ಮನೆ ಬಾಗಿಲಿಗೆ ಕ್ಷಯರೋಗ ತಪಾಸಣೆ
Team Udayavani, Nov 23, 2019, 1:19 PM IST
ಬೆಳಗಾವಿ: ಜಿಲ್ಲೆಯ ಎಲ್ಲ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನ. 25 ರಿಂದ ಮನೆ-ಮನೆಗೆ ಭೇಟಿ ನೀಡಿ ಕ್ಷಯರೋಗ ತಪಾಸಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಹೇಳಿದರು.
ಜಿಲ್ಲಾದ್ಯಂತ ಕ್ಷಯರೋಗ ಪತ್ತೆ ಅಭಿಯಾನವನ್ನು ನ.25 ರಿಂದ ಡಿ. 10 ರವರೆಗೆ ಆಯೋಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನದ ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಿ ಮಾತನಾಡಿದ ಆವರು, ಜಿಲ್ಲೆಯ ಒಟ್ಟಾರೆ 53 ಲಕ್ಷ ಜನಸಂಖ್ಯೆಯ ಮನೆ ಮನೆಗೆ ಬೇಟಿ ನೀಡಲಾಗುವುದು. ಈ ಆಂದೋಲನದಲ್ಲಿ ಪ್ರತಿಶತ 100 ರಷ್ಟು ಜನಸಂಖ್ಯೆಯನ್ನು ತಲುಪಿ ಕ್ಷಯರೋಗ ತಪಾಸಣೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ. ವಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರವು ಭಾರತವನ್ನು ಕ್ಷಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಭಾರತದಾದ್ಯಂತ ಕ್ಷಯ ಮುಕ್ತ ಸಮಾಜಕ್ಕಾಗಿ ಆಂದೋಲನವನ್ನು ಹಮ್ಮಿಕೊಂಡಿದೆ. ಇದಕ್ಕಾಗಿ ಜಿಲ್ಲಾದ್ಯಂತ 7636 ನುರಿತ ಆರೋಗ್ಯ ಸಹಾಯಕರು ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಯಂ ಸೇವಕರನ್ನೊಳಗೊಂಡ ತಂಡಗಳನ್ನು ರಚಿಸಲಾಗುವುದು. ಪ್ರತಿ ತಂಡವು ಪ್ರತಿದಿನ 20 ರಿಂದ 30 ಮನೆಗಳಿಗೆ ಭೇಟಿ ನೀಡಿ ಕುಟುಂಬದ ಎಲ್ಲ ಸದಸ್ಯರಿಗೆ ಕ್ಷಯರೋಗ ಕುರಿತು ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಕ್ಷಯರೋಗದ ಲಕ್ಷಣಗಳುಳ್ಳ ಕುಟುಂಬದ ಸದಸ್ಯರ ಕಫವನ್ನು ಸ್ಥಳದಲ್ಲಿಯೇ ಸಂಗ್ರಹಿಸಿ ತಪಾಸಣೆಗೆ ನಿಯೋಜಿತ ಕಫ ತಪಾಸಣಾ ಕೇಂದ್ರಕ್ಕೆ ಕಳುಹಿಸಿ, ತಪಾಸಿಸಿ ಕ್ಷಯರೋಗವಿದ್ದುದು ಕಂಡು ಬಂದಲ್ಲಿ ಸ್ಥಳದಲ್ಲಿಯೇ ಉಚಿತ ಚಿಕಿತ್ಸೆ ನೀಡಲಾಗುವುದು. ಅದಲ್ಲದೇ ಜಿಲ್ಲೆಯ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಚಿತ ಕ್ಷ-ಕಿರಣ ತಪಾಸಣೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಇದಲ್ಲದೇ ಕ್ಷ-ಕಿರಣ ಪರೀಕ್ಷೆಯಲ್ಲಿ ಸಂಶಯಾಸ್ಪದ ಕ್ಷಯರೋಗಿಗಳಿಗೆ ಸಿಬಿನ್ಯಾಟ್ (ತ್ವರಿತ ಕ್ಷಯರೋಗ ತಪಾಸಣಾ ಯಂತ್ರ) ಸೌಲಭ್ಯವನ್ನು ಜಿಲ್ಲೆಯ ಅಥಣಿ, ಗೋಕಾಕ, ಚಿಕ್ಕೋಡಿ, ಸವದತ್ತಿ ಹಾಗೂ ಬೆಳಗಾವಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕಲ್ಪಿಸಲಾಗುವುದು ಎಂದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.