ವಿವಿಧತೆಯಲ್ಲಿ ಏಕತೆ ಸಾರುವ ದೇಶ ನಮ್ಮದು
ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರೆಯಲ್ಲಿ ಶಾಸಕ ಬಾಲಚಂದ್ರ-ಸರ್ವೋತ್ತಮ-ರಾಹುಲ ಜಾರಕಿಹೊಳಿ ಭಾಗಿ
Team Udayavani, May 17, 2022, 12:59 PM IST
ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಸೋಮವಾರ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ ಶ್ರದ್ಧೆ, ಭಕ್ತಿಯನ್ನು ಇಟ್ಟುಕೊಂಡು ನಿರಂತರವಾಗಿ ದೇವರ ಸ್ಮರಣೆಯಲ್ಲಿ ಇರುತ್ತಾರೆ.ತಮ್ಮ ಕಷ್ಟ-ಕಾರ್ಪಣ್ಯಗಳ ನಿವಾರಣೆಗೆ ದೇವರಲ್ಲಿ ಮೊರೆ ಹೋಗುತ್ತಾರೆಂದು ತಿಳಿಸಿದರು.
ಗಣೇಶವಾಡಿ ಗ್ರಾಮಸ್ಥರು ಮೊದಲಿನಿಂದಲೂ ನಮ್ಮ ಕುಟುಂಬದ ಬಗ್ಗೆ ಅಪಾರ ಅಭಿಮಾನ ಇಟ್ಟುಕೊಂಡವರು. ನಮಗೆ ಪ್ರತಿ ಹಂತದಲ್ಲೂ ಬೆನ್ನೆಲುಬಾಗಿ ನಿಂತವರು. ಕಳೆದ ಎರಡು ದಶಕಗಳಿಂದ ಈ ಕ್ಷೇತ್ರದ ಜನರೊಂದಿಗೆ ನಿಕಟ ಬಾಂಧವ್ಯವನ್ನಿಟ್ಟುಕೊಂಡು 18 ವರ್ಷಗಳಿಂದ ಈ ಭಾಗದ ಪ್ರತಿನಿಧಿಯಾಗಿ ಗಣೇಶವಾಡಿ ಗ್ರಾಮದ ಅಭಿವೃದ್ಧಿಗೆ ಸರ್ಕಾರದ ಹಲವಾರು ಜನೋಪಯೋಗಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಗ್ರಾಮಸ್ಥರ ಒಗ್ಗಟ್ಟಿನ ಸಂಘಟನೆಯಿಂದಾಗಿ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡಿದ್ದು, ಲಕ್ಷೀದೇವಿಯ ಕೃಪೆಯಿಂದ ಎಲ್ಲರಿಗೂ ಒಳ್ಳೆಯದಾಗಲಿ. ಮಳೆ-ಬೆಳೆ ಚೆನ್ನಾಗಿ ಬಂದು ಸಮೃದ್ಧಿ ಹೊಂದಲಿ ಎಂದು ಅವರು ಆಶಿಸಿದರು.
ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿರುವ ಲಕ್ಷ್ಮೀದೇವಿ ದೇವಸ್ಥಾನಕ್ಕೆ ತೆರಳಿ ದೇವಿಯ ಆಶೀರ್ವಾದ ಪಡೆದರು.
ಬೆಂಗಳೂರು ಸಹಕಾರ ಮಾರಾಟ ಮಹಾಮಂಡಳಿ ಉಪಾಧ್ಯಕ್ಷ ಬಸಗೌಡ ಪಾಟೀಲ(ನಾಗನೂರ), ಯುವ ನಾಯಕ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ, ಪ್ರಭಾಶುಗರ್ ಅಧ್ಯಕ್ಷ ಅಶೋಕ ಪಾಟೀಲ, ಪ್ರಭಾಶುಗರ್ ನಿರ್ದೇಶಕರಾದ ಬಸಗೌಡ ಪಾಟೀಲ(ಕಲ್ಲೋಳಿ), ಲಕ್ಷ್ಮಣ ಗಣಪ್ಪಗೋಳ, ಶಿವಲಿಂಗ ಪೂಜೇರಿ, ಮಾಳಪ್ಪ ಜಾಗನೂರ, ಎಪಿಎಂಸಿ ಮಾಜಿ ಅಧ್ಯಕ್ಷ ಶ್ರೀಪತಿ ಗಣೇಶವಾಡಿ, ಮದನ ದೇಶಪಾಂಡೆ, ನ್ಯಾಯವಾದಿ ಸುರೇಶ ಜಾಧವ, ಅರಭಾವಿ ಪಿಕೆಪಿಎಸ್ ಅಧ್ಯಕ್ಷ ಹಣಮಂತ ಚಿಪ್ಪಲಕಟ್ಟಿ, ಕೆಂಚಪ್ಪ ಪಾಟೀಲ, ಹಣಮಂತ ಜಾಧವ, ಬಸವರಾಜ ಮಾಳ್ಯಾಗೋಳ, ಬಾಳಪ್ಪ ಗಣೇಶವಾಡಿ, ಗ್ರಾಪಂ ಅಧ್ಯಕ್ಷೆ ಯಲ್ಲವ್ವ ತಳವಾರ, ಬಾಳೇಶ ಜಾಧವ, ಮಹಾದೇವ ತುಕ್ಕಾನಟ್ಟಿ, ಸಿದ್ರಾಮ ಮೂಲಿಮನಿ, ಗ್ರಾಮ ಪಂಚಾಯತ ಸದಸ್ಯರು, ಸುತ್ತಮುತ್ತಲಿನ ಪ್ರಮುಖರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಅವರನ್ನು ಗ್ರಾಮಸ್ಥರು ಸತ್ಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.