ವರುಣನ ರೌದ್ರಾವತಾರ! ಉಕ್ಕಿ ಹರಿಯುತ್ತಿವೆ ಮೂರು ನದಿಗಳು; ಆತಂಕದಲ್ಲಿ 131 ಹಳ್ಳಿಯ ಜನ
Team Udayavani, Aug 7, 2019, 7:35 PM IST
ಬಾಗಲಕೋಟೆ : ಕಳೆದ ಒಂದು ವಾರದಿಂದ ಕೃಷ್ಣಾ ನದಿಯಲ್ಲಿ ಮಾತ್ರ ಉಂಟಾಗಿದ್ದ ಪ್ರಹಾರ, ಬುಧವಾರದಿಂದ ಮಲಪ್ರಭಾ ಹಾಗೂ ಘಟಪ್ರಭಾ ನದಿಗಳೂ ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯ ಮೂರು ನದಿಗಳಲ್ಲೂ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ಜಿಲ್ಲೆಯ ಆರು ತಾಲೂಕಿನ 131 ಗ್ರಾಮಗಳ ಜನರು ಆತಂಕದಲ್ಲೇ ಅತಂತ್ರ ಬದುಕು ಸಾಗಿಸುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕೃಷ್ಣಾ ನದಿಗೆ ಬುಧವಾರ 3,46,567 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಘಟಪ್ರಭಾ ನದಿಗೆ 1.72 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಈ ಎರಡೂ ನದಿಗಳ ನೀರು ಆಲಮಟ್ಟಿ ಜಲಾಶಯ ಸೇರುತ್ತಿದ್ದು, ಆಲಮಟ್ಟಿಯಿಂದ 4 ಲಕ್ಷ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಆಲಮಟ್ಟಿಯ ಜಲಾಶಯದ ಹಿನ್ನೀರು ಜಿಲ್ಲೆಯ ಬಾಗಲಕೋಟೆ, ಬೀಳಗಿ, ಜಮಖಂಡಿ ತಾಲೂಕಿನ ಹಲವು ಹಳ್ಳಿಗಳು ಬಾಧಿತಗೊಳಿಸಿದೆ.
ಇನ್ನು ಮಲಪ್ರಭಾ ನದಿಗೆ 45 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಬಾದಾಮಿ ತಾಲೂಕಿನ 27 ಹಳ್ಳಿಗಳು ಪ್ರವಾಹಕ್ಕೆ ಒಳಗಾಗುವ ತೀವ್ರ ಭೀತಿಯಲ್ಲಿವೆ. ಬುಧವಾರ ಘಟಪ್ರಭಾ ನದಿ ಪಾತ್ರದ ಯಾದವಾಡ-ಮುಧೋಳ ರಾಜ್ಯ ಹೆದ್ದಾರಿಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಹೆದ್ದಾರಿ ಸಂಚಾರ ಬಂದ್ ಆಗಿದೆ. ಈ ಸೇತುವೆ ಸಹಿತ ಈ ವರೆಗೆ ಜಿಲ್ಲೆಯಲ್ಲಿ 13 ಸೇತುವೆಗಳ ಸಂಪರ್ಕ ಕಡಿತಗೊಂಡಿದೆ.
131 ಹಳ್ಳಿ ಜನ ಆತಂಕದಲ್ಲಿ :
ಮೂರು ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಜಮಖಂಡಿ-26, ಬೀಳಗಿ-12, ಮುಧೋಳ-21, ಬಾಗಲಕೋಟೆ-12, ಬಾದಾಮಿ-27 ಹಾಗೂ ಹುನಗುಂದ ತಾಲೂಕಿನ 33 ಹಳ್ಳಿಗಳು ಸೇರಿ ಒಟ್ಟು 131 ಹಳ್ಳಿಗಳಿಗೆ ಯಾವುದೇ ಕ್ಷಣದಲ್ಲಿ ನೀರು ನುಗ್ಗುವ ಆತಂಕ ಎದುರಾಗಿದೆ. ಈಗಾಗಲೇ ಮುಧೋಳ ಪಟ್ಟಣದ ಎರಡು ಗಲ್ಲಿಗಳು, ಮಿರ್ಜಿ ಗ್ರಾಮ ಸಹಿತ ಏಳು ಗ್ರಾಮ, ಜಮಖಂಡಿ ತಾಲೂಕಿನ 13 ಗ್ರಾಮಗಳ ಸುತ್ತ ನೀರು ಆವರಿಸಿಕೊಂಡಿದೆ.
ಬ್ಯಾರೇಜ್ ಗೇಟ್ ತೆರವು :
ಘಟಪ್ರಭಾ ನದಿ ಪಾತ್ರದಲ್ಲಿ 23 ಹಾಗೂ ಮಲಪ್ರಭಾ ನದಿ ಪಾತ್ರದಲ್ಲಿ 18 ಬ್ಯಾರೇಜ್‌ಗಳಿದ್ದು, ಬುಧವಾರ ಎಲ್ಲಾ ಬ್ಯಾರೇಜ್‌ಗಳ ಗೇಟ್‌ಗಳನ್ನು ತೆರವುಗೊಳಿಸಿ, ನೀರು ಹೊರ ಬಿಡಲಾಗುತ್ತಿದೆ.
ಇಬ್ಬರು ಯುವಕರ ರಕ್ಷಣೆ :
ಘಟಪ್ರಭಾ ನದಿ ಪ್ರವಾಹ ಉಂಟಾಗಿದ್ದು, ಮುಧೋಳ ತಾಲೂಕಿನ ನಾಗರಾಳದಲ್ಲಿ ನದಿ ದಟದಲ್ಲಿದ್ದ ವಿದ್ಯುತ್ ಪಂಪಸೆಟ್ ತರಲು ಹೋಗಿದ್ದ ಇಬ್ಬರು ಯುವಕರು ಪ್ರವಾಹದಲ್ಲಿ ಸಿಲುಕಿದ್ದರು. ಅವರನ್ನು ಮಹಾಲಿಂಗಪುರ ಪೋಲಿಸರು ರಕ್ಷಣೆ ಮಾಡಿದ್ದಾರೆ.
ನಾಗರಾಳದ ಮಹಾದೇವ ನೇಗಿ (29) ಮತ್ತು ರಾಜು ಬೆಳ್ಳೇರಿ (25) ಎಂಬುವವರು ನದಿಯಲ್ಲಿ ಪಂಪಸೆಟ್ ತರಲು ಹೋದಾಗ, ಏಕಾಏಕಿ ಘಟಪ್ರಭಾ ನದಿಯಲ್ಲಿ ನೀರು ಹೆಚ್ಚಿದ್ದರಿಂದ ಮರವೇರಿ ಆಶ್ರಯ ಪಡೆದಿದ್ದಾರೆ. ಸುಮಾರು ಐದು ಗಂಟೆಗಳ ಕಾಲ ಮರದಲ್ಲಿದ್ದ ಯುವಕರು, ರಕ್ಷಣೆಗಾಗಿ ಕೂಗುತ್ತಿದ್ದರು. ಗ್ರಾಮಸ್ಥರ ಮಾಹಿತಿಯಿಂದ ಸ್ಥಳಕ್ಕೆ ಧಾವರಿಸಿದ ಮಹಾಲಿಂಗಪುರ ಪೊಲೀಸರು, ಬೋಟ್ ಮೂಲಕ ತೆರಳಿ, ಯುವಕರನ್ನು ರಕ್ಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.