ಬೆಳಗಾವಿ ಟು ಬೆಂಗಳೂರು ರೈಲು ಶುರು

•ಪ್ರತಿದಿನ ಗೋವಾಕ್ಕೆ ರೈಲು ಓಡಿಸಲು ಚಿಂತನೆ •ಮೊದಲ ದಿನ ಐವತ್ತು ಜನರ ಪ್ರಯಾಣ

Team Udayavani, Jun 30, 2019, 10:52 AM IST

bg-tdy-2..

ಬೆಳಗಾವಿ: ಬೆಳಗಾವಿಯಿಂದ ಬೆಂಗಳೂರಿಗೆ ಅರಂಭವಾದ ವಿಶೇಷ ರೈಲಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಚಾಲನೆ ನೀಡಿದರು.

ಬೆಳಗಾವಿ: ಈ ಭಾಗದ ಜನರ ಬಹಳ ದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಬೆಂಗಳೂರು ವಿಶೇಷ ರೈಲಿಗೆ ಶನಿವಾರ ಹಸಿರು ನಿಶಾನೆ ತೋರಿಸಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಳಗಾವಿಯಿಂದ ಪುಣೆಗೆ ಪುಶ್‌ಪುಲ್ ರೈಲು, ಮೈಸೂರು-ಧಾರವಾಡ ರೈಲು ಸಂಚಾರವನ್ನು ಮೀರಜ ಇಲ್ಲವೇ ಕೊಲ್ಲಾಪುರದವರೆಗೆ ವಿಸ್ತರಣೆ ಮಾಡುವುದು ಸೇರಿದಂತೆ ಈ ಭಾಗದ ಅಭಿವೃದ್ಧಿಗೆ ಸಹಾಯವಾಗುವ ಹಲವಾರು ಯೋಜನೆಗಳನ್ನು ಕೈಗೊಳ್ಳುವ ಚಿಂತನೆ ನಡೆದಿದೆ ಎಂದು ಹೇಳಿದರು. ಬೆಳಗಾವಿಯಿಂದ ವಾಸ್ಕೋಗೆ ನೇರ ರೈಲು ಸಂಚಾರ ಶೀಘ್ರದಲ್ಲೇ ಆರಂಭಿಸಲಾಗುತ್ತದೆ ಎಂದರು.

ಬೆಳಗಾವಿಯಿಂದ ಗೋವಾಕ್ಕೆ ಪ್ರತಿದಿನ ಸಾವಿರಾರು ಜನ ಕೆಲಸಕ್ಕೆ ಹೋಗುತ್ತಾರೆ. ಆದರೆ ಅವರಿಗೆ ಸರಿಯಾದ ಸಾರಿಗೆ ಸೌಲಭ್ಯ ಇಲ್ಲ. ಈ ಹಿನ್ನೆಲೆಯಲ್ಲಿ ಪ್ರತಿ ದಿನ ಬೆಳಗ್ಗೆ 6 ಗಂಟೆಗೆ ಬೆಳಗಾವಿಯಿಂದ ಗೋವಾಕ್ಕೆ ರೈಲು ಓಡಿಸುವ ಚಿಂತನೆ ನಡೆದಿದೆ. ಈ ರೈಲು ಬೆಳಗ್ಗೆ 10:30ಕ್ಕೆ ವಾಸ್ಕೋ ತಲುಪಲಿದ್ದು ಇದರಿಂದ ಜನರ ಹಣ ಹಾಗೂ ಸಮಯ ಎರಡೂ ಉಳಿತಾಯವಾಗುತ್ತದೆ ಎಂದು ಹೇಳಿದರು.

ಬೆಳಗಾವಿಯವರು ಸೌಮ್ಯ ಸ್ವಭಾವದವರು. ಹುಬ್ಬಳ್ಳಿ-ಧಾರವಾಡ ರಾಜಕಾರಣಿಗಳಿಗೆ ಹೋಲಿಸಿದರೆ ನಮ್ಮಲ್ಲಿ ಒಗ್ಗಟ್ಟಿನ ಕೊರತೆ ಇದೆ. ಆದ್ದರಿಂದ ಇಲ್ಲಿಗೆ ಯೋಜನೆಗಳು ಬರಲು ವಿಳಂಬವಾಗುತ್ತಿವೆ. ಇಚ್ಛಾಶಕ್ತಿಯ ಕೊರತೆ ನಮ್ಮಲ್ಲಿದೆ. ಇನ್ನು ಮುಂದಾದರೂ ಜಿಲ್ಲೆಯ ಸವಾಂರ್ಗೀಣ ಅಭಿವೃದ್ಧಿಗೆ ಪಕ್ಷಾತೀತವಾಗಿ ಎಲ್ಲ ರಾಜಕೀಯ ಮುಖಂಡರು ಒಗ್ಗಟ್ಟಾಗಿ ಶ್ರಮಿಸಬೇಕಿದೆ ಎಂದು ಹೇಳಿದರು.

ರೈಲ್ವೆ ಇಲಾಖೆಯಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ. ಅದರ ಲಾಭವನ್ನು ಯುವಕರು ಪಡೆದುಕೊಳ್ಳಬೇಕು. ಕಳೆದ 70 ವರ್ಷದಿಂದ ರೈಲ್ವೆ ಇಲಾಖೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲುತ್ತಿದ್ದರು. ಆದರೆ ನರೇಂದ್ರ ಮೋದಿ ದೇಶದ ಪ್ರಧಾನಿಯಾದ ಬಳಿಕ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಬೆಳಗಾವಿ ಯುವಕರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.

ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ ಮಾತನಾಡಿ, ಸ್ವಾತಂತ್ರ್ಯ ಸಿಕ್ಕ ನಂತರ ಕರ್ನಾಟಕದಿಂದ ಎಂಟು ಜನ ಕೇಂದ್ರ ಸಚಿವ ಸಂಪುಟದಲ್ಲಿ ಹಾಗೂ ರಾಜ್ಯ ಖಾತೆಯಲ್ಲಿ ನಾಲ್ಕು ಜನ ರೈಲ್ವೆ ಮಂತ್ರಿಗಳಾಗಿದ್ದರು. ಆದರೆ ರೈಲ್ವೆ ವಿಷಯದಲ್ಲಿ ಬೆಳಗಾವಿಗೆ ನ್ಯಾಯ ಸಿಕ್ಕಿರಲಿಲ್ಲ. ಈಗ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಬಂದ ನಂತರ ಸಾಕಷ್ಟು ರೈಲ್ವೆ ಯೋಜನೆಗಳು ವೇಗ ಪಡೆದಿವೆ ಎಂದರು.

ಕಳೆದ ಐದು ವರ್ಷಗಳ ಅವಧಿಯಲ್ಲಿ ರೈಲ್ವೆ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಯಾಗಿವೆ. ನರೇಂದ್ರ ಮೋದಿ ಅವರ ಇಚ್ಛಾಶಕ್ತಿಯಿಂದ ದೇಶದಲ್ಲಿ ಬುಲೆಟ್ ಟ್ರೆನ್‌ ಸಹ ಬರಲಿದೆ ಎಂದು ಕೋರೆ ಹೇಳಿದರು.

ಈಗ ಕೇಂದ್ರದಲ್ಲಿ ಸುರೇಶ ಅಂಗಡಿ ರೈಲ್ವೆ ಸಚಿವರಾಗಿರುವದು ನಮಗೆ ಬಹಳ ಸಂತಸದ ವಿಷಯ. ಅವರ ಅವಧಿಯಲ್ಲಿ ಈ ಭಾಗಕ್ಕೆ ಹೆಚ್ಚಿನ ರೈಲು ಸೇವೆ ದೊರೆಯಬೇಕು. ರೈಲ್ವೆ ನಿಲ್ದಾಣಗಳ ಅಧುನೀಕರಣ ಕಡೆ ಹೆಚ್ಚು ಗಮನನೀಡಬೇಕು. ಮುಂಬೈ, ದೆಹಲಿ ಮೊದಲಾದ ಭಾಗಗಳಿಗೆ ಇಲ್ಲಿಂದ ರೈಲು ಸಂಚಾರ ಆರಂಭವಾಗಬೇಕು ಎಂದರು.

ಶಾಸಕಿ ಲಕ್ಷ್ಮಿ ಹೆಬ್ಟಾಳಕರ ಮಾತನಾಡಿ, ಬೆಳಗಾವಿಯಿಂದ ನೂತನವಾಗಿ ಆರಂಭವಾಗಿರುವ ವಿಶೇಷ ರೈಲು ಈ ಭಾಗದ ಜನರ ಬಹು ದಿನಗಳ ಬೇಡಿಕೆ ಈಡೇರಿಸಿದೆ. ಇದರ ಹಿಂದೆ ಎಲ್ಲರ ಪ್ರಯತ್ನ ಇದೆ. ಈ ಭಾಗಕ್ಕೆ ಸಾಕಷ್ಟು ಅನುಕೂಲ ಕಲ್ಪಿಸಿಕೊಡುವ ರೈಲಿಗೆ ಬೆಳವಡಿ ಮಲ್ಲಮ್ಮನ ಹೆಸರಿಡಬೇಕು ಎಂದು ಅವರು ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿದರು.

ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಮಾತನಾಡಿ, ಬೆಳಗಾವಿ ಜನರ ಬಹಳ ದಿನಗಳ ಕನಸು ನನಸಾಗಿದೆ. ಬೆಳಗಾವಿಗೆ ಸ್ವಾತಂತ್ರ್ಯ ಸಿಕ್ಕು ಹಳೆಯ ಕಾಲವಾಗಿದೆ. ಆದರೆ ಬೆಳಗಾವಿಯಿಂದ ಬೆಂಗಳೂರಿಗೆ ರೈಲು ಸಿಗಲು ಸಚಿವರಾಗಿ ಸುರೇಶ ಅಂಗಡಿ ಅವರೇ ಬರಬೇಕಾಯಿತು ಎಂದರು. ಶಾಸಕರಾದ ಶಾಸಕ ಅನಿಲ ಬೆನಕೆ, ದುರ್ಯೋಧನ ಐಹೊಳೆ, ಆನಂದ ಮಾಮನಿ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಡಿಸಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ, ಡಿಸಿಪಿ ಯಶೋಧಾ ಒಂಟಗೂಡಿ ಉಪಸ್ಥಿತರಿದ್ದರು. ನಂತರ ರಾತ್ರಿ 9 ಗಂಟೆಗೆ ನವವಧುವಿನಂತೆ ಶೃಂಗಾರಗೊಂಡಿದ್ದ ನೂತನ ರೈಲು ಬೆಂಗಳೂರು ಕಡೆಗೆ ಪ್ರಯಾಣ ಬೆಳೆಸಿತು.

ಟಾಪ್ ನ್ಯೂಸ್

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.