ಜೀರ್ಣೋದ್ಧಾರಕ್ಕೆ ಚೆಕ್ ಹಸ್ತಾಂತರ
Team Udayavani, May 26, 2020, 10:12 AM IST
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ದೇವಾಲಯಗಳ ಜೀರ್ಣೋದ್ಧಾರಕ್ಕಾಗಿ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ತಮ್ಮ ಶಾಸಕರ ನಿಧಿಯಿಂದ ಅನುದಾನದ ಚೆಕ್‌ಗಳನ್ನು ಹಸ್ತಾಂತರಿಸಿದರು.
ಬಿಜಗರಣಿ ಗ್ರಾಮದ ಬಾಹುಕಾಜೀ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಶಾಸಕರ ನಿಧಿಯಿಂದ 5 ಲಕ್ಷ ರೂ. ಮೊತ್ತದ ಚೆಕ್‌ನ್ನು ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳಿಗೆ ನೀಡಿದರು. ಮಾಸ್ತಮರ್ಡಿ ಗ್ರಾಮದ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 3 ಲಕ್ಷ ರೂ. ಮೊತ್ತದ ಚೆಕ್‌ನ್ನು ದೇವಸ್ಥಾನ ಕಮೀಟಿಯವರಿಗೆ ಹಸ್ತಾಂತರಿಸಿದರು.
ನಂತರ ಮಾತನಾಡಿದ ಶಾಸಕಿ ಹೆಬ್ಟಾಳಕರ, ಜಾತ್ರೆ, ಪುರಾಣ, ಪ್ರವಚನ ಮೂಲಕ ಸಮಾಜಕ್ಕೆ ಉತ್ತಮ ಸಂಸ್ಕಾರವನ್ನು ಕಲಿಸಿ ಕೊಡುವುದರಲ್ಲಿ ದೇವಸ್ಥಾನಗಳು ಪ್ರಮುಖ ಪಾತ್ರ ವಹಿಸುತ್ತಿವೆ. ದೇವಸ್ಥಾನ ಸಂಸ್ಕೃತಿಯ ಪ್ರತೀಕವಾಗಿದ್ದು, ನಮ್ಮ ಸಂಸ್ಕೃತಿ ಹಾಗೂ ಪರಂಪರೆಗಳನ್ನು ಉಳಿಸಿಕೊಂಡು ಹೋಗುವ ದಿಸೆಯಲ್ಲಿ ದೇವಸ್ಥಾನಗಳನ್ನು ಉಳಿಸಿ, ಬೆಳೆಸಬೇಕು ಎಂದು ಹೇಳಿದರು.
ಹಳ್ಳಿಗಳಲ್ಲಿ ಒಗ್ಗಟ್ಟು ಮತ್ತು ಅಭಿವೃದ್ಧಿ ಪರ ಮನೋಭಾವ ಬೆಳೆಯಬೇಕು. ಚುನಾವಣೆ ವೇಳೆ ರಾಜಕೀಯವಿದ್ದರೂ ಅಭಿವೃದ್ಧಿ ವಿಷಯದಲ್ಲಿ ಅದನ್ನು ಮೀರಿ ಸಹಕರಿಸಬೇಕು. ಎಲ್ಲರ ಸಹಕಾರವಿದ್ದಾಗ ಶಾಸಕನಾಗಿ ನನಗೂ ಹೆಚ್ಚು-ಹೆಚ್ಚು ಅಭಿವೃದ್ಧಿ ಕೆಲಸ ತರಲು ಸಾಧ್ಯವಾಗುತ್ತದೆ. ಗ್ರಾಮೀಣ ಕ್ಷೇತ್ರದಲ್ಲಿ ಅಂತಹ ಬದಲಾವಣೆ ಬರುತ್ತಿದ್ದು, ಎಲ್ಲರೂ ಪಕ್ಷ ಭೇದ ಮರೆತು ನನ್ನೊಂದಿಗೆ ಸಹಕರಿಸುತ್ತಿದ್ದಾರೆ. ಇದು ನನಗೆ ಖುಷಿ ತಂದಿದೆ. ಹೀಗಾಗಿಯೇ ಎರಡು ವರ್ಷದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ತರಲು ಸಾಧ್ಯವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.