ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣ ಅಪಾಯಕಾರಿ
Team Udayavani, May 15, 2019, 12:21 PM IST
ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು-ನೆರವು ಹಾಗೂ ಜಾಗೃತಿ ಕಾರ್ಯಕ್ರಮ ನಡೆಯಿತು.
ಬೆಳಗಾವಿ: ಸರಕು ಸಾಗಾಣಿಕೆ ಮಾಡುವ ಹಾಗೂ ಕಟ್ಟಡಗಳ ಸಾಮಾನುಗಳ ವಾಹನಗಳಲ್ಲಿ ಕಾರ್ಮಿಕರು ಮತ್ತು ವಿಧ್ಯಾರ್ಥಿಗಳನ್ನು ಸಾಗಿಸುವುದು ಅಪರಾಧ ಹಾಗೂ ಅಮಾನವಿಯ ಕೃತ್ಯ ಎಂದು ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತ ನಾಗೇಶ ಡಿ.ಜಿ. ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಎನ್‌ಡಬ್ಲೂಕೆಆರ್‌ಟಿಸಿ, ಮಾಲೀಕರು ಹಾಗೂ ಕಾರ್ಮಿಕ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ಕಾನೂನು ಅರಿವು-ನೆರವು ಹಾಗೂ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಒಂದು ಸಾರ್ವಜನಿಕ ಹಿತಾಸಕ್ತಿ ಆದೇಶ ಪಾಲನೆ ಮಾಡಲು ಇಲಾಖೆ ಅಧಿಕಾರಿಗಳ ಜೊತೆಗೆ ಕಾರ್ಮಿಕರು, ಸಾರ್ವಜನಿಕರು ಕೈಜೋಡಿಸಬೇಕು ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣ ಮಾಡುವಾಗ ಅಂತಹ ವಾಹನಗಳು ಅಪಘಾತಕ್ಕಿಡಾದಾಗ ಅಶಕ್ತರಾದವರಿಗೆ ಹಾಗೂ ಮೃತರ ಅವಲಂಬಿತರಿಗೆ ಯಾವುದೇ ವಿಮೆ ಸೌಲಭ್ಯ ದೊರೆಯುವುದಿಲ್ಲ ಎಂದು ಹೇಳಿದರು.
ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಒದಗಿಸುವ ಸಂಬಂಧ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಬಸ್‌ಗಳಿಲ್ಲದ ಕಡೆಗೆ ಅಗತ್ಯ ಸೇವೆ ಓದಗಿಸಲು ಕೋರಲಾಗುವುದು. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಯವರು ಹಾಗೂ ಕೈಗಾರಿಕೆಗಳ ಮಾಲೀಕರು ಸಾರಿಗೆ ಸಂಸ್ಥೆ ಬಸ್‌ಗಳ ಅವಶ್ಯಕ ಮಾರ್ಗಗಳ ಹಾಗೂ ವೇಳೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು ಎಂದರು.
ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ಎಸ್.ಸಿ.ಕಟ್ಟಿಮನಿ ಮಾತನಾಡಿ, ಮಕ್ಕಳನ್ನು ಪ್ರತಿದಿನ ಶಾಲೆಗೆ ಕಳುಹಿಸುವ ಸಂದರ್ಭದಲ್ಲಿ ಆಟೋಗಳಲ್ಲಿ ಅವಶ್ಯಕತೆಗೂ ಮೀರಿ ಮಕ್ಕಳ ಸಂಖ್ಯೆ ಇದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಈ ಕುರಿತು ಶಿಕ್ಷಣ ಇಲಾಖೆಯಿಂದ ಈಗಾಗಲೇ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಎಲ್ಲಾ ತಾಲೂಕು ಬಿಇಒ ಗಳಿಗೆ ಸುತ್ತೋಲೆ ಕಳುಹಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕರಾದ ವಿನುತಾ, ಸುಧಾ, ಅನಿಲ ಬಗಟಿ, ಪ್ರಗತಿ ಇಂಜನೀಯರಿಂಗ್‌ನ ಆಡಳಿತ ಸಿಬ್ಬಂದಿ ಉಪಸ್ಥಿತರಿದ್ದರು. ಪ್ರಗತಿ ಎಂಜಿನಿಯರಿಂಗ್ ವ್ಯವಸ್ಥಾಪಕ ಶಿವರಾಜ ಪಾಟೀಲ್ ಸ್ವಾಗತಿಸಿದರು. ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಜ್ಯೋತಿ ಎಂ.ಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.