Chikkodi; ಕೃಷ್ಣಾ ನದಿಗೆ ಟ್ರ್ಯಾಕ್ಟರ್ ಪಲ್ಟಿ: ಕೊಚ್ಚಿ ಹೋದ 8 ಜನರಲ್ಲಿ ಇಬ್ಬರು ನಾಪತ್ತೆ
ಮಹಾರಾಷ್ಟ್ರದ ಗಡಿ ಭಾಗದಲ್ಲಿ ಘಟನೆ
Team Udayavani, Aug 2, 2024, 5:15 PM IST
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲೂಕಿನ ಅಕ್ಕಿವಾಟ್ -ಬಸ್ತವಾಡ್ ರಸ್ತೆಯಲ್ಲಿ ಸಾಗುತ್ತಿದ್ದ ಟ್ರ್ಯಾಕ್ಟರ್ ಆಕಸ್ಮಿಕವಾಗಿ ಕೃಷ್ಣಾ ನದಿಯ ಪ್ರವಾಹದಲ್ಲಿ ಪಲ್ಟಿಯಾಗಿ ಇಬ್ಬರು ನಾಪತ್ತೆಯಾಗಿರುವ ಘಟನೆ ಆ.2 ರಂದು(ಶುಕ್ರವಾರ ) ನಡೆದಿದೆ.
ಅಕ್ಕಿವಾಟ್ , ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವ ಸಲುವಾಗಿ ಮೋಟಾರ್ ಸ್ಟಾರ್ಟ್ ಮಾಡಲೆಂದು ಅಕ್ಕಿವಾಟ್ – ಬಸ್ತವಾಡ್ ರಸ್ತೆಯಿಂದ ತೆರಳುತ್ತಿದ್ದ ಟ್ರ್ಯಾಕ್ಟರ್ ನಲ್ಲಿ ಒಟ್ಟು 8 ಮಂದಿ ಇದ್ದರು ಎನ್ನಲಾಗಿದೆ. ಈ ವೇಳೆ ಕೃಷ್ಣಾ ನದಿಯಲ್ಲಿ ಉಂಟಾದ ಮಹಾಪೂರದಿಂದ ನೀರಿನ ಹರಿವಿಗೆ ಎಲ್ಲರೂ ಕೊಚ್ಚಿ ಹೋಗಿದ್ದಾರೆ.
ಈ ಘಟನೆಯ ಬಗ್ಗೆ ತಿಳಿದ ತತ್ ಕ್ಷಣ ತಾಲೂಕು ಆಡಳಿತವು ಯಾಂತ್ರಿಕ ದೋಣಿ ಮೂಲಕ ವಿಪತ್ತು ನಿರ್ವಹಣಾ ಸಿಬಂದಿಯ ಸಹಾಯದಿಂದ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು,8 ಮಂದಿಯ ಪೈಕಿ ಆರು ಮಂದಿಯನ್ನು ರಕ್ಷಿಸಿದ್ದಾರೆ .ಇನ್ನಿಬ್ಬರು ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ನಾಪತ್ತೆಯಾದವರಲ್ಲಿ ಅಕ್ಕಿವಾಟ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಇಕ್ಬಾಲ್ ಬೈರಾಗದಾರ ಸಹ ಸೇರಿದ್ದಾರೆ.
ಘಟನಾ ಸ್ಥಳಕ್ಕೆ ಕೊಲ್ಲಾಪುರ ಜಿಲ್ಲಾ ಉಸ್ತುವಾರಿ ಅಶೀವ್ ಹಸನ್ ಮುಶ್ರಿಫ್ ಹಾಗೂ ಮಹಾರಾಷ್ಟ್ರದ ಸಂಸದ ಧೈರ್ಯಶೀಲ ಮಾನೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ
Lakshmi Hebbalkar: “ಎಪಿಎಲ್, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’
ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.