗಿ ಅಲ್ಪಸಂಖ್ಯಾತರನ್ನು ಬಿಜೆಪಿ ವಿರುದ್ಧ ಎತ್ತಿಕಟ್ಟಲು ಕುತಂತ್ರ ನಡೆಸಿದೆ. ಆದರೆ ಅವರ ಈ ಕೀಳು ಕುತಂತ್ರ ಫಲಿಸುವುದಿಲ್ಲ ಎಂದು ಹೇಳಿದರು.

ಕೊವಿಡ್‌ ಸಂದರ್ಭದಲ್ಲಿ ಬಿಜೆಪಿ ಎಲ್ಲ ಜನರ ಪರ ನಿಂತಿದೆ. ಸಣ್ಣ ಬಿದಿ ವ್ಯಾಪಾರದಲ್ಲಿದ್ದ ಅಲ್ಪಸಂಖ್ಯಾತ ಲಕ್ಷಾಂತರ ಜನರಿಗೆ ಯಾವುದೇ ಜಾಮೀನು ಇಲ್ಲದೆ ಸಾಲ ನೀಡಿದ್ದು ಹಾಗೂ ಜನಧನ್‌ ಖಾತೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತ ಮಹಿಳೆಯರು ಪ್ರೋತ್ಸಾಹ ಧನ ಪಡೆದಿರುವುದೇ ಇದಕ್ಕೆ ಸಾಕ್ಷಿ ಎಂದು ಹೇಳಿದರು. ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಮಹಮ್ಮದ್‌ ಸಫಿ ಜಮಾದಾರ, ಎ.ಕೆ. ಪಿರಝಾದೆ, ಶಾಲು ಪನಾಂಡಿಸ್‌, ಶಕೀಲ ಧಾರವಾಡಕರ ಉಪಸ್ಥಿತರಿದ್ದರು. ದಾವಲಸಾಬ್‌ ಛಪ್ಟಿ ಸ್ವಾಗತಿಸಿದರು. ಕಾರ್ಯಾಲಯ ಕಾರ್ಯದರ್ಶಿ ವೀರಭದ್ರಯ್ಯ ಪೂಜಾರ ವಂದಿಸಿದರು.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.