ಎರಡು ಸೇತುವೆ ಸಂಚಾರ ಮುಕ್ತ
Team Udayavani, Sep 13, 2019, 11:05 AM IST
ಚಿಕ್ಕೋಡಿ: ಸದಲಗಾ-ಬೋರಗಂವ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ.
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರ ಹಾಗೂ ರಾಜ್ಯದ ಗಡಿ ಭಾಗದಲ್ಲಿ ಮಳೆಯ ಅಬ್ಬರ ಸಂಪೂರ್ಣ ತಗ್ಗಿದ್ದು ಚಿಕ್ಕೋಡಿ ತಾಲೂಕಿನ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟ ಇಳಿಮುಖವಾಗಿದೆ. ಚಿಕ್ಕೋಡಿ ತಾಲೂಕಿನ ಎರಡು ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ.
ಮಹಾರಾಷ್ಟ್ರದ ಕೊಯ್ನಾ, ರಾಧಾನಗರಿ, ಕಾಳಮ್ಮವಾಡಿ, ದೋಮ್ ಮುಂತಾದ ಜಲಾಶಯಗಳಿಂದ ಬಿಡುವ ನೀರಿನ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿ ಗಡಿ ಭಾಗದ ಮೂರು ನದಿಗಳ ನೀರಿನ ಮಟ್ಟದಲ್ಲಿ ಎರಡು ಅಡಿಯಷ್ಟು ಇಳಿಕೆ ಕಂಡು ಬಂದಿದೆ. ಇದರಿಂದ ದೂಧಗಂಗಾ ನದಿಯ ಸದಲಗಾ-ಬೋರಗಾಂವ, ಯಕ್ಸಂಬಾ-ಧಾನವಾಡ ಸೇತುವೆ ಮೇಲಿನ ನೀರು ಕಡಿಮೆಯಾಗಿದ್ದು, ಎರಡು ಸೇತುವೆ ಮೇಲೆ ಸಂಚಾರ ಪುನಃ ಆರಂಭವಾಗಿವೆ.
ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ದಿಂದ ಕೃಷ್ಣಾ ನದಿಗೆ 1.56 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇದಗಂಗಾ ನದಿಗಳಿಂದ 29 ಸಾವಿರ ಕ್ಯೂಸೆಕ್ ನೀರು ಹರಿದು ಕೃಷ್ಣಾ ನದಿಗೆ ಸೇರುತ್ತದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ ಒಟ್ಟು 1.84 ಲಕ್ಷ ಕ್ಯೂಸೆಕ್ ನೀರು ಹರಿದು ಹಿಪ್ಪರಗಿ ಬ್ಯಾರೇಜಿಗೆ ಹೋಗುತ್ತಿದೆ. ಹಿಪ್ಪರಗಿ ಬ್ಯಾರೇಜ್ದಿಂದ 1.99 ಲಕ್ಷ ಕ್ಯೂಸೆಕ್ ನೀರನ್ನು ಆಲಮಟ್ಟಿಗೆ ಹರಿ ಬಿಡಲಾಗುತ್ತಿದೆ.
ಕೊಂಕಣ ಭಾಗದಲ್ಲಿ ಮಳೆ ತಗ್ಗಿದೆ. ನದಿಗಳ ನೀರಿನ ಮಟ್ಟದಲ್ಲಿ ಇಳಿಕೆ ಕಂಡು ಬಂದಿದೆ. ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿ ನೀರಿನ ಮಟ್ಟದಲ್ಲಿ ಗುರುವಾರ 15 ಸಾವಿರ ಕ್ಯೂಸೆಕ್ ನೀರು ಕಡಿಮೆಯಾಗಿದೆ. ಶನಿವಾರ ಸಂಜೆ ಮತ್ತು ರವಿವಾರ ಬೆಳಗ್ಗೆ ಚಿಕ್ಕೋಡಿ ತಾಲೂಕಿನ ಎಲ್ಲ ಸೇತುವೆಗಳು ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಮಾಡಲಾಗಿದೆ ಎಂದು ನೀರಾವರಿ ನಿಗಮದ ಕಾರ್ಯನಿರ್ವಾಹಕ ಅಭಿಯಂತ ಸಿ.ಡಿ. ಪಾಟೀಲ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.