ಬೆಳಗಾವಿ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ವಾರ್ ರೂಂ ಸ್ಥಾಪನೆ: ಡಿಸಿ
ಕೋವಿಡ್ ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮ! ಪ್ರತಿದಿನ ತಾಲೂಕಿಗೆ 500 ಜನರ ಕೋವಿಡ್ ಪರೀಕ್ಷೆ ಗುರಿ
Team Udayavani, Apr 21, 2021, 7:03 PM IST
ಬೆಳಗಾವಿ: ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲೆಯ ಪ್ರತಿ ತಾಲೂಕು ಮಟ್ಟದಲ್ಲಿ ಸ್ಥಳೀಯ ಅಧಿ ಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಿಕೊಂಡು ಕೋವಿಡ್ -19 ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಡಿಸಿ ಡಾ| ಕೆ. ಹರೀಶಕುಮಾರ್ ಸೂಚನೆ ನೀಡಿದ್ದಾರೆ.
ಕೋವಿಡ್-19 ಮಾರ್ಗಸೂಚಿ ಅನುಷ್ಠಾನಕ್ಕೆ ಸಂಬಂಧಿ ಸಿದಂತೆ ಬೈಲಹೊಂಗಲ, ಕಿತ್ತೂರು ಹಾಗೂ ಖಾನಾಪುರ ತಾಲೂಕುಗಳಿಗೆ ಮಂಗಳವಾರ ಭೇಟಿ ನೀಡಿ ಅ ಧಿಕಾರಿಗಳ ಜತೆ ಅವರು ಸಭೆ ನಡೆಸಿದರು. ತಾಲೂಕು ಮಟ್ಟದಲ್ಲಿ ತಹಶೀಲ್ದಾರರು, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿ ಕಾರಿಗಳು, ಆರೋಗ್ಯಾ ಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾ ಧಿಕಾರಿಗಳು ಹಾಗೂ ಪೊಲೀಸ್ ಅ ಧಿಕಾರಿಗಳನ್ನೊಳಗೊಂಡ ತಂಡಗಳನ್ನು ರಚಿಸಿಕೊಂಡು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕೋವಿಡ್-19 ತಪಾಸಣೆ, ಸೋಂಕಿತರ ಪತ್ತೆಹಚ್ಚುವಿಕೆ ಹಾಗೂ ಚಿಕಿತ್ಸೆಗೆ ಮತ್ತು ಕಾಲಕಾಲಕ್ಕೆ ಸರ್ಕಾರ ಪ್ರಕಟಿಸುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ತಂಡಗಳು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ವಾರ್ ರೂಮ್ ಸ್ಥಾಪನೆಗೆ ನಿರ್ದೇಶನ:
ಕೋವಿಡ್ ಸೋಂಕಿತರ ಮಾಹಿತಿ ಸಂಗ್ರಹ, ವಿನಿಮಯ ಮತ್ತು ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ತಾಲೂಕು ಹಾಗೂ ಜಿಲ್ಲಾಮಟ್ಟದ ಅ ಧಿಕಾರಿಗಳ ನಡುವೆ ಮಾಹಿತಿ ವಿನಿಮಯಕ್ಕಾಗಿ ಪ್ರತಿ ತಾಲೂಕು ಮಟ್ಟದಲ್ಲಿ ವಾರ್ ರೂಮ್ ಆರಂಭಿಸಬೇಕು ಎಂದು ನಿರ್ದೇಶನ ನೀಡಿದರು. ಈ ರೀತಿಯ ವಾರ್ ರೂಮ್ ಸ್ಥಾಪಿಸುವುದರಿಂದ ಕೋವಿಡ್-19 ಸೋಂಕು ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಾಕಷ್ಟು ಅನುಕೂಲವಾಗಲಿದೆ. ತಾಲೂಕು ಮಟ್ಟದ ಅಧಿ ಕಾರಿಗಳ ನೇತƒತ್ವದಲ್ಲಿ ಈ ವಾರ್ ರೂಮ್ ಕಾರ್ಯನಿರ್ವಹಿಸಬೇಕು. ಪ್ರತಿದಿನದ ಸಮಗ್ರ ಮಾಹಿತಿಯನ್ನು ಜಿಲ್ಲಾ ಕೇಂದ್ರಕ್ಕೆ ಕಳಿಸಿದರೆ ಒಟ್ಟಾರೆ ಜಿಲ್ಲೆಯ ಪರಿಸ್ಥಿತಿ ಮೇಲೆ ನಿಗಾ ವಹಿಸಲು ಹಾಗೂ ಅಗತ್ಯವಿರುವ ಕಡೆಗೆ ಹೆಚ್ಚಿನ ಗಮನಹರಿಸಬಹುದು ಎಂದು ಜಿಲ್ಲಾ ಧಿಕಾರಿ ತಿಳಿಸಿದರು.
ನಿತ್ಯ 500 ಜನರ ತಪಾಸಣೆ ಗುರಿ:
ಪ್ರತಿ ತಾಲೂಕಿನಲ್ಲಿ ಪ್ರತಿದಿನ ಕನಿಷ್ಠ ಐದುನೂರು ಜನರ ಕೋವಿಡ್-19 ತಪಾಸಣೆಗೆ ಗುರಿ ನಿಗದಿಪಡಿಸಲಾಗಿದೆ. ಕೋವಿಡ್-19 ತಪಾಸಣೆ ನಡೆಸಿ ಸೋಂಕಿತರನ್ನು ಪತ್ತೆ ಮಾಡಿ ಅವರನ್ನು ಪ್ರತ್ಯೇಕವಾಗಿರಿಸುವುದರಿಂದ ಮಾತ್ರ ಸೋಂಕು ಹರಡುವಿಕೆಯನ್ನು ನಿಯಂತ್ರಿಸಬಹುದು. ಹೀಗಾಗಿ ಪ್ರತಿ ತಾಲೂಕುಗಳಲ್ಲೂ ತಪಾಸಣೆ ಹೆಚ್ಚಿಸಲು ಸೂಚನೆ ನೀಡಲಾಗಿದೆ. ಮುಂದಿನ ಒಂದು ವಾರದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಿಗೂ ಭೇಟಿ ನೀಡಿ ಪರಿಸ್ಥಿತಿಯನ್ನು ತಾವೇ ಖುದ್ದಾಗಿ ಪರಿಶೀಲಿಸುವುದಾಗಿ ಜಿಲ್ಲಾ ಧಿಕಾರಿಗಳು ತಿಳಿಸಿದ್ದಾರೆ.
ಆಯಾ ತಾಲೂಕಿನ ತಹಶೀಲ್ದಾರರು, ತಾಪಂ ಕಾರ್ಯನಿರ್ವಾಹಕ ಅ ಧಿಕಾರಿಗಳು, ಆರೋಗ್ಯಾ ಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾ ಧಿಕಾರಿಗಳು ಮತ್ತು ಪೊಲೀಸ್ ಅ ಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.