ಸಿದ್ದು ಸಿಎಂ ಆಗಲು ಈ ಚುನಾವಣೆ ದಿಕ್ಸೂಚಿ : ರೇವಣ್ಣ
Team Udayavani, Apr 9, 2021, 8:24 PM IST
ಗೋಕಾಕ: ಐದು ವರ್ಷ ಹಲವಾರು ಜನಪರ ಯೋಜನೆಗಳ ಅನುಷ್ಠಾನದೊಂದಿಗೆ ಕಳಂಕ ರಹಿತ ಆಡಳಿತ ನೀಡಿದ ಸಿದ್ದರಾಮಯ್ಯನವರನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಈ ಲೋಕಸಭಾ ಉಪಚುನಾವಣೆ ದಿಕ್ಸೂಚಿಯಾಗಲಿದೆ ಎಂದು ಮಾಜಿ ಸಚಿವ ಎಚ್.ಎಮ್.ರೇವಣ್ಣ ಹೇಳಿದರು.
ಬುಧವಾರ ಸಂಜೆ ನಗರದ ಬೀರೇಶ್ವರ ಸಮುದಾಯ ಭವನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ ಮತಯಾಚಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಜನಸಾಮಾನ್ಯರಿಗಾಗಿ ಜಾರಿಗೆ ತಂದ ಭಾಗ್ಯಗಳ ಸರಮಾಲೆಯ ಯೋಜನೆಗಳು ಇಂದಿಗೂ ಪ್ರಚಲಿತದಲ್ಲಿದ್ದು, ಅವುಗಳ ಬಗ್ಗೆ ಜನಸಾಮಾನ್ಯರಿಗೂ ಅರಿವು ಇದೆ. ಅವು ಸತೀಶ ಜಾರಕಿಹೊಳಿ ಅವರ ಗೆಲುವಿಗೆ ಸಹಕಾರಿಯಾಗಲಿವೆ ಎಂದು ತಿಳಿಸಿದರು.
ಪ್ರಧಾನಿಯಾಗಿ ಮೋದಿ ಅವರ ಕೊಡುಗೆ ಶೂನ್ಯವಾಗಿದೆ. ಬಾಂಗ್ಲಾ ದೇಶ ಸ್ವತಂತ್ರ್ಯ ಹೊರಾಟದಲ್ಲಿ ಜೈಲಿಗೆ ಹೋಗಿದ್ದೆ ಎಂಬ ಮೋದಿ ಹೇಳಿಕೆಗೆ ವ್ಯಂಗ್ಯ ಮಾಡಿದ ಅವರು ಬಾಂಗ್ಲಾ ವಿಮೋಚನೆಯಲ್ಲಿ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಪಾತ್ರ ಮಹತ್ವದ್ವಾಗಿದೆ.
ಈ ಉಪಚುನಾವಣೆ ಚಿಕ್ಕಮಗಳೂರು ಚುನಾವಣೆಯನ್ನು ನೆನಪಿಸುತ್ತಿದ್ದು, ಕರ್ನಾಟಕ ಸದಾ ಕಾಂಗ್ರೆಸ್ ಪರವಾಗಿದೆ ಎಂಬುದನ್ನು ತೋರಿಸಿಕೊಡುವಂತೆ ಮತದಾರರಲ್ಲಿ ಕೋರಿದರು. ಮುಖಂಡರಾದ ಡಾ| ರಾಜೇಂದ್ರ ಸಣ್ಣಕ್ಕಿ, ಸೋಮಣ್ಣ ಬೇವಿನಮರದ, ಲಕ್ಷ್ಮಣರಾವ ಚಿಂಗಳೆ, ಶ್ರೀಶೈಲ ದಳವಾಯಿ, ಸಿದ್ದಲಿಂಗ ದಳವಾಯಿ, ರಕ್ಷಿತಾ ಈಟಿ, ಡಾ: ವನಿತಾ, ವಿಠ್ಠಲ ಪಾಟೀಲ, ವಿಠ್ಠಲ ಚಂದರಗಿ, ಮಹಾದೇವ ತುಕ್ಕಾನಟ್ಟಿ, ಸಂಗಮೇಶ ಬಬಲೇಶ್ವರ, ಅರವಿಂದ ದಳವಾಯಿ, ನಜೀರ ಶೇಖ, ಮೋಸಿನ್ ಖೋಜಾ, ಅಶೋಕ ಪಾಟೀಲ, ವಿವೇಕ ಜತ್ತಿ, ಪ್ರಕಾಶ ಡಾಂಗೆ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.