ಮತಾಂತರ ನಿಷೇಧ ಕಾಯ್ದೆಗೆ ಭಯ ಬೇಡ
ಸರ್ಕಾರ ಧನಿಯೆತ್ತುವ ಕೆಲಸ ಮಾಡಬೇಕು. ಕನ್ನಡಿಗರ ರಕ್ಷಣೆ ಸರ್ಕಾರದ ಹೊಣೆಯಾಗಿದೆ
Team Udayavani, Dec 25, 2021, 5:59 PM IST
ಅಥಣಿ: ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಮತಾಂತರ ಕಾಯ್ದೆಯನ್ನು ಜಾರಿಗೆ ತಂದಿರುವುದು ಬಿಜೆಪಿ ಸರ್ಕಾರದ ಸಣ್ಣತನ ತೋರಿಸುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.
ಅವರು ಶಿವಣಗಿ ಕಲ್ಯಾಣ ಮಂಟಪದಲ್ಲಿ ಅಥಣಿ ಪುರಸಭೆ ಚುನಾವಣೆ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿ, ದೇಶದಲ್ಲಿ ಬೆಲೆ ಏರಿಕೆಯಿಂದ ಜನರು ಕಂಗಾಲಾಗಿರುವುದರ ಕಡೆ ಗಮನ ಹರಿಸದೆ ಭಾವನಾತ್ಮಕವಾಗಿರುವ ವಿಷಯಗಳನ್ನು ಇಟ್ಟುಕೊಂಡು ರಾಜಕೀಯ ಮಾಡಲು ಬಿಜೆಪಿ ಹೊರಟಿದೆ. ದೇಶ ಕಟ್ಟುವಂತಹ ಕೆಲಸ ಮಾಡಬೇಕು ಹೊರತು ಒಡೆಯುವ ಕೆಲಸವಲ್ಲ. ಮತಾಂತರ ಕಾಯ್ದೆಗೆ ಯಾರೂ ಹೆದರಬೇಕಿಲ್ಲ ಎಂದರು.
ಅಥಣಿ ಪುರಸಭೆ ಟಿಕೆಟ್ ಹಂಚಿಕೆಯಲ್ಲಿ ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆ ಆಗುವುದು ಸಹಜ. ಇದು ಎಲ್ಲ ಪಕ್ಷದಲ್ಲಿ ಇರುವಂಥದ್ದು. ಇದಕ್ಕೇನು ಮಾಡಲಾಗದು. ಮರಾಠಿಗರ ವಿರುದ್ಧ ಸರ್ಕಾರ ಧನಿಯೆತ್ತುವ ಕೆಲಸ ಮಾಡಬೇಕು. ಕನ್ನಡಿಗರ ರಕ್ಷಣೆ ಸರ್ಕಾರದ ಹೊಣೆಯಾಗಿದೆ ಎಂದು ಹೇಳಿದರು. ಡಿಸೆಂಬರ 27 ರಂದು ನಡೆಯಲಿರುವ ಅಥಣಿ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು
ಕಾರ್ಯಕರ್ತರು ಮತ್ತು ಮುಖಂಡರು ಒಗ್ಗಟ್ಟಿನಿಂದ ಮಾಡುವಂತೆ ಕರೆ ನೀಡಿದರು.
ಇದೇ ವೇಳೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಟಾಳಕರ್ ಮಾತನಾಡಿ, ಕರ್ನಾಟಕ ಸರ್ಕಾರ ಗುತ್ತಿಗೆದಾರರಿಂದ ಶೆ. 40 ಪರ್ಸೆಂಟೇಜ್ ವಸೂಲಿ ಮಾಡುತ್ತಿರುವ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಗುತ್ತಿಗೆದಾರರು ರಾಷ್ಟ್ರಪತಿಗಳಿಗೆ ಪತ್ರ ಬರೆದು ದೂರಿದರೂ ಸರ್ಕಾರ ಸುಮ್ಮನಿದೆ.
ಕಾಂಗ್ರೆಸ್ ಪಕ್ಷ ಬಡವರ ಪರ ಕಾಳಜಿ ಪೂರ್ವಕವಾದ ಪಕ್ಷವಾಗಿದೆ.ರಾಜ್ಯ ಸರ್ಕಾರ 40 ಪರ್ಸೆಂಟ್ ಸರ್ಕಾರವಾಗಿದೆ. ಬಿಜೆಪಿಗೆ ಶಿಕ್ಷೆ ಕೊಡಬೇಕಾದರೆ ಅಥಣಿ ಪುರಸಭೆ ಕಾಂಗ್ರೆಸ್ ಮಯವಾಗಬೇಕು ಎಂದರು. ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಮಾತನಾಡಿ, ಈ ಬಾರಿ ಅಥಣಿ ಪುರಸಭೆ ಅಧಿ ಕಾರದ ಚುಕ್ಕಾಣಿಯನ್ನು ಕಾಂಗ್ರೆಸ್ ಪಕ್ಷ ಹಿಡಿಯಲಿದೆ ಎಂದರು.
ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ ಚಿಂಗಳೆ, ವೀರಕುಮಾರ ಪಾಟೀಲ, ಅಥಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದಾರ್ಥ ಸಿಂಗೆ, ದಿಗ್ವಿಜಯ ದೇಸಾಯಿ, ಅನಿಲ ಸುಣದೋಳಿ, ಅಸ್ಲಂ ನಾಲಬಂದ, ರಮೇಶ ಪಾಟೀಲ, ಬಸವರಾಜ ಬುಟಾಳಿ, ಆಶಾ ಐಹೊಳಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.