ಉಳ್ಳವರು ಕಾರ್ಡ್‌ ಮರಳಿಸುವರೇನಯ್ಯ?

Team Udayavani, Feb 7, 2020, 12:37 PM IST

bg-tdy-1

ಬೆಳಗಾವಿ: ನಕಲಿ ದಾಖಲೆ ನೀಡಿ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಸ್ಥಿತಿವಂತರು ಸ್ವಯಂ ಪ್ರೇರಣೆಯಿಂದ ವಾಪಸ್‌ ನೀಡಲು ಮುಂದೆ ಬಂದಿದ್ದು, ಈವರೆಗೆ 8 ಸಾವಿರಕ್ಕೂ ಹೆಚ್ಚು ಕಾರ್ಡುಗಳು ಜಮಾ ಆಗಿವೆ. ಇನ್ನೂ ಉಳಿದ ಉಳ್ಳವರು ವಾಪಸು ಮಾಡುವರೇನಯ್ಯ ಎಂಬ ಪ್ರಶ್ನೆ ಜಿಲ್ಲಾಡಳಿತದ್ದಾಗಿದೆ.

ಪಡಿತರ ಚೀಟಿಗಳಿಗೆ ಆಧಾರ್‌ ಜೋಡಣೆ ಮಾಡಿದ ನಂತರ ಲಕ್ಷಾಂತರ ನಕಲಿ ಕಾರ್ಡುಗಳು ರಾಜ್ಯದಲ್ಲಿವೆ ಎಂಬುದು ಪತ್ತೆಯಾಗಿದೆ. ಇ-ಕೆವೈಸಿ ಮಾಡಿಸಿಕೊಳ್ಳುವ ವೇಳೆಯೂ ಅನೇಕರು ಬೋಗಸ್‌ ಪಡಿತರ ಕಾರ್ಡ್‌ ಹೊಂದಿದ್ದನ್ನು ಗುರುತಿಸಲಾಗಿದೆ. ಹೀಗಾಗಿ ಬಡತನ ರೇಖೆಗಿಂತ ಕೆಳಗಿನವರಿಗೆ ನೀಡಲಾಗುವ ಬಿಪಿಎಲ್‌ ಪಡಿತರ ಚೀಟಿಗಳನ್ನು ಹಿಂತಿರುಗಿಸಬೇಕೆಂಬ ಆದೇಶಕ್ಕೆ ಜಿಲ್ಲೆಯಲ್ಲಿ ಈವರೆಗೆ 8 ಸಾವಿರಕ್ಕೂ ಹೆಚ್ಚು ಜಮಾ ಆಗಿವೆ.

ವಾಪಸ್‌ ಮಾಡಲು ಕಾಲಾವಕಾಶ: ಒಂದು ವೇಳೆ ಸ್ಥಿತಿವಂತರು ಬಿಪಿಎಲ್‌ ಕಾರ್ಡು ಹೊಂದಿದ್ದರೆ ಅಂಥವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವ ಎಚ್ಚರಿಕೆಗೆ ಹೆದರಿ ಕಾರ್ಡ್‌ಗಳನ್ನು ಜಮಾ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 8124 ಕಾರ್ಡುಗಳು ಜಮಾಗೊಂಡಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜನರಿಗೆ ಇನ್ನಷ್ಟು ಕಾಲಾವಕಾಶ ನೀಡಿದೆ. ಸುಳ್ಳು ದಾಖಲೆ ನೀಡಿ ಪಡಿತರ ಕಾರ್ಡು ಪಡೆದವರು ಕೂಡಲೇ ಬಂದು ಸರ್ಕಾರಕ್ಕೆ ವಾಪಸ್‌ ಮಾಡಬೇಕು ಎಂಬುದೇ ಅಧ್ಯರ್ಪಣೆ ಯೋಜನೆಯ ಉದ್ದೇಶವಾಗಿದೆ.

ಬನ್ನಿ ಶರಣಾಗಿ: ಯಾವುದೇ ಕ್ರಮ ಇಲ್ಲದೇ ಪಡಿತರ ಕಾರ್ಡುಗಳನ್ನು ಜಮಾ ಮಾಡಲು ಸೆ. 2019ರವರೆಗೆ ಗಡುವು ನೀಡಲಾಗಿತ್ತು. ಅದು ಈಗ ಫೆಬ್ರುವರಿವರೆಗೆ ಈ ಅವಧಿ ವಿಸ್ತರಣೆ ಮಾಡಲಾಗಿದ್ದು, ರಾಜ್ಯದ ಆರ್ಥಿಕ ಸ್ಥಿತಿ ಉತ್ತಮಗೊಳಿಸಲು ಸ್ಥಿತಿವಂತರು ಕೈ ಜೋಡಿಸಬೇಕು ಎಂದು ಇಲಾಖೆ ಮನವಿ ಮಾಡಿದೆ.

ಜಿಲ್ಲೆಯಲ್ಲಿ ಒಟ್ಟು 11,24, 851 ಪಡಿತರ ಕಾರ್ಡುದಾರರಿದ್ದು, ಈ ಪೈಕಿ 1266 ಕಾರ್ಡುಗಳನ್ನು ನೇರವಾಗಿ ರದ್ದುಗೊಳಿಸಲಾಗಿದೆ. 3338 ಕಾರ್ಡುಗಳು ಜಮಾ ಆಗಿವೆ. ಬಿಪಿಎಲ್‌ದಿಂದ ಎಪಿಎಲ್‌ಗೆ 3726 ಕಾರ್ಡುಗಳನ್ನು ಪರಿವರ್ತಿಸಲಾಗಿದೆ. 2398 ಕಾರ್ಡು ತಾತ್ಕಾಲಿಕವಾಗಿ ಅಮಾನತಿನಲ್ಲಿಡಲಾಗಿದೆ. ಕಾನೂನು ಬಾಹಿರವಾಗಿ ಪಡಿತರ ಚೀಟಿ ಹೊಂದಿದವರಿಂದ ಒಟ್ಟು 36.91 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

ಸರ್ಕಾರದ ಆದೇಶದಂತೆ ಸ್ಥಿತಿವಂತರು ನೇರವಾಗಿ ಬಂದು ಪಡಿತರ ಚೀಟಿಗಳನ್ನು ವಾಪಸ್‌ ಮಾಡುತ್ತಿದ್ದಾರೆ. ಇನ್ನುಳಿದವರೂ ನೇರವಾಗಿ ಬಂದು ಜಮಾ ಮಾಡಲು ಅವಕಾಶ ಇದೆ. ಇಲಾಖೆ ಪರಿಶೀಲನೆ ನಡೆಸುವಾಗ ಸಿಕ್ಕಿ ಬಿದ್ದರೆ ದಂಡದ ವಸೂಲಿ ಮಾಡುವುದರ ಜತೆಗೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು. ಜತೆಗೆ ಸರ್ವರ್‌ ಸರಿಯಾಗಿ ಕೆಲಸ ಮಾಡುತ್ತಿದ್ದು, ಫೆ. 10ರೊಳಗೆ ಎಲ್ಲರೂ ಇ-ಕೆವೈಸಿ ಮಾಡಿಸಿಕೊಳ್ಳಬೇಕು. -ಚನ್ನಬಸಪ್ಪ ಕೊಡ್ಲಿ, ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ

-ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.