ಮತ ಜಾಗೃತಿಗೆ ಬೆಳ್ಳಂಬೆಳಗ್ಗೆ ವಾಕಥಾನ್ ಜಾಥಾ
Team Udayavani, Apr 6, 2019, 2:34 PM IST
ಬೆಳಗಾವಿ: ಜಿಲ್ಲಾ ಸ್ವೀಪ್ ಸಮಿತಿ ಬೆಳಗಾವಿ ಮತ್ತು ಬೆಳಗಾವಿ ವೊಟ್ಸ್ ಶೇ. 100 ಆಶ್ರಯದಲ್ಲಿ ಶುಕ್ರವಾರ ನಗರದ ಸಿಪಿಎಡ್ ಮೈದಾನದಿಂದ ವಾಕಥಾನ್ ನಡೆಯಿತು.
ಸಿಪಿಎಡ್ ಮೈದಾನದಿಂದ ಆರಂಭವಾದ ವಾಕಥಾನ್ ವೆಂಗುರ್ಲಾ ರಸ್ತೆ, ಹನುಮಾನ ನಗರ, ಜಾಧವ ನಗರ ಮಾರ್ಗವಾಗಿ ಸಂಚರಿಸಿ ಸಿಪಿಎಡ್ ಮೈದಾನದಲ್ಲಿ ಮುಕ್ತಾಯಗೊಂಡಿತು. ವಾಕಥಾನ್ ದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಸುಮಾರು 600ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.
ವಾಕ್‌ಥಾನ್‌ಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಪಂಚಾಯತ ಸಿಇಒ ಡಾ| ರಾಜೇಂದ್ರ ಕೆ.ವಿ., ಮತದಾರರು ಆಮಿಷಕ್ಕೆ ಒಳಗಾಗದೇ ನೈತಿಕ ಮತದಾನ ಮಾಡಲು ಮತ್ತು ಚುನಾವಣಾ
ಅಕ್ರಮದ ಬಗ್ಗೆ ಸಿ ವಿಜಿಲ್ ಆ್ಯಪ್‌ನಲ್ಲಿ ಮಾಹಿತಿ ಸಲ್ಲಿಸಬೇಕು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ದೂರು ಸಲ್ಲಿಸಿದ
100 ನಿಮಿಷದೊಳಗಾಗಿ ದೂರಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ದಂಡು ಮಂಡಳಿ ಸಿಇಒ ದಿವ್ಯಾ ಹೊಸೂರ, ಪ್ರೊಬೇಷನರಿ ಐಎಎಸ್ ಅಧಿ ಕಾರಿ ಭಂವರಸಿಂಗ್ ಮೀನಾ, ಜಿಲ್ಲಾ ಸ್ವೀಪ್ ಐಕಾನ್ ಮಧು ಮರಾಠೆ ಭಾಗವಹಿಸಿದ್ದರು. ಇವಿಎಂ ಮತ್ತು ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿತ್ತು. ವಾಕಥಾನ್‌ದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಬೆಳಗಾವಿ ವೊಟ್ಸ್ 100% ತಂಡದ ಚೈತನ್ಯ ಕುಲಕರ್ಣಿ, ಸಚಿನಸಬಿ°ಸ್, ಮಯೂರ ಶಿವಲಕರ, ಕಿರಣ ನಿಪ್ಪಾಣಿಕರ,ಮುಕುಲ್ ಚೌಧರಿ, ಪ್ರವೀಣ ಪವಾರ, ಕೀರ್ತಿ ಟೆಂಬೆ, ಆನಂದ ಬುಕ್ಕೆಬಾಗ, ವಿಕ್ರಾಂತ ಕಾಲಕುಂದ್ರಿಕರ, ಡಾ| ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಅಪ್ಪಾಸಾಹೇಬ ನರಟ್ಟಿ, ಸ್ವೀಪ್
ಸಹಾಯಕ ಅಧಿಕಾರಿ ರವಿ ಭಜಂತ್ರಿ,ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಸಿ.ಬಿ. ರಂಗಯ್ಯ, ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ನಾಮದೇವ ಬಿಲಕರ, ತಾಲೂಕು ಯೋಜನಾಧಿಕಾರಿ ಪಿ.ಪಿ. ದೇಶಪಾಂಡೆ, ಡಾ| ಶಶಿಧರ ನಾಡಗೌಡ, ಎ.ಪಿ. ಬಸನಾಳ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.