ಟ್ರಾಫಿಕ್ ಜಾಮ್: ಬೈಕ್ ಏರಿದ ಸಚಿವ ಖಾದರ್
Team Udayavani, Jan 28, 2017, 3:45 AM IST
ಬೆಳಗಾವಿ: ಮುಖ್ಯಮಂತ್ರಿ ಹಾಗೂ ಮಂತ್ರಿಗಳು ಬಂದಾಗ ಸಂಚಾರ ಅಸ್ತವ್ಯಸ್ತವಾಗಿ ಪ್ರಯಾಣಿಕರು ಪರದಾಡುವುದು ಹೊಸದೇನಲ್ಲ. ಆದರೆ, ಸ್ವತಃ ಸಚಿವರಿಗೇ ಈ ಸ್ಥಿತಿ ಒದಗಿದರೆ?
ಶುಕ್ರವಾರ ನಗರಕ್ಕೆ ಮುಖ್ಯಮಂತ್ರಿಗಳ ಭೇಟಿಗೂ ಮುನ್ನ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ. ಖಾದರ್ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ್ದರು. ಬಳಿಕ ಕೆಲ ಕಾಲ ಸಂಚಾರ ದಟ್ಟಣೆ ನಿಭಾಯಿಸಲು ಯತ್ನಿಸಿದರು. ಆದರೆ ಅದು ಸಾಧ್ಯವಾಗದಿದ್ದಾಗ ಅಪರಿಚಿತರೊಬ್ಬರ ಬೈಕ್ ಏರಿ ವಿಮಾನ ನಿಲ್ದಾಣ ತಲುಪಿದರು.
ಸಿಎಂ ಸಿದ್ದರಾಮಯ್ಯ ಬೈಲಹೊಂಗಲದಲ್ಲಿ ನಡೆಯುತ್ತಿರುವ ಕೃಷಿ ಮೇಳದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಬಂದಿದ್ದರು. ಈ ವೇಳೆ ಸಾಂಬ್ರಾ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಬೈಲಹೊಂಗಲಕ್ಕೆ ಸಿಎಂ ತೆರಳುವಾಗ ಪೊಲೀಸರು ಸಾಂಬ್ರಾ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದರು.
ಇದೇ ವೇಳೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಡುವ ವಿಮಾನವೇರಲು ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಸಚಿವ ಯು.ಟಿ. ಖಾದರ್, ಬೆಳಗಾವಿ ಸಮೀಪ ವಾಹನಗಳ ಸಾಲಿನಲ್ಲಿ ಸಿಲುಕಿದ್ದರು. ಬಳಿಕ ಬೈಕ್ ಸವಾರನಿಂದ ಡ್ರಾಪ್ ಪಡೆದು ವಿಮಾನ ನಿಲ್ದಾಣ ತಲುಪಿ ಬೆಂಗಳೂರಿಗೆ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.