ಹಕ್ಕು ಪತ್ರ ನೀಡಲು ಸಂತ್ರಸ್ತರ ಹರತಾಳ
Team Udayavani, Nov 19, 2019, 4:09 PM IST
ರಾಯಬಾಗ: 2005ರ ಕೃಷ್ಣಾ ನದಿ ಪ್ರವಾಹದಿಂದ ಸಂತ್ರಸ್ತರಾದವರಿಗೆ ಮನೆ ಹಕ್ಕು ಪತ್ರ ನೀಡುವಂತೆ ಹಾಗೂ ಸಂತ್ರಸ್ತರಿಂದ ಹಣ ಪಡೆದ ಗ್ರಾಮ ಲೆಕ್ಕಾಧಿಕಾರಿಯನ್ನು ಸೇವೆಯಿಂದ ವಜಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಹಾಗೂ ಕುಡಚಿ ಸಂತ್ರಸ್ತರು ಮಿನಿವಿಧಾನಸೌಧ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಕುಡಚಿ ಪಟ್ಟಣದಲ್ಲಿ 2005ರ ಕೃಷ್ಣಾ ನದಿ ಪ್ರವಾಹದಿಂದ ಮುಳುಗಡೆಗೊಂಡ ಸಂತ್ರಸ್ತ ಕುಟುಂಬದವರಿಗೆ ವಾಸಿಸಲು ಸರ್ಕಾರ ಕುಡಚಿ ಗ್ರಾಮದ ವ್ಯಾಪ್ತಿಯಲ್ಲಿ ಖಾಸಗಿಯವರಿಂದ ಜಮೀನು ಪಡೆದು ನಿರಾಶ್ರಿತ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಾಣ ಮಾಡಿತ್ತು. ಆದರೆ ಕಳೆದ 10-14 ವರ್ಷಗಳುಕಳೆದರೂ ಇಲ್ಲಿಯವರೆಗೆ ಫಲಾನುಭವಿಗಳಿಗೆ ಮನೆಗಳ ಹಕ್ಕು ಪತ್ರಗಳನ್ನು ನೀಡಿಲ್ಲ. 2016ರಲ್ಲಿ ಜಿಲ್ಲಾಧಿಕಾರಿಗಳು ಸಂತ್ರಸ್ತ ಕುಟುಂಬದವರಿಗೆ ಹಕ್ಕು ಪತ್ರ ವಿತರಿಸಿ, ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ತಹಶೀಲ್ದಾರ್ ಅವರಿಗೆ ಆದೇಶ ಮಾಡಿದ್ದರೂ ಇನ್ನುವರೆಗೂ ಯಾವುದೇ ಹಕ್ಕು ಪತ್ರ ನೀಡಿಲ್ಲ ಎಂದು ಮನವಿಯಲ್ಲಿ ಆರೋಪಿಸಿದರು.
ಜಿಲ್ಲಾಧಿಕಾರಿಗಳ ಆದೇಶ ಮಾಡಿದ ನಂತರ ಕುಡಚಿ ಗ್ರಾಮಲೆಕ್ಕಾಧಿಕಾರಿ ಎಚ್.ಕೆ. ದಶವಂತ ಪರಿಶೀಲನೆ ನೆಪದಲ್ಲಿ ಸಂತ್ರಸ್ತ ಕುಟುಂಬಗಳಿಂದ ಹಣ ಪಡೆದು ಸಂತ್ರಸ್ತರಿಗೆ ಮೋಸ ಮಾಡಿದ್ದಾರೆ. ಇಂಥ ಗ್ರಾಮ ಲೆಕ್ಕಾಧಿಕಾರಿಯನ್ನು ಶೀಘ್ರವೇ ವಜಾಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಅಮೀನ ಜಾತಗಾರ, ಶ್ರೀಕಾಂತ ತಳವಾರ, ಸಂಜು ತಳವರಕರ, ಪ್ರಶಾಂತ ಕಾಂಬಳೆ, ಫಾತಿಮಾ ಶೇಖ, ಸುಂದ್ರವ್ವ ಕಟ್ಟಿಮನಿ, ಕುತಬುದ್ದಿನ ಮುಜಾವರ, ಮುಜಫರ ಸಂದರವಾಲೆ ಸೇರಿದಂತೆ ಸಂತ್ರಸ್ತರು ಮತ್ತು ಸಂಘಟನೆ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.