UK ಚೆವನಿಂಗ್-ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಒಪ್ಪಂದಕ್ಕೆ ಸಹಿ
ಮುಂದಿನ 3 ವರ್ಷಗಳ ಕಾಲ ಒಪ್ಪಂದ, ಒಟ್ಟು 15 ವಿದ್ಯಾರ್ಥಿಗಳಿಗೆ ನೆರವು
Team Udayavani, Dec 16, 2024, 9:15 PM IST
ಸುವರ್ಣ ವಿಧಾನಸೌಧ: ಯುನೈಟೆಡ್ ಕಿಂಗ್ ಡಂ (ಯುಕೆ)ನಲ್ಲಿ ಮುಂದಿನ 3 ವರ್ಷ (2024-27) ಗಳ ಕಾಲ ಒಟ್ಟು 15 ವಿದ್ಯಾರ್ಥಿನಿಯರಿಗೆ 1 ವರ್ಷದ ಸ್ನಾತಕೋತ್ತರ ಪದವಿಗೆ ವಿದ್ಯಾರ್ಥಿ ವೇತನ ನೀಡುವ ಚೆವನಿಂಗ್-ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿ ವೇತನಕ್ಕೆ ಸಂಬಂಧ ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಮತ್ತು ಚೆವನಿಂಗ್ ಸೆಕ್ರೆಟರಿಯೆಟ್ ಮಧ್ಯೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಸುವರ್ಣ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಸಿಎಂ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀಕರ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಎನ್. ಮಂಜುಶ್ರೀ, ಕರ್ನಾಟಕದ ಬ್ರಿಟಿಷ್ ಡೆಪ್ಯುಟಿ ಹೈ ಕಮೀಷನರ್ ಚಂದ್ರು ಐಯರ್, ಚೆವನಿಂಗ್ ಸಂಸ್ಥೆ ಸುಪ್ರಿಯಾ ಚಾವ್ಲಾ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ರಾಜ್ಯದ ಸರ್ಕಾರಿ ಕಾಲೇಜುಗಳು ಮತ್ತು ಎಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪಡೆದ ವಿದ್ಯಾರ್ಥಿನಿಯರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ. ವಿದ್ಯಾರ್ಥಿ ವೇತನ ಪಡೆದ ಮೊದಲ ಬ್ಯಾಚ್ 2025ರ ಆಗಸ್ಟ್ ನಲ್ಲಿ ಯುಕೆಯ ವಿವಿಗಳಲ್ಲಿ ತಮ್ಮ ವ್ಯಾಸಂಗ ಆರಂಭಿಸಲಿದ್ದಾರೆ. ಯುಕೆ ವಿವಿಗಳಲ್ಲಿ ಪ್ರವೇಶ ಪಡೆದ ಬಳಿಕ ವಿದ್ಯಾರ್ಥಿನಿಯರು ಈ ಸ್ಕಾಲರ್‌ಶಿಪ್‌ಗೆ ಅರ್ಹರಾಗಲಿದ್ದಾರೆ.
ಸ್ಕಾಲರ್‌ಶಿಪ್‌ಗೆ ಅರ್ಹತೆ ಪಡೆದ ವಿದ್ಯಾರ್ಥಿನಿಯರ ಬೋಧನಾ ಶುಲ್ಕ, ಪ್ರಯಾಣ ಮತ್ತು ವಸತಿ ವೆಚ್ಚವನ್ನು ರಾಜ್ಯ ಸರ್ಕಾರ ಮತ್ತು ಚೆವನಿಂಗ್ ಸೆಕ್ರೆಟರಿಯೆಟ್ ಭರಿಸಲಿದೆ. ಪ್ರತಿ ವಿದ್ಯಾರ್ಥಿನಿಗೆ ರಾಜ್ಯ ಸರ್ಕಾರ 20 ಲಕ್ಷ ರೂ. ಮತ್ತು ಚೆವನಿಂಗ್ ಸೆಕ್ರೆಟರಿಯೇಟ್ 20 ಲಕ್ಷ ರೂ. ನೀಡಲಿದೆ. ಒಟ್ಟು 3 ವರ್ಷಕ್ಕೆ 6 ಕೋಟಿ ರೂ. ಈ ಯೋಜನೆಗೆ ವಿನಿಯೋಗವಾಗಲಿದ್ದು, ರಾಜ್ಯ ಸರ್ಕಾರ ಮತ್ತು ಚೆವನಿಂಗ್ ಸೆಕ್ರಟರಿಯೇಟ್ ತಲಾ 3 ಕೋಟಿ ರೂ. ನೀಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು 0 ಪರ್ಸೆಂಟ್ ಅಭಿವೃದ್ಧಿ,100 ಪರ್ಸೆಂಟ್ ಭ್ರಷ್ಟಾಚಾರದ ಸರಕಾರ: ಸುನಿಲ್
ಠೇವಣಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಕೃಷ್ಣ ಬೈರೇಗೌಡ
Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್ ಆಸ್ಪತ್ರೆ: ಶರಣಪ್ರಕಾಶ್ ಪಾಟೀಲ್
Online Gaming: ಪ್ರತ್ಯೇಕ ಚರ್ಚೆಗೆ ಪಕ್ಷಾತೀತವಾಗಿ ಒತ್ತಾಯ
Almatti ಡ್ಯಾಂ ವಿಸ್ತರಣೆಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…
T20; ವೆಸ್ಟ್ ಇಂಡೀಸ್ ಎದುರು ಬಾಂಗ್ಲಾದೇಶ ಗೆಲುವಿನ ಆರಂಭ
T20I;ಡಬಲ್ ಹ್ಯಾಟ್ರಿಕ್ ಸಾಧನೆ ಮೆರೆದ ಆರ್ಜೆಂಟೀನಾದ ಫೆನೆಲ್
Karnataka; ಸರಕಾರಿ ಅಂಗವಿಕಲ ನೌಕರರ ಪ್ರಯಾಣ ಭತ್ತೆ ದರ ಪರಿಷ್ಕರಣೆ
Gukesh Dommaraju; ಚದುರಂಗ ಚಾಂಪಿಯನ್ ಗೆ ತವರೂರು ಚೆನ್ನೈಯಲ್ಲಿ ಭವ್ಯ ಸ್ವಾಗತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.