ಭತ್ತದ ಗದ್ದೆಯಲ್ಲಿ ಇನ್ನೂ ಕಡಿಮೆಯಾಗಿಲ್ಲ ನೀರು

ಇಂದ್ರಾಣಿ ಸೇರಿದಂತೆ ವಿವಿಧ ಭತ್ತದ ಬೆಳೆಗಳು ಹಾನಿಗೀಡಾಗಿವೆ. ನೀರು ನಿಂತು ಕೆಲವು ಕಡೆಗೆ ಬೆಳೆ ಕೊಳೆತಿವೆ.

Team Udayavani, Nov 20, 2021, 3:50 PM IST

ಭತ್ತದ ಗದ್ದೆಯಲ್ಲಿ ಇನ್ನೂ ಕಡಿಮೆಯಾಗಿಲ್ಲ ನೀರು

ಬೆಳಗಾವಿ: ಮಳೆಯ ಅಬ್ಬರಕ್ಕೆ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಭತ್ತದ ಬೆಳೆಯಲ್ಲಿ ನಿಂತಿರುವ ನೀರು ಇನ್ನೂ ಕಡಿಮೆಯಾಗಿಲ್ಲ. ಹೀಗಾಗಿ ಬೆಳೆ ಸಂಪೂರ್ಣ ಹಾನಿಗೀಡಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಅಕಾಲಿಕ ಮಳೆಯಿಂದಾಗಿ ಬೆಳೆಯಲ್ಲಿ ನೀರು ನಿಂತು ರೈತರು ನಷ್ಟ ಅನುಭವಿಸಿದ್ದಾರೆ. ಬಹುತೇಕ ಕಡೆಗಳಲ್ಲಿ ಕೊಯ್ಲು ಮಾಡಿದ್ದ ಭತ್ತಕ್ಕೆ ನೀರು ನುಗ್ಗಿದೆ. ಕಟಾವಿಗೆ ಬಂದ ಭತ್ತ ಸಂಪೂರ್ಣ ಜಲಾವೃತಗೊಂಡಿದೆ. ಜಲಾವೃತಗೊಂಡ ಭತ್ತದ ಬಣವೆಗಳ ನೀರಿನ ಮಟ್ಟ ಕಡಿಮೆ ಆಗಿಲ್ಲ.

ಭತ್ತ ಕೊಯ್ಲು ಮಾಡಿ ಜಮೀನಿನಲ್ಲಿಯೇ ಒಣಗಲು ಬಿಡಲಾಗಿತ್ತು. ಇನ್ನೇನು ರಾಶಿ ಮಾಡಲು ರೈತರು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಅಕಾಲಿಕ ಮಳೆ ರೈತರ ಬದುಕಿಗೆ ಕೊಳ್ಳೆ ಇಟ್ಟಿದೆ. ಭತ್ತ ರಾಶಿ ಮಾಡಿ ಚೀಲ ತುಂಬಿ ಇಡಬೇಕಾಗಿತ್ತು. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಅನಗೋಳ, ಯಳ್ಳೂರು, ವಡಗಾಂವಿ, ಮಚ್ಛೆ, ಹಲಗಾ, ಬಸವನ ಕುಡಚಿ, ಕಲಖಾಂಬ, ಮುಚ್ಚಂಡಿ, ಅಷ್ಟೇ, ಚಂದಗಡ, ಕಣಬರ್ಗಿ, ಕಂಗ್ರಾಳಿ ಕೆ.ಎಚ್‌., ಕಂಗ್ರಾಳಿ ಬಿ.ಕೆ. ಸೇರಿದಂತೆ ವಿವಿಧ ಕಡೆ ಬೆಳೆದ ಭತ್ತ ಹಾನಿಗೀಡಾಗಿದೆ. ಹೊಲದಲ್ಲಿ ಕಾಲು ಇಡಲಾರದಂತ ಸ್ಥಿತಿ ಇದೆ. ಕಳೆದ ರಾತ್ರಿಯಿಂದ ಮಳೆ ಪ್ರಮಾಣ ಕಡಿಮೆ ಆಗಿದ್ದರೂ ಇನ್ನೂ ನೀರು ಮಾತ್ರ ಇಂಗಿಲ್ಲ. ಬೆಳಗಾವಿ ಬಾಸಮತಿ, ಇಂದ್ರಾಣಿ ಸೇರಿದಂತೆ ವಿವಿಧ ಭತ್ತದ ಬೆಳೆಗಳು ಹಾನಿಗೀಡಾಗಿವೆ. ನೀರು ನಿಂತು ಕೆಲವು ಕಡೆಗೆ ಬೆಳೆ ಕೊಳೆತಿವೆ.

ಶುಕ್ರವಾರ ಬೆಳಗ್ಗೆಯಿಂದ ಮಳೆ ಪ್ರಮಾಣ ಕಡಿಮೆ ಆಗಿದ್ದು, ಜಿಟಿಜಿಟಿ ಮಳೆ ಸುರಿಯುತ್ತಿದೆ. ಬೆಳಗಾವಿ, ಖಾನಾಪುರ, ಕಿತ್ತೂರು ತಾಲುಕು ಸೇರಿದಂತೆ ವಿವಿಧ ಕಡೆಗಳಲ್ಲಿ ಮಳೆ ಆಗುತ್ತಿದೆ.

ನೀರಲ್ಲಿ ಕುಳಿತು ರೈತರ ಅರೆಬೆತ್ತಲೆ ಪ್ರತಿಭಟನೆ: ಇಲ್ಲಿಯ ಹಲಗಾ-ಮಚ್ಛೆ ಬೆ„ಪಾಸ್‌ ರಸ್ತೆ ನಿರ್ಮಾಣ ವಿರೋಧಿ ಸಿ ರೈತರು ನೀರು ತುಂಬಿಕೊಂಡಿರುವ ಹೊಲದಲ್ಲಿಯೇ ಕುಳಿತುಕೊಂಡು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಒಂದೆರಡು ಅಡಿವರೆಗೆ ನೀರು ಜಮೀನಿನಲ್ಲಿ ನಿಂತಿದ್ದು, ಅದರಲ್ಲಿಯೇ ಕುಳಿತುಕೊಂಡು ರೈತರು ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆ„ಪಾಸ್‌ ರಸ್ತೆ ನಿರ್ಮಾಣ ಮಾಡುತ್ತಿರುವುದರಿಂದ ಹೊಲಗಳಲ್ಲಿ ನೀರು ನಿಂತಿದೆ. ಸುತ್ತಲೂ ಸುಮಾರು ಅರ್ಧ ಕಿ.ಮೀ. ಗೂ ಹೆಚ್ಚು ದೂರದ ವರೆಗೆ ನೀರು ತುಂಬಿಕೊಂಡಿದ್ದರಿಂದ ಭಾರೀ ಪ್ರಮಾಣದಲ್ಲಿ ಹಾನಿಯಾಗಿದೆ. ಇಲ್ಲಿಯ ಬಳ್ಳಾರಿ ನಾಲಾ ನೀರು ಹರಿದು ಭತ್ತದ ಬೆಳೆಯಲ್ಲಿ ನಿಂತಿದೆ. ಈಗ ಸ್ವಲ್ಪ ಪ್ರಮಾಣದಲ್ಲಿ ನೀರು ಕಡಿಮೆಯಾಗಿದ್ದರೂ ಇನ್ನೂ ತೇವಾಂಶ ಮಾತ್ರ ಇಳಿಕೆ ಆಗಿಲ್ಲ.

ಟಾಪ್ ನ್ಯೂಸ್

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

3-ct-ravi

ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.