ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ
Team Udayavani, Jan 4, 2022, 8:16 PM IST
ಬೆಳಗಾವಿ: ಜಿಲ್ಲೆಯಲ್ಲಿ 298 ಲಸಿಕಾ ಕೇಂದ್ರ ಸ್ಥಾಪಿಸುವ ಮೂಲಕ 2.47 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಕುರಿತು ಮಕ್ಕಳು ಹಾಗೂ ಪಾಲಕರಲ್ಲಿ ಜಾಗೃತಿ ಮೂಡಿಸಬೇಕು. ಮಕ್ಕಳ ಮನವೊಲಿಸಿ 15ರಿಂದ 18 ವಯಸ್ಸಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ನೀಡಬೇಕು ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ನಗರದ ಎಸ್.ಜಿ. ಬಾಳೇಕುಂದ್ರಿ ಎಂಜಿನಿಯರ್ ಕಾಲೇಜು ಸಭಾಂಗಣದಲ್ಲಿ ಸೋಮವಾರ 15ರಿಂದ 18 ವಯಸ್ಸಿನ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕಾಕರಣ ಜಿಲ್ಲಾಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಜಿಲ್ಲೆಯ 2.47 ಲಕ್ಷ ಮಕ್ಕಳಿಗೆ ಲಸಿಕೆ ಒದಗಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.
ಸಂಭವನೀಯ 3ನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ಲಸಿಕಾಕರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜ. 10ರಿಂದ ಬೂಸ್ಟರ್ ಡೋಸ್ ನೀಡಲಾಗುವುದು. ಲಸಿಕಾಕರಣ ಕುರಿತು ಮಾಧ್ಯಮಗಳು ಮಕ್ಕಳು ಮತ್ತು ಪಾಲಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಲಸಿಕಾಕರಣ ಯಶಸ್ಸಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಸಂಭವನೀಯ 3ನೇ ಅಲೆಯ ನಿರ್ವಹಣೆಗೆ ಸಂಬಂ ಧಿಸಿದಂತೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲರೂ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಿ ಸೋಂಕು ಹರಡುವಿಕೆ ತಡೆಗಟ್ಟಲು ಸಹಕರಿಸಬೇಕು. ದೇಶದಲ್ಲಿ 240 ಕೋಟಿ ಲಸಿಕೆಗಳನ್ನು ಉತ್ಪಾದಿಸುವ ಕೆಲಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಡಿದರು. ಇದಲ್ಲದೇ ಆಕ್ಸಿಜನ್ ಬೆಡ್, ಆಕ್ಸಿಜನ್ ಉತ್ಪಾದನೆ, ಪ್ರಯೋಗಾಲಯ ಸ್ಥಾಪನೆ ಸೇರಿದಂತೆ ದೇಶದ ವೈದ್ಯಕೀಯ ವ್ಯವಸ್ಥೆ ಬಲಪಡಿಸಿದರು.
ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಜತೆಗೆ ಪ್ರತಿ ಜಿಲ್ಲೆಗಳಲ್ಲಿ ಪ್ರಯೋಗಾಲಯ ಹಾಗೂ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಕೂಡ ಸ್ಥಾಪಿಸಲು ಕ್ರಮಗಳನ್ನು ಕೈಗೊಂಡರು ಎಂದು ವಿವರಿಸಿದರು. ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ ಮಾತನಾಡಿ, ದೇಶದ ಭವಿಷ್ಯವಾಗಿರುವ ಮಕ್ಕಳನ್ನು ಸೋಂಕಿನಿಂದ ರಕ್ಷಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಇದನ್ನು ಅರಿತುಕೊಂಡು ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದರು.
ಆರ್‌ಸಿಎಚ್ ಅ ಧಿಕಾರಿ ಡಾ| ಐ.ಪಿ. ಗಡಾದ ಪ್ರಾಸ್ತಾವಿಕ ಮಾತನಾಡಿದರು. ಶಾಸಕ ಅನಿಲ್ ಬೆನಕೆ ಅಧ್ಯಕ್ಷತೆ ವಹಿಸಿದ್ದರು. ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಪೊಲೀಸ್ ಆಯುಕ್ತ ಡಾ| ಎಂ.ಬಿ. ಬೋರಲಿಂಗಯ್ಯ, ಎಸ್ಪಿ ಲಕ್ಷ್ಮಣ ನಿಂಬರಗಿ, ಮಹಾನಗರ ಪಾಲಿಕೆ ಆಯುಕ್ತ ಡಾ| ರುದ್ರೇಶ ಘಾಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ಎಸ್.ವಿ. ಮುನ್ಯಾಳ, ಡಿಡಿಪಿಐ ಬಸವರಾಜ ನಾಲತವಾಡ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.