ಎರಡು ರಾಷ್ತ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಗ್ರೀನ್ ಸಿಗ್ನಲ್ : ಸಂಸದ ಜೊಲ್ಲೆ
Team Udayavani, Aug 27, 2021, 5:11 PM IST
ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಎರಡು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದರು.
ನಿರಂತರ ಪ್ರಯತ್ನದಿಂದ ಎರಡು ರಾಷ್ಟ್ರೀಯ ಹೆದ್ದಾರಿಗಳ ಮೇಲ್ದರ್ಜೆಗೆ ಏರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ಎಂದರು.
ಇದನ್ನೂ ಓದಿ : ಮೈಸೂರು ಅತ್ಯಾಚಾರ ಪೊಲೀಸ್, ರಾಜಕಾರಣಿಗಳ ವೈಫಲ್ಯಕ್ಕೆ ಸಾಕ್ಷಿ : ಇಂದ್ರಜಿತ್ ಲಂಕೇಶ್
ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ನಿರಂತರ ಸಂಪರ್ಕ ಮಾಡುವ ಮೂಲಕ ಮೊದಲ ಹಂತದಲ್ಲಿ ಬೆಳಗಾವಿಯ ಹೊನಗಾದಿಂದ ಸಂಕೇಶ್ವರ ಬೈ ಪಾಸ್ ವರೆಗೆ ಒಟ್ಟು 1295.44 ಕೋಟಿ ವೆಚ್ಚದ 40 ಕಿಮೀ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ.
ಇನ್ನು ಸಂಕೇಶ್ವರ್ ಬೈಪಾಸ್ ನಿಂದ ಕರ್ನಾಟಕ ಮಹಾರಾಷ್ಟ್ರ ಗಡಿವರೆಗೆ 1223.20 ಕೋಟಿ ರೂ ಅನುದಾನದಲ್ಲಿ ರಾಷ್ಟ್ರೀಯ ಹೆದ್ದಾರಿ 37 ನ್ನು 6 ಲೈನ್ ಮಾಡಿ ಮೇಲ್ದರ್ಗೆಗೆ ಏರಿಸಲು ಟೆಂಡರ್ ಕರೆಯಲಾಗಿದೆ.
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಭಾಗದಲ್ಲಿ ಎರಡೂ ರಾಜ್ಯಗಳ ನಡುವೆ ಅಧಿಕ ವಾಹನ ಸಂಚಾರ ಇದ್ದು, ಈ ಭಾಗದಲ್ಲಿ ಸುಗಮ ಸಾರಿಗೆಗಾಗಿ ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೇರಿಸುವ ಬೇಡಿಕೆ ಬಹಳ ದಿನಗಳಿಂದ ಕೇಳಿ ಬರುತ್ತಿತ್ತು. ಈಗ ತಮ್ಮ ನಿರಂತರ ಪರಿಶ್ರಮದಿಂದ ಕೇಂದ್ರ ಸರ್ಕಾರ ಎರಡೂ ಯೋಜನೆಗಳಿಗೆ ಅನುಮತಿ ನೀಡಿ ಟೆಂಡರ್ ಕರೆದಿರುವುದು ಸಂತಸದ ವಿಷಯ ಎಂದರು.
ಈ ಯೋಜನೆಗೆ ಅನುಮತಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ 3 ಹೊಸ ಗೋದಾಮುಗಳನ್ನು ಆರಂಭಿಸಿದೆ ಫ್ಲಿಪ್ ಕಾರ್ಟ್ : 14 ಸಾವಿರ ಉದ್ಯೋಗ ಸೃಷ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.