15 ಹಳ್ಳಿಗಳಿಗೆ ಜಲಧಾರೆ ಯೋಜನೆ ನೀರು
•105 ಕೋಟಿ ವೆಚ್ಚ •ಐಟಿ ಪಾರ್ಕ್; ರೆಪ್ಲಿಕಾ ಪಾರ್ಕ್ ನಿರ್ಮಾಣ
Team Udayavani, May 15, 2019, 12:05 PM IST
ಬೆಳಗಾವಿ: ದಕ್ಷಿಣ ಕ್ಷೇತ್ರದ 15 ಹಳ್ಳಿಗಳಲ್ಲಿ ಹಲವಾರು ವರ್ಷಗಳಿಂದ ವಿಪರೀತ ನೀರಿನ ಸಮಸ್ಯೆ ಇದ್ದು, ಇದಕ್ಕೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸುಮಾರು 105 ಕೋಟಿ ರೂ. ವೆಚ್ಚದಲ್ಲಿ ಜಲಧಾರೆ ಯೋಜನೆಯಡಿ ನೀರಿನ ಸಮಸ್ಯೆಗೆ ಮುಕ್ತಿ ನೀಡಲಾಗುತ್ತಿದೆ ಎಂದು ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೀರನವಾಡಿ, ಮಚ್ಛೆ, ಧಾಮಣೆ ಹಾಗೂ ಯಳ್ಳೂರು ಗ್ರಾಪಂ ವ್ಯಾಪ್ತಿಯ 15 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಇದಕ್ಕಾಗಿ ಖಾನಾಪುರದಿಂದ ನೀರು ಪೂರೈಸುವ ಯೋಜನೆಗಾಗಿ ಕರ್ನಾಟಕ ನೀರಾವರಿ ನಿಗಮದಿಂದ ಪ್ರಸ್ತಾವನೆಗೆ ಮಂಜೂರಾತಿ ಪಡೆಯಲಾಗುತ್ತಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ನಗರದಲ್ಲಿ ಹೆರಿಟೆಜ್ ಪಾರ್ಕ್ 3ನೇ ಹಂತದಲ್ಲಿ ಅಭಿವೃದ್ಧಿ ಪಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ನಗರದಲ್ಲಿ ಐಟಿ ಪಾರ್ಕ್ ನಿರ್ಮಾಣ ಹಾಗೂ ದೇಶಕ್ಕಾಗಿ ಹೋರಾಡಿದ ಮಹಾನ್ ನಾಯಕರ ರೆಪ್ಲಿಕಾ ಪಾರ್ಕ್ ನಿರ್ಮಾಣಕ್ಕಾಗಿ ವಿಧಾನಸಭೆ ಅಧಿವೇಶನದಲ್ಲಿ ಖಾಸಗಿ ನಿರ್ಣಯ ಮಂಡಿಸಿ ಸರ್ಕಾರದ ಗಮನಕ್ಕೆ ತರಲಾಗುವುದು. ಐಟಿ ಪಾರ್ಕ್ ನಿರ್ಮಾಣವಾದರೆ ಇಡೀ ಉತ್ತರ ಕರ್ನಾಟಕದಲ್ಲಿಯೇ ಅತ್ಯಂತ ಮಹತ್ವದ ಪಾತ್ರ ವಹಿಸಲಿದ್ದು, ಸುಮಾರು 40 ಸಾವಿರ ಜನರಿಗೆ ಉದ್ಯೋಗವಕಾಶ ಸಿಗಲಿದೆ ಎಂದು ವಿವರಿಸಿದರು.
ನೇಕಾರಿಕೆ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಜವಳಿ ಪಾರ್ಕ್, ಆಧುನಿಕ ಟೆಕ್ಸಟೈಲ್ ಟ್ರೇನಿಂಗ್ ಸೆಂಟರ್ ಹಾಗೂ ಕ್ಲಸ್ಟರ್ ಮಾದರಿಯ ವರ್ಕ್ ಕಮ್ ರೆಸಿಡೆನ್ಸಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಗರದಲ್ಲಿ ಶಾಪಿಂಗ್ ಉತ್ಸವ ಏರ್ಪಡಿಸುವ ಯೋಜನೆ ರೂಪಿಸಲಾಗಿದೆ ಎಂದರು.
10 ಕೋಟಿ ರೂ. ವೆಚ್ಚದ ಅನುದಾನದಲ್ಲಿ ನಗರದ ವಿವಿಧ ರಸ್ತೆಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. 2 ಕೋಟಿ ರೂ. ವೆಚ್ಚದಲ್ಲಿ ನಾಥ ಪೈ ವೃತ್ತದಿಂದ ಬ್ಯಾಂಕ್ ಆಫ್ ಇಂಡಿಯಾ ವರೆಗಿನ ರಸ್ತೆಗೆ ಯು.ಜಿ. ಕೇಬಲ್ ಮತ್ತು ಅಲಂಕಾರಿಕ ಬೀದಿ ದೀಪಗಳ ಅಳವಡಿಕೆ, ಸರ್ಕಾರಿ ಶಾಲಾ ಕೊಠಡಿಗಳ ನಿರ್ಮಾಣ, ನವೀಕರಣಕ್ಕೆ 1.74 ಕೋಟಿ ರೂ., 12.94 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿಗಳ ವಸತಿ ಗೃಹಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.