ತುರಮರಿ ಕಚಡಾ ಡಿಪೋ ವಿಸ್ತರಣೆಗೆ ಗ್ರಾಮಸ್ಥರ ವಿರೋಧ
Team Udayavani, Dec 28, 2019, 12:17 PM IST
ಬೆಳಗಾವಿ: ನಗರದ ತ್ಯಾಜ್ಯವನ್ನು ತಾಲೂಕಿನ ತುರಮುರಿ ಗ್ರಾಮದ ವಿಲೇವಾರಿ ಘಟಕಕ್ಕೆ ನಿತ್ಯ ಸ್ಥಳಾಂತರ ಮಾಡಲಾಗುತ್ತಿದ್ದು, ಈ ಘಟಕ ವಿಸ್ತರಣೆ ಮಾಡಲು ಹೊರಟಿರುವ ಜಿಲ್ಲಾಡಳಿತ ಕ್ರಮ ಖಂಡಿಸಿ ಶುಕ್ರವಾರ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ನೇತೃತ್ವದಲ್ಲಿ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಮಹಾನಗರ ಪಾಲಿಕೆ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಗ್ರಾಮಕ್ಕೆ ಬಂದು ಸಾರ್ವಜನಿಕರ ಆಹವಾಲು ಸ್ವೀಕರಿಸುತ್ತಿದ್ದಾಗ ವಿರೋಧ ವ್ಯಕ್ತಪಡಿಸಿದ ಗ್ರಾಮಸ್ಥರು ಶಾಸಕಿ ಹೆಬ್ಟಾಳಕರ ಅವರ ನೇತೃತ್ವದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದರು. ನಗರದ ಹೊಲಸನ್ನು ಹಳ್ಳಿಗೆ ತಂದು ಬಿಸಾಕುತ್ತಿರುವುದರಿಂದ ಪರಿಸರ ಮಾಲಿನ್ಯದ ಜತೆಗೆ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮಸ್ಥರೊಂದಿಗೆ ರಸ್ತೆಗಿಳಿದ ಹೆಬ್ಟಾಳಕರ ಅವರು ರಾಜ್ಯ ಹೆದ್ದಾರಿ ಮೆಲೆ ಕುಳಿತು ಜಿಲ್ಲಾಡಳಿತ ವಿರುದ್ಧ ಕಿಡಿಕಾರಿದರು. ಈಗಾಗಲೇ ಕಚಡಾ ಡಿಪೋ ಇದೆ. ಈಗ ಅದನ್ನು ಮತ್ತಷ್ಟು ವಿಸ್ತರಣೆ ಮಾಡಲು ಹೊರಟಿರುವ ಜಿಲ್ಲಾಡಳಿತ ಕ್ರಮ ಸರಿಯಲ್ಲ. ಡಿಪೋದ ಕಸದ ಸಂಸ್ಕರಣಾ ಸಾಮರ್ಥ್ಯ ಹೆಚ್ಚಿಸಲು ನಾವು ಬಿಡುವುದಿಲ್ಲ. ಈಗಿರುವ ಡಿಪೋ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಶಾಸಕಿಯಾದಾಗಿನಿಂದ ಒತ್ತಡ ಹೇರುತ್ತಿದ್ದರೂ ಅಧಿಕಾರಿಗಳು ಕೇಳುತ್ತಿಲ್ಲ. ಏನೇ ಆದರೂ ವಿಸ್ತರಣೆಗೆ ಅವಕಾಶ ಮಾಡಿ ಕೊಡುವುದಿಲ್ಲ ಎಂದರು.
ಸದ್ಯ ಇರುವ ತ್ಯಾಜ್ಯ ವಿಲೇವಾರಿ ಘಟಕವನ್ನು 100 ಟನ್‌ದಿಂದ 450 ಟನ್‌ವರೆಗೆ ವಿಸ್ತರಿಸಲು ಜಿಲ್ಲಾಡಳಿತ ಮುಂದಾಗಿದೆ. ಅಲ್ಲದೇ ಈ ಸಂಬಂಧ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಅಧಿಕಾರಿಗಳು ಬಂದಿದ್ದಾರೆ. ಕೂಡಲೇ ಈ ಯೋಜನೆಯನ್ನು ವಾಪಸ್ ಪಡೆದುಕೊಳ್ಳಬೇಕು. ಬೇರೆ ಕಡೆಗೆ ಇದನ್ನು ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಪಂ ಸದಸ್ಯೆ ಸರಸ್ವತಿ ಪಾಟೀಲ ಸೇರಿದಂತೆ ತಾಪಂ, ಗ್ರಾಪಂ ಸದಸ್ಯರು ಹಾಗೂ ತುರಮುರಿ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.