ಬಿಎಸ್‌ವೈ ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್ ಗೆ ಕರೆ ತರುತ್ತೇವೆ: ಎಂ.ಬಿ. ಪಾಟೀಲ್
Team Udayavani, Jul 16, 2021, 3:43 PM IST
ಬೆಳಗಾವಿ: ಬಿಎಸ್ ಯಡಿಯೂರಪ್ಪ ಬೆಂಬಲಿತ ಲಿಂಗಾಯತ ನಾಯಕರನ್ನು ನಿಶ್ಚಿತವಾಗಿ ಕಾಂಗ್ರೆಸ್ ಗೆ ಕರೆ ತರುತ್ತೇವೆ ಎಂದು ಎಂ.ಬಿ. ಪಾಟೀಲ್ ಹೇಳಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಸಮುದಾಯದಲ್ಲಿ ಯಡಿಯೂರಪ್ಪ ಬಹಳ ಎತ್ತರದ ನಾಯಕರು. ಮುಖ್ಯಮಂತ್ರಿ ಆಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೂ ಪ್ರಕಾಶ್ ಹುಕ್ಕೇರಿ, ಎ.ಬಿಪಾಟೀಲ್ ರಂತಹ ಹಿರಿಯ ಲಿಂಗಾಯತ ನಾಯಕರಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯತ ನಾಯಕರಿಗೆ ಸ್ಥಾನಮಾನ ನೀಡುವ ಬಗ್ಗೆ ಹೈಕಮಾಂಡ್‌ಗೆ ಮನವರಿಕೆ ಮಾಡಿದ್ದೇವೆ ಎಂದರು.
ಇದನ್ನೂ ಓದಿ:ದರ್ಶನ್- ಇಂದ್ರಜಿತ್ ಪ್ರಕರಣದಲ್ಲಿ ನನ್ನ ಹೆಸರು ತಳಕು ಹಾಕುವ ಕೆಲಸ ಮಾಡಬೇಡಿ: ಕುಮಾರಸ್ವಾಮಿ
ವೀರೇಂದ್ರ ಪಾಟೀಲ್ ರಿದ್ದಾಗ ಕಾಂಗ್ರೆಸ್ 180 ಸೀಟ್ ಪಡೆದುಕೊಂಡಿತ್ತು. ವೀರೇಂದ್ರ ಪಾಟೀಲ್ ರ ಬಳಿಕ ನಮಗೆ ಸ್ವಲ್ಪ ಹಿನ್ನಡೆಯಾಗಿದೆ. ಅದನ್ನು ಮರಳಿ ಪಡೆಯಲು ಎಲ್ಲಾ ನಾಯಕರು ಒಗ್ಗೂಡಿ ಸಾಮೂಹಿಕವಾಗಿ ಪ್ರಯತ್ನ ಮಾಡುತ್ತೇವೆ. ಹಿರಿಯರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾಪಸ್ ಕರೆತರುವ ಕೆಲಸ ನಡೆಯಲಿದೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯತ ಸಮುದಾಯದ ನಾಯಕರಿಗೆ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಈಗಾಗಲೇ ಹೈಕಮಾಂಡ್‌ಗೆ ಮನವರಿಕೆ ಮಾಡಿದ್ದೇನೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ, ವೇಣುಗೋಪಾಲ್ ಜೊತೆ ಮಾತನಾಡಿದ್ದೀವಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಜೊತೆಯೂ ಮಾತನಾಡುತ್ತೇನೆ. ಲಿಂಗಾಯತ ಸಮುದಾಯಕ್ಕೂ ಪ್ರಾತಿನಿಧ್ಯ ಸಿಗಬೇಕು ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.