ಸ್ವಾತಂತ್ರ್ಯ ಹೋರಾಟದಲ್ಲಿ ರಂಗಭೂಮಿ ಪಾತ್ರ ಮುಖ್ಯ; ಅಜಿತ ವಾರಕರಿ

ಕಲಾವಿದೆ ನೈನಾ ಅವರು ಫೂಲನ್‌ ದೇವಿ ಪಾತ್ರದಲ್ಲಿ ಕಾಣಿಸಿಕೊಂಡರು.

Team Udayavani, Mar 30, 2023, 6:05 PM IST

ಸ್ವಾತಂತ್ರ್ಯ ಹೋರಾಟದಲ್ಲಿ ರಂಗಭೂಮಿ ಪಾತ್ರ ಮುಖ್ಯ; ಅಜಿತ ವಾರಕರಿ

ಬೆಳಗಾವಿ: ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ರಂಗಭೂಮಿಯ ಪಾತ್ರ ಬಹು ಮುಖ್ಯವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಹೆಚ್ಚು ಜನ ಅನಕ್ಷರಸ್ಥರಿದ್ದರು. ಜನರಲ್ಲಿ ದೇಶಾಭಿಮಾನ ಮೂಡಿಸುವುದು, ದೇಶದ ಸ್ವಾತಂತ್ರ್ಯದ ಅವಶ್ಯಕತೆ ಕುರಿತು ತಿಳಿಸಿಕೊಡುವುದು ಅಷ್ಟೇ ಅಲ್ಲದೆ, ಎಲ್ಲರಲ್ಲಿ ಒಗ್ಗಟ್ಟನ್ನು ಮೂಡಿಸುವುದು ಕಷ್ಟದ ಕೆಲಸವಾಗಿತ್ತು. ಈ ಎಲ್ಲ ಕೆಲಸವನ್ನು ಮಾಡುವಲ್ಲಿ ನಾಟಕ ಪ್ರಮುಖ ಪಾತ್ರ ವಹಿಸಿತು ಎಂದು ಬೆಳಗಾವಿಯ ಭಾರತೀಯ ಜೀವ ವಿಮಾ ನಿಗಮದ ಹಿರಿಯ ವಿಭಾಗಾಧಿಕಾರಿ ಅಜಿತ ವಾರಕರಿ ಹೇಳಿದರು.

ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ರಂಗಸಂಪದ ವತಿಯಿಂದ ಹಮ್ಮಿಕೊಂಡಿದ್ದ ದಿ. ಶಿವಕುಮಾರ ಸಂಬರಗಿಮಠ ನಾಟಕೋತ್ಸವ, ರಂಗಸಖ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಮೂರು ದಿನಗಳ ನಾಟಕೋತ್ಸವದ ಅಂತಿಮ ದಿನ ಬೆಂಗಳೂರಿನ ರಂಗಪಯಣದಿಂದ ಫೂಲನ್‌ದೇವಿ ಜೀವನ ಆಧಾರಿತ ನಾಟಕ ಪ್ರದರ್ಶನಗೊಂಡಿತು. ರಂಗರೂಪ, ವಿನ್ಯಾಸ, ನಿರ್ದೇಶನ ರಾಜಗುರು ಹೊಸಕೋಟೆ ಅವರದಾಗಿತ್ತು. ಕಲಾವಿದೆ ನೈನಾ ಅವರು ಫೂಲನ್‌ ದೇವಿ ಪಾತ್ರದಲ್ಲಿ ಕಾಣಿಸಿಕೊಂಡರು.

ಇದೇ ಸಂದರ್ಭದಲ್ಲಿ ಧಾರವಾಡದ ಅಭಿನಯ ಭಾರತಿ ಅಧ್ಯಕ್ಷರಾದ ಅರವಿಂದ ಕುಲಕರ್ಣಿ ಅವರಿಗೆ ರಂಗಸಖ-2023 ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಇದಲ್ಲದೆ ರಂಗಸಂಪದದ ಹಿರಿಯ ಕಲಾವಿದರಾದ ರಮೇಶ ಅನಿಗಳ ಹಾಗೂ ಗಂಗಾಧರ ಬೆನ್ನೂರ ಅವರನ್ನು ಸನ್ಮಾನಿಸಿ
ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಗಂಗಾಧರ ಬೆನ್ನೂರ, ರಂಗಭೂಮಿಯವರದ್ದು ಮಾತು ಕಡಿಮೆ ಕೃತಿ ಹೆಚ್ಚು. ರಂಗಭೂಮಿಯಲ್ಲಿ ನನಗೊಂದು ರೂಪ ಕೊಟ್ಟವರು ರಂಗಸಂಪದ ತಂಡ. ಅದರಲ್ಲೂ ವಿಶೇಷವಾಗಿ ಶ್ರೀಪತಿ ಮಂಜನಬೆ„ಲು ಅವರ ಶ್ರಮ ಇದರಲ್ಲಿ ಬಹಳವಿದೆ ಎಂದರು. ಕಾರ್ಯಕ್ರಮದಲ್ಲಿ ರಂಗಸಂಪದದ ಶ್ರೀಪತಿ ಮಂಜನಬೈಲು, ವಿಜಯಲಕ್ಷ್ಮೀ ಸಂಬರಗಿಮಠ ಉಪಸ್ಥಿತರಿದ್ದರು. ಡಾ. ಎ.ಎಲ್‌. ಕುಲಕರ್ಣಿ ಅವರು ವಿಶ್ವ ರಂಗಭೂಮಿ ದಿನಾಚರಣೆ ಸಂದೇಶವನ್ನು ವಾಚಿಸಿದರು. ಪದ್ಮಾ ಕುಲಕರ್ಣಿ ಹಾಗೂ ಅಶೋಕ ಕುಲಕರ್ಣಿ ಪರಿಚಯಿಸಿದರು. ಪ್ರಸಾದ ಕಾರಜೋಳ ಸ್ವಾಗತಿಸಿದರು. ಗುರುನಾಥ ಕುಲಕರ್ಣಿ ವಂದಿಸಿದರು. ವೀಣಾ ಪಾಟೀಲ(ಹೆಗಡೆ) ನಿರೂಪಿಸಿದರು.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.