ಗ್ರಾಮಸ್ಥರಿಂದ ಬೆಳಗಾವಿ ಲೋಕಸಭೆ ಉಪಚುನಾವಣೆಯ ಮತದಾನ ಬಹಿಷ್ಕಾರ
ಗ್ರಾಮಗಳ ಸ್ಥಳಾಂತರ ಬೇಡಿಕೆಗೆ ಸ್ಪಂದಿಸದ ಸರ್ಕಾರ! ಮನವೊಲಿಕೆಗೂ ಜಗ್ಗದೆ ಬಿಗಿಪಟ್ಟು
Team Udayavani, Apr 18, 2021, 5:59 PM IST
ರಾಮದುರ್ಗ: ಗ್ರಾಮಗಳ ಸ್ಥಳಾಂತರಕ್ಕೆ ಸ್ಪಂದಿಸದ ಸರಕಾರದ ಕ್ರಮವನ್ನು ಖಂಡಿಸಿ ತಾಲೂಕಿನ ಚಿಕ್ಕತಡಸಿ ಹಾಗೂ ಹಿರೇತಡಸಿ ಗ್ರಾಮಸ್ಥರು ಶನಿವಾರ ನಡೆದ ಬೆಳಗಾವಿ ಲೋಕಸಭೆ ಉಪಚುನಾವಣೆಯ ಮತದಾನವನ್ನು ಬಹಿಷ್ಕರಿಸಿದರು.
ಮಲಪ್ರಭಾ ನದಿ ದಂಡೆಯಲ್ಲಿರುವ ಈ ಗ್ರಾಮಗಳು ಪದೇ ಪದೇ ಪ್ರವಾಹಕ್ಕೆ ತುತ್ತಾಗಿ ಜನತೆ ತೀವ್ರ ಸಂಕಷ್ಠ ಎದುರಿಸುವಂತಾಗಿದ್ದು, ಗ್ರಾಮಗಳ ಶಾಶ್ವತ ಸ್ಥಳಾಂತರಕ್ಕೆ ಸರಕಾರ ಕ್ರಮ ತೆಗೆದುಕೊಳ್ಳುವಲ್ಲಿ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು. 2006ರಲ್ಲಿ ಉಂಟಾದ ಪ್ರವಾಹದ ಸಂದರ್ಭದಲ್ಲಿಯೇ ಗ್ರಾಮಗಳನ್ನು ಸ್ಥಳಾಂತರ ಮಾಡಲು ಆಗ್ರಹಿಸಲಾಗಿದೆ.
2019, 2020ರಲ್ಲಿ ಮತ್ತೆ ಎರಡು ಬಾರಿ ಪ್ರವಾಹ ಉಂಟಾದ ಪರಿಣಾಮ ತಿಂಗಳಾನುಗಟ್ಟಲೇ ಅಲೆದಾಡುವ ದುಸ್ಥಿತಿ ಗ್ರಾಮಸ್ಥರಿಗೆ ಎದುರಾಗಿತ್ತು. ಪ್ರವಾಹದಲ್ಲಿ ಮನೆಗಳು ಬಿದ್ದು, ವಾಸಿಸಲು ಸೂರು ಇಲ್ಲದ ವಾತಾವರಣ ನಿರ್ಮಾಣವಾಗಿದ್ದು, ಸರಕಾರ ಮಾತ್ರ ಇಲ್ಲಿಯವರೆಗೂ ಸಂತ್ರಸ್ತರ ಗೋಳು ಆಲಿಸುತ್ತಿಲ್ಲ. ಗ್ರಾಮಗಳ ಸ್ಥಳಾಂತರಕ್ಕೆ ಗ್ರಾಮಸ್ಥರು ತಮ್ಮ ಜಮೀನುಗಳನ್ನು ನೀಡಲು ಒಪ್ಪಿಕೊಂಡು ಸ್ಥಳಾಂತರಕ್ಕೆ ಬೇಕಾದ ಎಲ್ಲ ದಾಖಲೆಗಳನ್ನು ತಾಲೂಕಾಡಳಿತ, ಜಿಲ್ಲಾಡಳಿತದ ಮೂಲಕ ಸರಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿಗಳ ವರೆಗೆ ತಲುಪಿಸಿ ವರ್ಷಗಳು ಕಳೆಯುತ್ತಿದ್ದರೂ ಸರಕಾರದಿಂದ ಯಾವುದೇ ಉತ್ತರ ದೊರೆತಿಲ್ಲ. ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳದಿದ್ದರೆ ಮುಂಬರುವ ಎಲ್ಲ ಚುನಾವಣೆಗಳನ್ನು ಬಹಿಷ್ಕರಿಸಲಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಫಲ ಕೊಡದ ಮನವೊಲಿಕೆ ಯತ್ನ: ಬಹಿಷ್ಕಾರದ ಸುದ್ಧಿ ತಿಳಿಯುತ್ತಿದ್ದಂತೆ ಸಹಾಯಕ ಚುನಾವಣಾಧಿ ಕಾರಿ ಅಶೋಕ ಗುರಾಣಿ, ತಹಶೀಲ್ದಾರ್ ಎ.ಡಿ. ಅಮರವಾದಗಿ, ಪ್ರೊಬೆಷನರಿ ಎಸಿ ಅಭಿಷೇಕ ವಿ., ಡಿವೈಎಸ್‌ಪಿ ರಾಮನಗೌಡ ಹಟ್ಟಿ ಸೇರಿದಂತೆ ಹಲವರು ಗ್ರಾಮಕ್ಕೆ ಆಗಮಿಸಿ ಗ್ರಾಮಸ್ಥರ ಮನವೊಲಿಕೆಗೆ ಯತ್ನಿಸಿದರು. ಬೇಡಿಕೆ ಈಡೇರಿಸುವ ಭರವಸೆ ನೀಡಿದರು. ಗ್ರಾಮಸ್ಥರು ತಮ್ಮ ಪಟ್ಟು ಸಡಿಲಿಸದೇ ಮತದಾನ ಕೇಂದ್ರ 229 ಮತ್ತು 229-ಎ ಎರಡು ಮತಗಟ್ಟೆಗಳಲ್ಲಿ ಯಾರೊಬ್ಬರೂ ಮುಂಜಾನೆಯಿಂದ ಸಂಜೆವರೆಗೂ ಮತದಾನ ಮಾಡದೇ ಇರುವುದು ಕಂಡು ಬಂತು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಸೋಮರಡ್ಡಿ ಗೊಂದಿ, ಈರಪ್ಪ ಹರನಟ್ಟಿ, ಭೀಮಪ್ಪ ಹರನಟ್ಟಿ, ವಿರೂಪಾಕ್ಷಗೌಡ ಕುಲಕರ್ಣಿ, ಶಿವಪ್ಪ ಹರನಟ್ಟಿ, ಹಣಮಂತ ಹಳ್ಳಿ, ಬಸವರಾಜ ಖಾನಾಪುರ, ಪುಂಡಲೀಕ ಹಳ್ಳಿ, ಶೇಖರಗೌಡ ಪಾಟೀಲ, ಬಸನಗೌಡ ಪಾಟೀಲ, ರಾಮಣ್ಣ ಜಾಧವ, ರಮೇಶ ಜಾಧವ, ಕಲ್ಲನಗೌಡ ಪಾಟೀಲ, ನಾಗನಗೌಡ ಕುಲಕರ್ಣಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.