ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು
Team Udayavani, Aug 19, 2020, 9:11 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಳಗಾವಿ: ಇಲ್ಲಿನ ರಾಮತೀರ್ಥ ನಗರದ ಮನೆಯೊಂದಕ್ಕೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ನಗ ಮತ್ತು ನಗದು ದೋಚಿರುವ ಘಟನೆ ವರದಿಯಾಗಿದೆ.
ಮನೆಯಲ್ಲಿ ಯಾರೂ ಇಲ್ಲದೇ ಇದ್ದ ಸಂದರ್ಭದಲ್ಲಿ ಹೊಂಚು ಹಾಕಿ ಕಳ್ಳತನ ಮಾಡಿರುವ ಕಳ್ಳರು ಮನೆ ಬೀಗ ಮುರಿದು ಸುಮಾರು 13 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಹಣವನ್ನು ಕಳ್ಳತನ ಮಾಡಿದ್ದಾರೆ.
ರಾಮರ್ತಿಥ ನಗರದಲ್ಲಿ ವಾಸವಾಗಿದ್ದ ಮಂಜುನಾಥ ಗುರುಸಿದ್ದಯ್ಯ ಚಿಕ್ಕಮಠ ಎಂಬವರು ತಮ್ಮ ಕುಟುಂಬದವರೊಂದಿಗೆ ಊರಿಗೆ ಹೋಗಿದ್ದರು. ಇದನ್ನು ಗಮನಿಸಿದ ಕಳ್ಳರು ಮಂಗಳವಾರ ಸಂಜೆ ಹೊತ್ತಿಗೆ ಮನೆಯ ಬಾಗಿಲಿನ ಕೀಲಿ ಮುರಿದು ಒಳನುಗ್ಗಿದ್ದಾರೆ. ನಂತರ ಒಳ ನುಗ್ಗಿ ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.
ಮಂಜುನಾಥ ಅವರು ಬುಧವಾರ ಮನೆಗೆ ಹಿಂದಿರುಗಿದ ಸಂದರ್ಭದಲ್ಲಿ ಈ ಕಳ್ಳತನದ ವಿಚಾರ ಬೆಳಕಿಗೆ ಬಂದಿದೆ. 12.90 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣ, 25 ಸಾವಿರ ರೂ. ನಗದು ದೋಚಿದ್ದಾರೆ ಎಂದು ಮನೆಯ ಮಾಲಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಮಾಳಮರುತಿ ಠಾಣೆ ಇನ್ಸಪೆಕ್ಟರ್ ಬಿ.ಆರ್. ಗಡ್ಡೇಕರ ಹಾಗೂ ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದರು. ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.