ಯೂರಿಯಾ ಗೊಬ್ಬರ ಕೊರತೆಯಿಲ್ಲ
Team Udayavani, Jul 10, 2020, 4:34 PM IST
ಗೋಕಾಕ: ಪ್ರಸಕ್ತ ಹಂಗಾಮಿನಲ್ಲಿ ಒಳ್ಳೆಯ ಮಳೆ ಆಗುತ್ತಿರುವುದರಿಂದ ಮೆಕ್ಕೆಜೋಳ, ಕಬ್ಬು ಬೆಳೆಗಳ ಬಿತ್ತನೆ ಹಾಗೂ ನಾಟಿ ಕೆಲಸಗಳು ನಡೆದಿದ್ದು, ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಗುರುವಾರ ಹೇಳಿಕೆ ನೀಡಿರುವ ಅವರು, ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ರೈತರಿಗೆ ಅಗತ್ಯವಿರುವ ಸುಮಾರು 2500 ಟನ್ (ಫುಲ್ ರೇಕ್) ಯೂರಿಯಾ ಗೊಬ್ಬರವನ್ನು ಸರಬರಾಜು ಮಾಡುವಂತೆ ಅ ಧಿಕಾರಿಗಳಿಗೆ ಸೂಚಿಸಲಾಗಿದೆ. 2-3 ದಿನಗಳಲ್ಲಿ ರಸಗೊಬ್ಬರ ರೈತರಿಗೆ ಸಿಗಲಿದೆ ಎಂದು ಹೇಳಿದ್ದಾರೆ. ಉಭಯ ತಾಲೂಕುಗಳಲ್ಲಿ ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಸೂರ್ಯಕಾಂತಿ ಹಾಗೂ ಅರಿಷಿನ ಬೆಳೆಗಳಿವೆ. ಶೇ 90 ರಷ್ಟು ಪ್ರದೇಶವು ನೀರಾವರಿಯಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 45,600 ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿ ಹೊಂದಿದ್ದು, ಪ್ರಸ್ತುತ ಶೇ. 78 ರಷ್ಟು ಬಿತ್ತನೆ ಕಾರ್ಯ ಮುಗಿದಿದೆ. 35,568 ಹೆಕ್ಟೇರ್ ಪ್ರದೇಶ ಬಿತ್ತನೆಯಾಗಿದೆ. ಈಗಾಗಲೇ ಬಿತ್ತನೆಯಾದ ಸೊಯಾಬಿನ್, ಮೆಕ್ಕೆಜೋಳ, ಕಬ್ಬು ಬೆಳೆಗಳಿಗೆ ಯೂರಿಯಾ ಗೊಬ್ಬರವನ್ನು ಮೇಲು ಗೊಬ್ಬರವಾಗಿ ಉಪಯೋಗಿಸುತ್ತಿದ್ದು, ರೈತರಿಗೆ ರಸಗೊಬ್ಬರ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಿಗೆ ಈ ಹಂಗಾಮಿನಲ್ಲಿ ಎಪ್ರೀಲ್ ನಿಂದ ಸೆಪ್ಟೆಂಬರವರೆಗೆ 11850 ಮೆ.ಟನ್ ಯೂರಿಯಾ ರಸಗೊಬ್ಬರದ ಬೇಡಿಕೆ ಇದ್ದು, ಜುವಾರಿ, ಆರ್‌ಸಿಎಫ್, ಇಫ್ರೊ, ಕ್ರಿಬ್ರೋ ಕಂಪನಿಗಳ ಯೂರಿಯಾವನ್ನು ರೈತರಿಗೆ, ಪಿಕೆಪಿಎಸ್ ಹಾಗೂ ರಸಗೊಬ್ಬರ ಮಳಿಗೆಗಳಿಗೆ ಪೂರೈಸುವಂತೆ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸೂಚನೆ ನೀಡಿರುವುದಾಗಿ ಅವರು ಹೇಳಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.